Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:26 - ಪರಿಶುದ್ದ ಬೈಬಲ್‌

26 ಇಸ್ರೇಲರು ಮುನ್ನೂರು ವರ್ಷಗಳಿಂದ ಹೆಷ್ಬೋನ್ ನಗರ ಮತ್ತು ಅದರ ಸುತ್ತಮುತ್ತಲಿನ ಪಟ್ಟಣಗಳಲ್ಲಿಯೂ ಅರೋಯೇರ್ ನಗರ ಮತ್ತು ಅದರ ಸುತ್ತಮುತ್ತಲಿನ ಪಟ್ಟಣಗಳಲ್ಲಿಯೂ ಅರ್ನೋನ್ ನದಿತೀರದ ಎಲ್ಲ ನಗರಗಳಲ್ಲಿಯೂ ಮುನ್ನೂರು ವರ್ಷಗಳಿಂದ ವಾಸಮಾಡುತ್ತಲಿದ್ದಾರೆ. ಈ ನಗರಗಳನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳಲು ನೀವು ಇಷ್ಟು ವರ್ಷ ಏಕೆ ಪ್ರಯತ್ನ ಮಾಡಲಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಇಸ್ರಾಯೇಲರು ಮುನ್ನೂರು ವರ್ಷಗಳಿಂದ ಹೆಷ್ಬೋನ್, ಅರೋಯೇರ್ ಎಂಬ ಪಟ್ಟಣಗಳಲ್ಲಿಯೂ, ಅವುಗಳ ಗ್ರಾಮಗಳಲ್ಲಿಯೂ, ಅರ್ನೋನ್ ತೀರದ ಎಲ್ಲಾ ಪಟ್ಟಣಗಳಲ್ಲಿಯೂ ವಾಸಿಸುತ್ತಿದ್ದಾರಲ್ಲಾ. ಇಷ್ಟು ದಿನಗಳವರೆಗೆ ನೀನು ಅದನ್ನು ಬಿಡಿಸಿಕೊಳ್ಳದೆ ಇದ್ದದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಇಸ್ರಯೇಲರು ಮುನ್ನೂರು ವರ್ಷಗಳಿಂದ ಹೆಷ್ಬೋನ್, ಅರೋಯೇರ್ ಎಂಬ ಪಟ್ಟಣಗಳಲ್ಲೂ ಅವುಗಳ ಗ್ರಾಮಗಳಲ್ಲೂ ಅರ್ನೋನ್ ತೀರದ ಎಲ್ಲಾ ಪಟ್ಟಣಗಳಲ್ಲೂ ವಾಸಿಸುತ್ತಿದ್ದಾರಲ್ಲವೆ? ಇಷ್ಟು ದಿವಸಗಳವರೆಗೆ ನೀನು ಅದನ್ನು ಬಿಡಿಸಿಕೊಳ್ಳದೆ ಇದ್ದದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಇಸ್ರಾಯೇಲ್ಯರು ಮುನ್ನೂರು ವರುಷಗಳಿಂದ ಹೆಷ್ಬೋನ್, ಅರೋಯೇರ್ ಎಂಬ ಪಟ್ಟಣಗಳಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂ ಅರ್ನೋನ್ ತೀರದ ಎಲ್ಲಾ ಪಟ್ಟಣಗಳಲ್ಲಿಯೂ ವಾಸಿಸುತ್ತಿದ್ದಾರಲ್ಲಾ; ಇಷ್ಟು ದಿವಸಗಳವರೆಗೆ ನೀನು ಅದನ್ನು ಬಿಡಿಸಿಕೊಳ್ಳದೆ ಇದ್ದದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಇಸ್ರಾಯೇಲು ಹೆಷ್ಬೋನಿನಲ್ಲಿಯೂ, ಅದರ ಗ್ರಾಮಗಳಲ್ಲಿಯೂ; ಅರೋಯೇರಿನಲ್ಲಿಯೂ, ಅದರ ಗ್ರಾಮಗಳಲ್ಲಿಯೂ; ಅರ್ನೋನಿನ ತೀರವಾದ ಎಲ್ಲಾ ಪಟ್ಟಣಗಳಲ್ಲಿಯೂ, ಮುನ್ನೂರು ವರ್ಷಗಳಿಂದ ವಾಸಿಸಿರುವಾಗ, ಇಷ್ಟರವರೆಗೆ ನೀವು ಅದನ್ನು ಬಿಡಿಸದೆ ಹೋದದ್ದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:26
21 ತಿಳಿವುಗಳ ಹೋಲಿಕೆ  

ನಾವು ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಎಂಬ ಊರನ್ನು ಮತ್ತು ಆ ಕಣಿವೆಯ ಮಧ್ಯದಲ್ಲಿದ್ದ ಇನ್ನೊಂದು ಊರನ್ನು ವಶಪಡಿಸಿಕೊಂಡೆವು. ಅರ್ನೋನ್ ಕಣಿವೆ ಮತ್ತು ಗಿಲ್ಯಾದ್‌ಗಳ ನಡುವೆ ಇರುವ ಎಲ್ಲಾ ಪಟ್ಟಣಗಳನ್ನು ಸೋಲಿಸಲು ಯೆಹೋವನು ಅವಕಾಶ ಮಾಡಿಕೊಟ್ಟನು. ಯಾವ ಪಟ್ಟಣವೂ ನಮಗೆ ಅಸಾಧ್ಯವಾಗಿ ಕಂಡುಬರಲಿಲ್ಲ.


ಅದೇ ವರ್ಷ ಅವರು ಜೋರ್ಡನ್ ನದಿಯ ಪೂರ್ವಕ್ಕಿರುವ ಗಿಲ್ಯಾದಿನಲ್ಲಿದ್ದ ಇಸ್ರೇಲರನ್ನು ನಾಶಮಾಡಿದರು. ಅದು ಮೊದಲು ಅಮೋರಿಯರ ಪ್ರದೇಶವಾಗಿತ್ತು. ಇಸ್ರೇಲರು ಹದಿನೆಂಟು ವರ್ಷಗಳವರೆಗೆ ಕಷ್ಟವನ್ನು ಅನುಭವಿಸಿದರು.


ಅಬೀಮೆಲೆಕನು ಇಸ್ರೇಲರನ್ನು ಮೂರು ವರ್ಷ ಆಳಿದನು.


ಮಿದ್ಯಾನ್ಯರು ಇಸ್ರೇಲರ ಅಧೀನದಲ್ಲಿರಬೇಕಾಯಿತು. ಮಿದ್ಯಾನ್ಯರು ಯಾವ ಹೆಚ್ಚಿನ ತೊಂದರೆಗಳನ್ನು ಕೊಡಲಿಲ್ಲ. ಗಿದ್ಯೋನನು ಬದುಕಿರುವವರೆಗೆ ನಲವತ್ತು ವರ್ಷ ಆ ದೇಶದಲ್ಲಿ ಶಾಂತಿ ನೆಲೆಸಿತ್ತು.


“ಯೆಹೋವನೇ, ನಿನ್ನ ವೈರಿಗಳೆಲ್ಲಾ ಹೀಗೇ ಸಾಯಲಿ; ಆದರೆ ನಿನ್ನನ್ನು ಪ್ರೀತಿಸುವವರೆಲ್ಲರೂ ಬಲವಾಗಿದ್ದು ಉದಯಿಸುವ ಸೂರ್ಯನಂತೆ ಬೆಳಗಲಿ!” ನಲವತ್ತು ವರ್ಷಗಳವರೆಗೆ ದೇಶದಲ್ಲಿ ಶಾಂತಿ ನೆಲೆಸಿತ್ತು.


ಅಂದಿನಿಂದ ಇಸ್ರೇಲರು ಮೋವಾಬ್ಯರನ್ನು ಆಳಲು ಪ್ರಾರಂಭಿಸಿದರು. ಆ ಪ್ರದೇಶದಲ್ಲಿ ಎಂಭತ್ತು ವರ್ಷಗಳವರೆಗೆ ಶಾಂತಿ ನೆಲೆಸಿತು.


ಆದ್ದರಿಂದ ನಲವತ್ತು ವರ್ಷಗಳ ಕಾಲದವರೆಗೆ ಅಂದರೆ ಕೆನಜನ ಮಗನಾದ ಒತ್ನೀಯೇಲನ ಮರಣದವರೆಗೆ ಆ ಪ್ರದೇಶದಲ್ಲಿ ಶಾಂತಿ ನೆಲೆಸಿತ್ತು.


