Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:7 - ಪರಿಶುದ್ದ ಬೈಬಲ್‌

7 ಆಗ ಬೆಜೆಕ್‌ನ ಅರಸನು, “ನಾನು ಎಪ್ಪತ್ತು ಮಂದಿ ಅರಸರ ಕೈಕಾಲಿನ ಹೆಬ್ಬೆರಳುಗಳನ್ನು ಕತ್ತರಿಸಿ ಬಿಟ್ಟಿದ್ದೆ. ಆ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ತಿನ್ನುವಂತೆ ಮಾಡಿದ್ದೆ. ನಾನು ಅವರಿಗೆ ಮಾಡಿದಂತೆಯೇ ದೇವರು ಈಗ ನನಗೆ ಮಾಡುತ್ತಿದ್ದಾನೆ” ಎಂದು ಹೇಳಿದನು. ಯೆಹೂದ್ಯರು ಬೆಜೆಕ್‌ನ ಅರಸನನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದರು; ಅವನು ಅಲ್ಲಿ ಸತ್ತುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಅದೋನೀಬೆಜೆಕನು, “ಕೈ ಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ” ಅಂದನು. ಅವರು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬರಲು ಅವನು ಅಲ್ಲಿ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಅದೋನೀಬೆಜೆಕನು, “ಎಪ್ಪತ್ತು ಮಂದಿ ಅರಸರ ಕೈಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿದೆ; ನನ್ನ ಊಟದ ಮೇಜಿನ ಕೆಳಗೆ ಬೀಳುತ್ತಿದ್ದ ಚೂರುಪಾರುಗಳನ್ನು ಅವರು ತಿನ್ನುತ್ತಿದ್ದರು; ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾರೆ,” ಎಂದನು. ಅವನನ್ನು ಜೆರುಸಲೇಮಿಗೆ ಕರೆತರಲು ಅವನು ಅಲ್ಲೇ ನಿಧನನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಅದೋನೀಬೆಜೆಕನು - ನಾನು ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿ ಬಿಟ್ಟ ಎಪ್ಪತ್ತು ಮಂದಿ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು; ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ ಅಂದನು. ಅವರು ಅವನನ್ನು ಯೆರೂಸಲೇವಿುಗೆ ತೆಗೆದುಕೊಂಡು ಬರಲು ಅಲ್ಲಿ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಅದೋನೀಬೆಜೆಕನು, “ನಾನು ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು, ನನ್ನ ಮೇಜಿನ ಕೆಳಗೆ ಬೀಳುವ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ, ದೇವರು ನನಗೆ ಮಾಡಿದ್ದಾರೆ,” ಎಂದನು. ಅವರು ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಲ್ಲಿ ಅವನು ಮರಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:7
16 ತಿಳಿವುಗಳ ಹೋಲಿಕೆ  

ಆದರೆ ಸಮುವೇಲನು ಅಗಾಗನಿಗೆ, “ನಿನ್ನ ಕತ್ತಿಯು ಅನೇಕ ತಾಯಂದಿರಿಗೆ ಮಕ್ಕಳಿಲ್ಲದಂತೆ ಮಾಡಿದೆ. ಆದ್ದರಿಂದ ಈಗ ನಿನ್ನ ತಾಯಿಗೆ ಮಕ್ಕಳಿಲ್ಲದಂತಾಯಿತು” ಎಂದು ಹೇಳಿ ಅಗಾಗನನ್ನು ಗಿಲ್ಗಾಲಿನ ಯೆಹೋವನ ಸನ್ನಿಧಿಯಲ್ಲೇ ಕಡಿದುಹಾಕಿದನು.


ಸೆರೆ ಒಯ್ಯುವವನು ಸೆರೆ ಒಯ್ಯಲ್ಪಡುವನು. ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲ್ಲಲ್ಪಡುವನು. ಆದ್ದರಿಂದ ದೇವರ ಪರಿಶುದ್ಧ ಜನರು ತಾಳ್ಮೆಯನ್ನೂ ನಂಬಿಕೆಯನ್ನೂ ಹೊಂದಿರಬೇಕು.


