ನ್ಯಾಯಸ್ಥಾಪಕರು 10:1 - ಪರಿಶುದ್ದ ಬೈಬಲ್1 ಅಬೀಮೆಲೆಕನು ಸತ್ತ ತರುವಾಯ ಇಸ್ರೇಲರನ್ನು ರಕ್ಷಿಸಲು ಯೆಹೋವನು ಮತ್ತೊಬ್ಬ ನ್ಯಾಯಾಧೀಶನನ್ನು ಕಳುಹಿಸಿದನು. ಅವನ ಹೆಸರು ತೋಲ. ತೋಲನು ಪೂವನ ಮಗನು. ಪೂವನು ದೋದೋ ಎಂಬವನ ಮಗನು. ತೋಲನು ಇಸ್ಸಾಕಾರ್ ಕುಲಕ್ಕೆ ಸೇರಿದವನೂ ಶಾಮೀರ ನಗರದ ವಾಸಿಯೂ ಆಗಿದ್ದನು. ಶಾಮೀರ ನಗರವು ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅಬೀಮೆಲೆಕನ ಮರಣದ ತರುವಾಯ ಇಸ್ಸಾಕಾರ್ ಕುಲದ ಪೂವನ ಮಗನೂ, ದೋದೋವಿನ ಮೊಮ್ಮಗನೂ ಆಗಿದ್ದ ತೋಲನು ಇಸ್ರಾಯೇಲ್ಯರನ್ನು ರಕ್ಷಿಸಿವುದಕ್ಕೋಸ್ಕರ ಎದ್ದನು. ಅವನು ಎಫ್ರಾಯೀಮ್ ಬೆಟ್ಟದ ಸೀಮೆಯ ಶಾಮೀರೆಂಬ ಊರಲ್ಲಿ ವಾಸವಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅಬೀಮೆಲೆಕನ ತರುವಾಯ ಇಸ್ಸಾಕಾರ್ ಕುಲದ ಪೂವನ ಮಗನೂ ದೋದೋವಿನ ಮೊಮ್ಮಗನೂ ಆಗಿದ್ದ ತೋಲನು ಎದ್ದು ಇಸ್ರಯೇಲರನ್ನು ಕಾಪಾಡಿದನು. ಅವನು ಎಫ್ರಯಿಮ್ ಮಲೆನಾಡಿನ ಶಾಮೀರವೆಂಬ ಊರಲ್ಲಿ ವಾಸವಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅಬೀಮೆಲೆಕನ ತರುವಾಯ ಇಸ್ಸಾಕಾರ್ ಕುಲದ ಪೂವನ ಮಗನೂ ದೋದೋವಿನ ಮೊಮ್ಮಗನೂ ಆಗಿದ್ದ ತೋಲನು ಎದ್ದು ಇಸ್ರಾಯೇಲ್ಯರನ್ನು ರಕ್ಷಿಸಿದನು. ಅವನು ಎಫ್ರಾಯೀಮ್ ಬೆಟ್ಟದ ಸೀಮೆಯ ಶಾಮೀರೆಂಬ ಊರಲ್ಲಿ ವಾಸವಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅಬೀಮೆಲೆಕನ ತರುವಾಯ ಇಸ್ಸಾಕಾರನ ಕುಲದ ದೋದೋವಿನ ಮಗನಾದ ಪೂವನ ಮಗನಾದ ತೋಲನು ಇಸ್ರಾಯೇಲರನ್ನು ರಕ್ಷಿಸುವುದಕ್ಕೆ ಎದ್ದನು. ಅವನು ಎಫ್ರಾಯೀಮ್ ಬೆಟ್ಟದ ಸೀಮೆಯ ಶಾಮೀರೆಂಬ ಊರಲ್ಲಿ ವಾಸಮಾಡಿದನು. ಅಧ್ಯಾಯವನ್ನು ನೋಡಿ |