ನ್ಯಾಯಸ್ಥಾಪಕರು 10:13 - ಪರಿಶುದ್ದ ಬೈಬಲ್13 ಆದರೆ ನೀವು ನನ್ನನ್ನು ತ್ಯಜಿಸಿದಿರಿ. ನೀವು ಬೇರೆ ದೇವರುಗಳನ್ನು ಪೂಜಿಸಿದಿರಿ. ಆದ್ದರಿಂದ ನಾನು ಮತ್ತೆ ನಿಮ್ಮನ್ನು ರಕ್ಷಿಸುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನೀವು ಪುನಃ ನನ್ನನ್ನು ಬಿಟ್ಟು, ಅನ್ಯದೇವತೆಗಳನ್ನು ಸೇವಿಸುತ್ತಾ ಬಂದಿರಿ. ಆದುದರಿಂದ ನಾನು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆದರೂ ನೀವು ಮತ್ತೆ ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಪೂಜಿಸುತ್ತಾ ಬಂದಿರಿ; ಆದುದರಿಂದ ನಾನು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನೀವು ತಿರಿಗಿ ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸುತ್ತಾ ಬಂದಿರಿ; ಆದದರಿಂದ ನಾನು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದರೂ ನೀವು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸುತ್ತಾ ಬಂದಿರಿ; ಆದ್ದರಿಂದ ಇನ್ನು ನಾನು ನಿಮ್ಮನ್ನು ರಕ್ಷಿಸುವುದಿಲ್ಲ. ಅಧ್ಯಾಯವನ್ನು ನೋಡಿ |
ಆಗ ಪ್ರವಾದಿಯಾದ ಶೆಮಾಯನು, ಶೀಶಕನಿಗೆ ಹೆದರಿಕೊಂಡು ಜೆರುಸಲೇಮಿನಲ್ಲಿ ಒಟ್ಟಾಗಿ ಸೇರಿ ಬಂದಿದ್ದ ರೆಹಬ್ಬಾಮನ ಮತ್ತು ಇಸ್ರೇಲಿನ ಪ್ರಧಾನರ ಬಳಿಗೆ ಬಂದು, “ಯೆಹೋವನು ಹೇಳುವುದೇನೆಂದರೆ, ರೆಹಬ್ಬಾಮನೇ, ನೀನು ಮತ್ತು ಯೆಹೂದದ ಜನರು ನನ್ನನ್ನು ತೊರೆದಿದ್ದೀರಿ. ನನ್ನ ಕಟ್ಟಳೆಗಳನ್ನು ಅನುಸರಿಸಲು ನಿರಾಕರಿಸಿದ್ದೀರಿ. ಈಗ ನಾನು ನಿಮಗೆ ಸಹಾಯ ಮಾಡದೆ ಶೀಶಕನನ್ನು ಎದುರಿಸಲು ನಿಮ್ಮನ್ನು ಬಿಟ್ಟುಬಿಡುವೆನು” ಎಂದು ಹೇಳಿದನು.
ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.