ಹೌದು, ಇತರರಿಗೆ ನೀವು ಕರುಣೆ ತೋರಬೇಕು. ಇಲ್ಲವಾದರೆ ದೇವರು ತೀರ್ಪು ನೀಡುವಾಗ ನಿಮಗೂ ಕರುಣೆ ತೋರನು. ಕರುಣೆ ತೋರುವವನು ದೇವರ ನ್ಯಾಯತೀರ್ಪಿನಲ್ಲಿ ಭಯವಿಲ್ಲದೆ ಇರುವನು.


ಧರ್ಮಶಾಸ್ತ್ರದ ಆಜ್ಞಾವಿಧಿಗಳಿಗನುಸಾರವಾಗಿ ಯಾವುದು ಸರಿ, ಯಾವುದು ತಪ್ಪು ಎಂಬುದನ್ನು ತಮ್ಮ ಹೃದಯಗಳು ಬಲ್ಲವೆಂದು ಅವರು ತಮ್ಮ ನಡತೆಯಿಂದಲೇ ತೋರ್ಪಡಿಸುತ್ತಾರೆ. ಇದು ಸತ್ಯವೆಂಬುದನ್ನು ಅವರ ಮನಸ್ಸಾಕ್ಷಿಯು ಖಚಿತಪಡಿಸುತ್ತದೆ. ಅವರ ಅಂತಃಪ್ರಜ್ಞೆಯೇ ಅವರನ್ನು ದೋಷಿಗಳೆಂದೋ ಇಲ್ಲವೆ ನಿರ್ದೋಷಿಗಳೆಂದೋ ತೀರ್ಮಾನಿಸುತ್ತದೆ.


ಆ ಜನರು ನಿನ್ನ ಪರಿಶುದ್ಧ ಜನರ ಮತ್ತು ನಿನ್ನ ಪ್ರವಾದಿಗಳ ರಕ್ತವನ್ನು ಸುರಿಸಿದರು. ಈಗ ನೀನು ಅವರಿಗೆ ಕುಡಿಯಲು ರಕ್ತವನ್ನೇ ನೀಡಿರುವೆ. ಅವರು ಇದಕ್ಕೆ ಪಾತ್ರರಾಗಿದ್ದಾರೆ.”


ನೀವು ಯುದ್ಧಮಾಡಿ ಇತರರಿಂದ ಸುಲಿದುಕೊಳ್ಳುತ್ತೀರಿ. ಆದರೆ ಅವರು ನಿಮ್ಮಿಂದ ಏನೂ ಕದ್ದುಕೊಳ್ಳಲಿಲ್ಲ. ನೀವು ಜನರಿಗೆ ವಿರುದ್ಧವಾಗಿ ತಿರುಗುತ್ತೀರಿ. ಆದರೆ ಅವರು ನಿಮಗೆ ವಿರುದ್ಧವಾಗಲಿಲ್ಲ. ಆದ್ದರಿಂದ ನೀವು ಕದ್ದುಕೊಳ್ಳುವದನ್ನು ಬಿಟ್ಟಾಗ ಇತರರು ನಿಮ್ಮದನ್ನು ಕದ್ದುಕೊಳ್ಳುತ್ತಾರೆ. ನೀವು ಇತರರಿಗೆ ಹಾನಿ ಮಾಡುವದನ್ನು ನಿಲ್ಲಿಸಿದಾಗ ಇತರರು ನಿಮಗೆ ಹಾನಿ ಮಾಡುವರು. ಆಗ ನೀವು ಹೀಗೆ ಹೇಳುವಿರಿ:


ಆ ಟಗರನ್ನು ವಧಿಸಿ ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊ. ಆ ರಕ್ತವನ್ನು ಆರೋನ ಮತ್ತು ಅವನ ಪುತ್ರರ ಬಲಗಿವಿಯ ತುದಿಗೆ ಹಚ್ಚು. ಅದಲ್ಲದೆ ಅವರ ಬಲಗೈಗಳ ಹೆಬ್ಬೆರಳುಗಳಿಗೂ ಸ್ವಲ್ಪ ರಕ್ತವನ್ನು ಹಚ್ಚು. ಸ್ವಲ್ಪ ರಕ್ತವನ್ನು ಅವರ ಬಲಗಾಲಿನ ಹೆಬ್ಬೊಟ್ಟಿಗೂ ಹಚ್ಚು. ಬಳಿಕ ಉಳಿದ ರಕ್ತವನ್ನು ಯಜ್ಞವೇದಿಕೆಯ ನಾಲ್ಕು ಕಡೆಗಳಿಗೆ ಚೆಲ್ಲು.


ಬೆಜೆಕ್‌ನ ಅರಸನು ತಪ್ಪಿಸಿಕೊಳ್ಳಲು ಪ್ರಯತ್ನ ಮಾಡಿದನು. ಆದರೆ ಯೆಹೂದ್ಯರು ಅವನನ್ನು ಬೆನ್ನಟ್ಟಿ ಹಿಡಿದು ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟರು.


ದೇವರು ಶೆಕೆಮ್ ನಗರದ ಜನರನ್ನೂ ಸಹ ಅವರು ಮಾಡಿದ ದುಷ್ಕೃತ್ಯಗಳಿಗಾಗಿ ದಂಡಿಸಿದನು. ಹೀಗೆ ಯೆರುಬ್ಬಾಳನ (ಗಿದ್ಯೋನ) ಕಿರಿಯ ಮಗನಾದ ಯೋತಾಮನು ನುಡಿದಂತೆಯೇ ಆಯಿತು.


ಯೆಹೋವನಾದ ನಾನು ಅವನಿಗೆ ಹೀಗೆ ಹೇಳಿದೆನೆಂದು ತಿಳಿಸು: ‘ಅಹಾಬನೇ! ನೀನು ನಾಬೋತನನ್ನು ಕೊಂದುಹಾಕಿದೆ. ಈಗ ನೀನು ಅವನ ದ್ರಾಕ್ಷಿತೋಟವನ್ನು ತೆಗೆದುಕೊಳ್ಳುತ್ತಿರುವೆ. ಆದ್ದರಿಂದ ನಾನಿದನ್ನು ನಿನಗೆ ಹೇಳುತ್ತೇನೆ! ನಾಬೋತನು ಸತ್ತ ಸ್ಥಳದಲ್ಲಿಯೇ ನೀನು ಸಹ ಸಾಯುವೆ. ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲಿಯೇ ನಿನ್ನ ರಕ್ತವನ್ನೂ ನೆಕ್ಕುತ್ತವೆ!’”


ಆ ಸಮಯದಲ್ಲಿ, ನಿನಗೆ ಕೇಡುಮಾಡುವವರನ್ನು ಶಿಕ್ಷಿಸುವೆನು. ಗಾಯಗೊಂಡಿರುವ ನಿನ್ನ ಜನರನ್ನು ರಕ್ಷಿಸುವೆನು. ತಮ್ಮ ದೇಶದಿಂದ ದೂರಕ್ಕೆ ಚದರಿಸಲ್ಪಟ್ಟ ಜನರನ್ನು ನಾನು ಹಿಂದಕ್ಕೆ ಕರೆದುಕೊಂಡು ಬರುವೆನು. ನಾನು ಅವರನ್ನು ಪ್ರಸಿದ್ಧಿಪಡಿಸುವೆನು. ಎಲ್ಲಾ ಜನರು ಅವರನ್ನು ಹೊಗಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು