ನ್ಯಾಯಸ್ಥಾಪಕರು 11:18 - ಪರಿಶುದ್ದ ಬೈಬಲ್18 “ತರುವಾಯ ಇಸ್ರೇಲರು ಮರುಭೂಮಿಯಲ್ಲಿ ಪ್ರಯಾಣ ಮಾಡಿ ಎದೋಮ್ ಮತ್ತು ಮೋವಾಬ್ ದೇಶಗಳ ಮೇರೆಗಳನ್ನು ಸುತ್ತಿ ಬಂದರು. ಇಸ್ರೇಲರು ಮೋವಾಬ್ ದೇಶದ ಪೂರ್ವದಿಕ್ಕಿಗೆ ಪ್ರಯಾಣಮಾಡಿ ಅರ್ನೋನ್ ನದಿಯ ಆಚೆಯ ದಡದಲ್ಲಿ ಇಳಿದುಕೊಂಡರು. ಅವರು ಮೋವಾಬ್ ದೇಶದ ಮೇರೆಯನ್ನು ದಾಟಲಿಲ್ಲ. (ಅರ್ನೋನ್ ನದಿಯು ಮೋವಾಬ್ ದೇಶದ ಮೇರೆಯಾಗಿತ್ತು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅನಂತರ ಅವರು ಅರಣ್ಯದಲ್ಲಿ ಪ್ರಯಾಣಮಾಡಿ ಎದೋಮ್, ಮೋವಾಬ್ ದೇಶಗಳನ್ನು ಸುತ್ತಿಕೊಂಡು ಮೋವಾಬ್ ದೇಶದ ಪೂರ್ವದಿಕ್ಕಿಗೆ ಬಂದು, ಅದರ ಮೇರೆಯಾಗಿರುವ ಅರ್ನೋನ್ ಹೊಳೆಯ ಆಚೆಯಲ್ಲಿ ಇಳಿದುಕೊಂಡರು. ಮೋವಾಬ್ಯರ ಮೇರೆಯೊಳಗೆ ಕಾಲಿಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅನಂತರ ಅವರು ಮರುಭೂಮಿಯಲ್ಲಿ ಪ್ರಯಾಣ ಮಾಡಿ ಎದೋಮ್, ಮೋವಾಬ್ ದೇಶಗಳನ್ನು ಸುತ್ತಿಕೊಂಡು ಮೋವಾಬ್ ದೇಶದ ಪೂರ್ವದಿಕ್ಕಿಗೆ ಬಂದು ಅದರ ಮೇರೆಯಾಗಿರುವ ಅರ್ನೋನ್ ನದಿಯ ಆಚೆಯಲ್ಲಿ ಇಳಿದುಕೊಂಡರು; ಮೋವಾಬ್ಯರ ಮೇರೆಯೊಳಗೆ ಕಾಲು ಇಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅನಂತರ ಅವರು ಅರಣ್ಯದಲ್ಲಿ ಪ್ರಯಾಣಮಾಡಿ ಎದೋಮ್ ಮೋವಾಬ್ ದೇಶಗಳನ್ನು ಸುತ್ತಿಕೊಂಡು ಮೋವಾಬ್ ದೇಶದ ಪೂರ್ವದಿಕ್ಕಿಗೆ ಬಂದು ಅದರ ಮೇರೆಯಾಗಿರುವ ಅರ್ನೋನ್ ಹೊಳೆಯ ಆಚೆಯಲ್ಲಿ ಇಳುಕೊಂಡರು; ಮೋವಾಬ್ಯರ ಮೇರೆಯೊಳಗೆ ಕಾಲಿಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ಮರುಭೂಮಿಯಲ್ಲಿ ನಡೆದು, ಎದೋಮ್ ದೇಶವನ್ನೂ, ಮೋವಾಬ್ ದೇಶವನ್ನೂ ಸುತ್ತಿಕೊಂಡು ಹೋಗಿ, ಮೋವಾಬ್ ದೇಶದ ಪೂರ್ವದಿಕ್ಕಿಗೆ ಬಂದು, ಮೋವಾಬಿನ ಮೇರೆಯೊಳಗೆ ಪ್ರವೇಶಿಸದೆ, ಮೋವಾಬಿನ ಮೇರೆಯಾದ ಅರ್ನೋನಿನ ಆಚೆಯಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿ |