ನ್ಯಾಯಸ್ಥಾಪಕರು 10:9 - ಪರಿಶುದ್ದ ಬೈಬಲ್9 ಅಮ್ಮೋನಿಯರು ಜೋರ್ಡನ್ ನದಿಯನ್ನು ದಾಟಿ ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್ ಕುಲಗಳ ಜನರೊಡನೆ ಯುದ್ಧ ಮಾಡಿದರು. ಅಮ್ಮೋನಿಯರು, ಇಸ್ರೇಲರಿಗೆ ಅನೇಕ ಕಷ್ಟಗಳನ್ನು ಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇದಲ್ಲದೆ ಅಮ್ಮೋನಿಯರು ಯೊರ್ದನ್ ಹೊಳೆಯನ್ನು ದಾಟಿ, ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್ ಕುಲಗಳೊಡನೆ ಯುದ್ಧಮಾಡಿದ್ದರಿಂದ ಇಸ್ರಾಯೇಲರಿಗೆ ಬಹಳ ಕಷ್ಟವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇದಲ್ಲದೆ ಅಮ್ಮೋನಿಯರು ಜೋರ್ಡನ್ ನದಿಯನ್ನು ದಾಟಿ ಯೆಹೂದ, ಬೆನ್ಯಾಮೀನ್, ಎಫ್ರಯಿಮ್ ಕುಲಗಳೊಡನೆ ಯುದ್ಧಮಾಡಿದ್ದರಿಂದ ಇಸ್ರಯೇಲರು ಬಹಳ ಕಷ್ಟಕ್ಕೀಡಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇದಲ್ಲದೆ ಅಮ್ಮೋನಿಯರು ಯೊರ್ದನ್ ಹೊಳೆಯನ್ನು ದಾಟಿ ಯೆಹೂದ ಬೆನ್ಯಾಮೀನ್ ಎಫ್ರಾಯೀಮ್ ಕುಲಗಳೊಡನೆ ಯುದ್ಧಮಾಡಿದ್ದರಿಂದ ಇಸ್ರಾಯೇಲ್ಯರಿಗೆ ಬಹಳ ಕಷ್ಟವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇದಲ್ಲದೆ ಅಮ್ಮೋನನ ಮಕ್ಕಳು ಯೆಹೂದ ಹಾಗೂ ಬೆನ್ಯಾಮೀನರಿಗೆ ವಿರೋಧವಾಗಿಯೂ, ಎಫ್ರಾಯೀಮರ ಮನೆಗೆ ವಿರೋಧವಾಗಿಯೂ ಯುದ್ಧಮಾಡುವುದಕ್ಕೆ ಯೊರ್ದನನ್ನು ದಾಟಿ ಬಂದರು. ಹೀಗೆ ಇಸ್ರಾಯೇಲಿಗೆ ಬಹು ಸಂಕಟವಾಯಿತು. ಅಧ್ಯಾಯವನ್ನು ನೋಡಿ |
ಸಮುವೇಲನು, “ನನಗೆ ತೊಂದರೆಯನ್ನೇಕೆ ಕೊಡುತ್ತಿರುವೆ? ನೀನು ನನ್ನನ್ನು ನೆಲದ ಮೇಲಕ್ಕೆ ಬರಮಾಡಿದ್ದೇಕೆ?” ಎಂದು ಸೌಲನನ್ನು ಕೇಳಿದನು. ಸೌಲನು, “ನಾನು ತೊಂದರೆಯಲ್ಲಿದ್ದೇನೆ! ಫಿಲಿಷ್ಟಿಯರು ನನ್ನ ವಿರುದ್ಧ ಹೋರಾಡಲು ಬರುತ್ತಿದ್ದಾರೆ; ದೇವರು ನನ್ನನ್ನು ತ್ಯಜಿಸಿದ್ದಾನೆ. ದೇವರು ನನಗೆ ಉತ್ತರವನ್ನೇ ಕೊಡುತ್ತಿಲ್ಲ; ಆತನು ಪ್ರವಾದಿಗಳಿಂದಾಗಲೀ ಕನಸುಗಳಿಂದಾಗಲೀ ನನಗೆ ಉತ್ತರಿಸುತ್ತಿಲ್ಲ. ಆದ ಕಾರಣವೇ ನಾನು ನಿನ್ನನ್ನು ಕರೆದೆನು. ನಾನು ಮಾಡಬೇಕಾದದ್ದನ್ನು ನನಗೆ ತಿಳಿಸು!” ಎಂದನು.