ಯೆಹೋವನು ಇಸ್ರೇಲರ ಶತ್ರುಗಳನ್ನು ಸದೆಬಡೆದು ಅವರಿಗೆ ವಿಶ್ರಾಂತಿಯನ್ನು ಕೊಟ್ಟನು. ಯೆಹೋವನು ಇಸ್ರೇಲನ್ನು ಸುರಕ್ಷಿತಗೊಳಿಸಿದನು. ಅನೇಕ ವರ್ಷಗಳು ಕಳೆದವು. ಯೆಹೋಶುವನು ಬಹಳ ಮುದುಕನಾದನು.


ಅಮೋರಿಯರ ಅರಸನಾದ ಸೀಹೋನನು ಆಳುತ್ತಿದ್ದ ಎಲ್ಲ ಪಟ್ಟಣಗಳು ಆ ಪ್ರದೇಶದಲ್ಲಿದ್ದವು. ಆ ಅರಸನು ಹೆಷ್ಬೋನ್ ನಗರದಲ್ಲಿ ಆಳುತ್ತಿದ್ದನು. ಅಮ್ಮೋನಿಯರು ಮೊದಲು ನೆಲೆಸಿದ್ದ ಪ್ರದೇಶದವರೆಗೆ ಈ ಪ್ರದೇಶ ವಿಸ್ತರಿಸಿತ್ತು.


ಓಗನು ಹೆರ್ಮೋನ್ ಬೆಟ್ಟದ ಮೇಲಿನ ಸೀಮೆ, ಸಲ್ಕಾ ಮತ್ತು ಬಾಷಾನಿನ ಎಲ್ಲ ಪ್ರದೇಶ, ಇವುಗಳನ್ನು ಆಳುತ್ತಿದ್ದನು. ಗೆಷೂರ್ಯರು ಮತ್ತು ಮಾಕತೀ ಜನರು ವಾಸಮಾಡುವ ಪ್ರದೇಶವು ಇವನ ರಾಜ್ಯದ ಮೇರೆಯಾಗಿತ್ತು. ಹೆಷ್ಬೋನಿನ ಅರಸನಾದ ಸೀಹೋನನ ರಾಜ್ಯದ ಮೇರೆಯವರೆಗೆ ಹಬ್ಬಿದ ಗಿಲ್ಯಾದಿನ ಅರ್ಧಪ್ರಾಂತ್ಯವನ್ನು ಕೂಡ ಓಗನು ಆಳುತ್ತಿದ್ದನು.


ಅವರು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನನ್ನು ಸೋಲಿಸಿದರು. ಅವನು ಅರ್ನೋನ್ ನದಿಯ ತೀರದಲ್ಲಿದ್ದ ಅರೋಯೇರ್‌ನಿಂದ ಯಬ್ಬೋಕ್ ನದಿಯವರೆಗಿರುವ ಪ್ರದೇಶವನ್ನು ಆಳುತ್ತಿದ್ದನು. ಅವನ ರಾಜ್ಯವು ಆ ತಗ್ಗು ಪ್ರದೇಶದ ಮಧ್ಯದಿಂದ ಪ್ರಾರಂಭವಾಗುತ್ತಿತ್ತು. ಇದು ಅಮ್ಮೋನಿಯರ ಪ್ರದೇಶಕ್ಕೂ ಮೇರೆಯಾಗಿತ್ತು. ಗಿಲ್ಯಾದಿನ ಅರ್ಧ ಪ್ರದೇಶವು ಸೀಹೋನನ ಆಳ್ವಿಕೆಗೆ ಒಳಗಾಗಿತ್ತು.


ಯೆಹೋಶುವನು ಆ ಅರಸರ ವಿರುದ್ಧ ಬಹುಕಾಲದವರೆಗೆ ಹೋರಾಡಿದನು.


