ನ್ಯಾಯಸ್ಥಾಪಕರು 11:10 - ಪರಿಶುದ್ದ ಬೈಬಲ್10 ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ, “ನಾವು ಹೇಳುತ್ತಿರುವ ಎಲ್ಲವನ್ನು ಯೆಹೋವನು ಕೇಳುತ್ತಿದ್ದಾನೆ. ನೀನು ಹೇಳಿದಂತೆಯೇ ಮಾಡುತ್ತೇವೆ ಎಂದು ನಾವು ಮಾತುಕೊಡುತ್ತೇವೆ” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವರು ಅವನಿಗೆ, “ಹಾಗೆಯೇ ಮಾಡುವೆವು; ನಮ್ಮಿಬ್ಬರ ಈ ಮಾತುಗಳಿಗೆ ಯೆಹೋವನೇ ಸಾಕ್ಷಿ” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅವರು ಅವನಿಗೆ, “ಹಾಗೆಯೇ ಮಾಡುತ್ತೇವೆ; ಉಭಯತ್ರರ ಮಾತುಗಳಿಗೆ ಸರ್ವೇಶ್ವರನೇ ಸಾಕ್ಷಿ,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವರು ಅವನಿಗೆ - ಹಾಗೆಯೇ ಮಾಡುವೆವು; ಉಭಯತರ ಮಾತುಗಳಿಗೆ ಯೆಹೋವನೇ ಸಾಕ್ಷಿ ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ, “ನಾವು ಈ ನಿನ್ನ ಮಾತಿನ ಹಾಗೆ ಮಾಡದೆ ಹೋದರೆ, ಯೆಹೋವ ದೇವರು ನಮ್ಮ ಮತ್ತು ನಿನ್ನ ಮಧ್ಯದಲ್ಲಿ ಸಾಕ್ಷಿಯಾಗಿರಲಿ,” ಎಂದರು. ಅಧ್ಯಾಯವನ್ನು ನೋಡಿ |
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.