ನ್ಯಾಯಸ್ಥಾಪಕರು 10:15 - ಪರಿಶುದ್ದ ಬೈಬಲ್15 ಆದರೆ ಇಸ್ರೇಲರು ಯೆಹೋವನಿಗೆ, “ನಾವು ಪಾಪ ಮಾಡಿದ್ದೇವೆ. ನಿನಗೆ ಸರಿಯೆನಿಸಿದಂತೆ ಮಾಡು. ಆದರೆ ದಯವಿಟ್ಟು ಇಂದು ನಮ್ಮನ್ನು ರಕ್ಷಿಸು” ಎಂದು ಪ್ರಾರ್ಥಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವರು ತಿರುಗಿ ಯೆಹೋವನಿಗೆ, “ನಾವು ಪಾಪ ಮಾಡಿದ್ದೇವೆ; ನಿನಗೆ ಸರಿಕಾಣುವ ಪ್ರಕಾರ ನಮಗೆ ಮಾಡು; ಆದರೆ ಈ ಸಾರಿ ಹೇಗೂ ನಮ್ಮನ್ನು ರಕ್ಷಿಸಬೇಕು” ಎಂದು ಮೊರೆಯಿಟ್ಟು ಅನ್ಯದೇವತೆಗಳನ್ನು ತಮ್ಮಲ್ಲಿಂದ ತೆಗೆದು ಹಾಕಿ ಯೆಹೋವನನ್ನು ಸೇವಿಸುವವರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಇಸ್ರಯೇಲರು ಮರಳಿ ಸರ್ವೇಶ್ವರನಿಗೆ, “ಪಾಪ ಮಾಡಿದ್ದೇವೆ; ನಿಮಗೆ ಸರಿ ತೋರಿದಂತೆ ನಮಗೆ ಮಾಡಿ; ಆದರೆ ಈ ಸಾರಿ ಹೇಗೂ ನಮ್ಮನ್ನು ರಕ್ಷಿಸಬೇಕು,” ಎಂದು ಮೊರೆಯಿಟ್ಟರು. ಅನ್ಯದೇವತೆಗಳನ್ನು ಹೊರಗೆ ಹಾಕಿ ಸರ್ವೇಶ್ವರನನ್ನು ಪೂಜಿಸತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇಸ್ರಾಯೇಲ್ಯರು ತಿರಿಗಿ ಯೆಹೋವನಿಗೆ - ನಾವು ಪಾಪ ಮಾಡಿದ್ದೇವೆ; ನಿನಗೆ ಸರಿ ಕಾಣುವ ಪ್ರಕಾರ ನಮಗೆ ಮಾಡು; ಆದರೆ ಈ ಸಾರಿ ಹೇಗೂ ನಮ್ಮನ್ನು ರಕ್ಷಿಸಬೇಕು ಎಂದು ಮೊರೆಯಿಟ್ಟು ಅನ್ಯದೇವತೆಗಳನ್ನು ತಮ್ಮಲ್ಲಿಂದ ತೆಗೆದುಹಾಕಿ ಯೆಹೋವನನ್ನು ಸೇವಿಸುವವರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಇಸ್ರಾಯೇಲರು ಯೆಹೋವ ದೇವರಿಗೆ, “ನಾವು ಪಾಪಮಾಡಿದೆವು. ನೀವು ನಿಮಗೆ ಒಳ್ಳೆಯದಾಗಿ ತೋರುವುದನ್ನೆಲ್ಲಾ ನಮಗೆ ಮಾಡಿರಿ. ಆದರೆ ಈ ಹೊತ್ತು ನಮ್ಮನ್ನು ರಕ್ಷಿಸಿರಿ,” ಎಂದು ಬೇಡಿಕೊಂಡರು. ಅಧ್ಯಾಯವನ್ನು ನೋಡಿ |
ಇಸ್ರೇಲರೆಲ್ಲರು ಮಿಚ್ಪೆಯಲ್ಲಿ ಒಟ್ಟುಗೂಡಿದರು. ಅವರು ನೀರನ್ನು ತೆಗೆದುಕೊಂಡು ಬಂದು ಯೆಹೋವನ ಮುಂದೆ ಅದನ್ನು ಸುರಿದರು. ಈ ರೀತಿ ಅಂದು ಅವರು ಉಪವಾಸವನ್ನು ಆರಂಭಿಸಿದರು. ಅಂದು ಅವರು ಯಾವ ಆಹಾರವನ್ನೂ ತೆಗೆದುಕೊಳ್ಳಲಿಲ್ಲ. ಅಲ್ಲದೆ ಅವರು ತಮ್ಮ ಪಾಪಗಳನ್ನು ಅರಿಕೆ ಮಾಡಿದರು. “ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಅವರು ಹೇಳಿದರು. ಹೀಗಿರಲು, ಸಮುವೇಲನು ಇಸ್ರೇಲರ ನ್ಯಾಯಾಧೀಶನಾಗಿ ಮಿಚ್ಪೆಯಲ್ಲಿ ಸೇವೆ ಸಲ್ಲಿಸಿದನು.