ಹೆಷ್ಬೋನಿನ ಅರಸನಾದ ಸೀಹೋನನಿಗೆ ಸೇರಿದ ಪಟ್ಟಣಗಳನ್ನು ನಾವು ಹೇಗೆ ಧ್ವಂಸ ಮಾಡಿದೆವೋ ಹಾಗೆಯೇ ಈ ಪಟ್ಟಣಗಳನ್ನು ಧ್ವಂಸ ಮಾಡಿ ಸ್ತ್ರೀಯರೂ ಕೂಸುಗಳೂ ಸೇರಿದಂತೆ ಅದರ ನಿವಾಸಿಗಳಲ್ಲಿ ಒಬ್ಬರನ್ನೂ ಬಿಡದೆ ಹತಿಸಿಬಿಟ್ಟೆವು.


ಆಗ ಯೆಹೋವನು ನನಗೆ, ‘ಓಗನಿಗೆ ನೀನು ಭಯಪಡಬೇಡ. ಅವನನ್ನೂ ಅವನ ಜನರನ್ನೂ ಅವನ ದೇಶವನ್ನೂ ನಿನಗೊಪ್ಪಿಸುವೆನು. ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ರಾಜನಾದ ಸೀಹೋನನನ್ನು ಸೋಲಿಸಿದಂತೆಯೇ ಇವನನ್ನೂ ಸೋಲಿಸುವೆ’ ಎಂದು ಆಜ್ಞಾಪಿಸಿದನು.


“ಯೆಹೋವನು ನನಗೆ ಹೇಳಿದ್ದೇನೆಂದರೆ: ‘ಅರ್ನೋನ್ ಕಣಿವೆಯನ್ನು ದಾಟಲು ಸಿದ್ಧಪಡಿಸಿಕೊ. ಅಮೋರಿಯನೂ ಹೆಷ್ಬೋನಿನ ರಾಜನೂ ಆಗಿರುವ ಸೀಹೋನನನ್ನು ಸೋಲಿಸಲು ನಾನು ನಿನಗೆ ಸಹಾಯ ಮಾಡುವೆನು. ಅವನ ರಾಜ್ಯವನ್ನು ನಾನು ನಿನಗೆ ಕೊಡುವೆನು. ಆದುದರಿಂದ ಅವನಿಗೆ ವಿರುದ್ಧವಾಗಿ ಯುದ್ಧಮಾಡಿ ದೇಶವನ್ನು ಸ್ವಾಧೀನಪಡಿಸಿಕೊ.


ಕಾನಾನ್ ನಾಡಿನ ಏಳು ಜನಾಂಗಗಳನ್ನು ನಾಶಮಾಡಿ ತನ್ನ ಜನರಿಗೆ ಆ ನಾಡನ್ನು ಸ್ವಾಸ್ತ್ಯವಾಗಿ ಕೊಟ್ಟನು.


ಅರ್ನೋನ್ ತಗ್ಗಿನ ಸಮೀಪದಲ್ಲಿದ್ದ ಅರೋಯೇರ್‌ನಿಂದ ಮೇದೆಬದವರೆಗಿರುವ ಪ್ರದೇಶ. ಇದು ಇಡೀ ತಪ್ಪಲ ಪ್ರದೇಶವನ್ನು ಮತ್ತು ಆ ತಗ್ಗು ಪ್ರದೇಶದ ಮಧ್ಯದಲ್ಲಿದ್ದ ಊರುಗಳನ್ನು ಒಳಗೊಂಡಿತ್ತು.


ಆ ಪ್ರದೇಶವು ಹೆಷ್ಬೋನಿನವರೆಗೆ ವಿಸ್ತರಿಸಿ ತಪ್ಪಲಪ್ರದೇಶದ ಎಲ್ಲಾ ಊರುಗಳನ್ನೊಳಗೊಂಡಿತ್ತು. ಆ ಊರುಗಳು ಯಾವುವೆಂದರೆ: ದೀಬೋನ್, ಬಾಮೋತ್‌ಬಾಳ್, ಬೇತ್ಬಾಳ್ಮೆಯೋನ್,


“ಅರೋಯೇರಿನವರೇ, ದಾರಿಯ ಮಗ್ಗುಲಲ್ಲಿ ನಿಂತುಕೊಂಡು ನೋಡಿರಿ, ಆ ಗಂಡಸು ಓಡಿಹೋಗುವದನ್ನು ನೋಡಿರಿ. ಆ ಹೆಂಗಸು ಓಡಿಹೋಗುವದನ್ನು ನೋಡಿರಿ. ಏನಾಯಿತೆಂದು ಅವರನ್ನು ಕೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು