ನ್ಯಾಯಸ್ಥಾಪಕರು 10:12 - ಪರಿಶುದ್ದ ಬೈಬಲ್12 ಚೀದೋನ್ಯರು, ಅಮಾಲೇಕ್ಯರು, ಮಿದ್ಯಾನ್ಯರು ನಿಮ್ಮನ್ನು ಪೀಡಿಸಿದಾಗ ನನಗೆ ಮೊರೆಯಿಟ್ಟಿರಿ. ಅವರಿಂದಲೂ ನಾನು ನಿಮ್ಮನ್ನು ರಕ್ಷಿಸಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಮೊದಲಾದ ಜನಾಂಗಗಳು ನಿಮ್ಮನ್ನು ಪೀಡಿಸಿದಾಗ ನೀವು ನನಗೆ ಮೊರೆಯಿಟ್ಟಿರಿ; ನಾನು ಅವರಿಂದ ನಿಮ್ಮನ್ನು ಬಿಡಿಸಿದರೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇವೇ ಮೊದಲಾದ ಜನಾಂಗಗಳು ನಿಮ್ಮನ್ನು ಪೀಡಿಸಿದಾಗ ನೀವು ನನಗೆ ಮೊರೆಯಿಟ್ಟಿರಿ; ನಾನು ಅವುಗಳಿಂದ ನಿಮ್ಮನ್ನು ಬಿಡಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇವೇ ಮೊದಲಾದ ಜನಾಂಗಗಳು ನಿಮ್ಮನ್ನು ಪೀಡಿಸಿದಾಗ ನೀವು ನನಗೆ ಮೊರೆಯಿಟ್ಟಿರಿ; ನಾನು ಅವುಗಳಿಂದ ನಿಮ್ಮನ್ನು ಬಿಡಿಸಿದರೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಸೀದೋನ್ಯ, ಅಮಾಲೇಕ್ಯ, ಮಾವೋನ್ಯ ಈ ಜನಾಂಗಗಳು ನಿಮ್ಮನ್ನು ಪೀಡಿಸಿದಾಗ ನೀವು ನನಗೆ ಮೊರೆಯಿಟ್ಟಿರಿ; ನಾನು ಅವುಗಳಿಂದ ನಿಮ್ಮನ್ನು ತಪ್ಪಿಸಿಬಿಡಲಿಲ್ಲವೋ? ಅಧ್ಯಾಯವನ್ನು ನೋಡಿ |
ಯೆಹೂದದ ಅರಸನಾಗಿದ್ದ ಹಿಜ್ಕೀಯನ ಕಾಲದಲ್ಲಿ ಇದು ಆಯಿತು. ಇವರು ಗೆದೋರಿಗೆ ಬಂದು ಹಾಮನ ಸಂತತಿಯವರೊಂದಿಗೆ ಯುದ್ಧಮಾಡಿ ಅವರ ಗುಡಾರಗಳನ್ನು ನಾಶಮಾಡಿದರು. ಅಲ್ಲದೆ ಮೆಗೂನ್ಯರ ವಿರುದ್ಧವಾಗಿ ಯುದ್ಧಮಾಡಿ ಅಲ್ಲಿ ನೆಲೆಸಿದರು. ಇವರು ಮೆಗೂನ್ಯರನ್ನೆಲ್ಲಾ ನಾಶಮಾಡಿದರು. ಇಂದಿನವರೆಗೂ ಮೆಗೂನ್ಯರಲ್ಲಿ ಯಾರೂ ಉಳಿದಿಲ್ಲ. ಹೀಗೆ ಆ ಸ್ಥಳದಲ್ಲಿ ಅವರು ನೆಲೆಸಿದರು; ಯಾಕೆಂದರೆ ಅವರ ಪಶುಗಳಿಗೆ ಅಲ್ಲಿ ಸಾಕಷ್ಟು ಹುಲ್ಲಿತ್ತು.