ನ್ಯಾಯಸ್ಥಾಪಕರು 10:4 - ಪರಿಶುದ್ದ ಬೈಬಲ್4 ಯಾಯೀರನಿಗೆ ಮೂವತ್ತು ಗಂಡುಮಕ್ಕಳಿದ್ದರು. ಅವರು ಮೂವತ್ತು ಕತ್ತೆಗಳ ಮೇಲೆ ಸವಾರಿ ಮಾಡುತ್ತಿದ್ದರು. ಆ ಮೂವತ್ತು ಮಂದಿ ಗಂಡುಮಕ್ಕಳು ಗಿಲ್ಯಾದ್ ಪ್ರದೇಶದಲ್ಲಿ ಮೂವತ್ತು ಪಟ್ಟಣಗಳನ್ನು ತಮ್ಮ ಅಧೀನದಲ್ಲಿಟ್ಟುಕೊಂಡಿದ್ದರು. ಅವುಗಳಿಗೆ ಇಂದಿನವರೆಗೂ ಯಾಯೀರನ ಪಟ್ಟಣಗಳೆಂದು ಹೆಸರಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇವನಿಗೆ ಮೂವತ್ತು ಮಂದಿ ಮಕ್ಕಳಿದ್ದರು. ಇವರಿಗೆ ಮೂವತ್ತು ಸವಾರಿ ಕತ್ತೆಗಳೂ, ಗಿಲ್ಯಾದ್ ದೇಶದಲ್ಲಿ ಮೂವತ್ತು ಊರುಗಳೂ ಇದ್ದವು. ಅವುಗಳಿಗೆ ಇಂದಿನ ವರೆಗೂ ಯಾಯೀರನ ಗ್ರಾಮಗಳೆಂದು ಹೆಸರಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇವನಿಗೆ ಮೂವತ್ತು ಮಂದಿ ಮಕ್ಕಳಿದ್ದರು. ಇವರಿಗೆ ಮೂವತ್ತು ಸವಾರಿ ಕತ್ತೆಗಳೂ ಗಿಲ್ಯಾದ್ ದೇಶದಲ್ಲಿ ಮೂವತ್ತು ಊರುಗಳೂ ಇದ್ದವು. ಅವುಗಳಿಗೆ ಇಂದಿನವರೆಗೂ ಯಾಯೀರನ ಗ್ರಾಮಗಳೆಂದು ಹೆಸರಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಇವನಿಗೆ ಮೂವತ್ತು ಮಂದಿ ಮಕ್ಕಳಿದ್ದರು. ಇವರಿಗೆ ಮೂವತ್ತು ಸವಾರೀ ಕತ್ತೆಗಳೂ ಗಿಲ್ಯಾದ್ ದೇಶದಲ್ಲಿ ಮೂವತ್ತು ಊರುಗಳೂ ಇದ್ದವು. ಅವುಗಳಿಗೆ ಇಂದಿನವರೆಗೂ ಯಾಯೀರಿನ ಗ್ರಾಮಗಳೆಂದು ಹೆಸರಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವನಿಗೆ ಮೂವತ್ತು ಕತ್ತೆಗಳ ಮೇಲೆ ಸವಾರಿ ಮಾಡುವ ಮೂವತ್ತು ಮಂದಿ ಪುತ್ರರು ಇದ್ದರು. ಗಿಲ್ಯಾದ್ ದೇಶದಲ್ಲಿ ಮೂವತ್ತು ಪಟ್ಟಣಗಳು ಅವರ ಅಧಿಕಾರದಲ್ಲಿದ್ದವು. ಅವುಗಳಿಗೆ ಈ ದಿನದವರೆಗೂ ಹವೋತ್ ಯಾಯೀರ್ ಎಂಬ ಹೆಸರಿದೆ. ಅಧ್ಯಾಯವನ್ನು ನೋಡಿ |