ನ್ಯಾಯಸ್ಥಾಪಕರು 11:29 - ಪರಿಶುದ್ದ ಬೈಬಲ್29 ಆಗ ಯೆಹೋವನ ಆತ್ಮವು ಯೆಫ್ತಾಹನ ಮೇಲೆ ಬಂತು. ಯೆಫ್ತಾಹನು ಗಿಲ್ಯಾದನ ಮತ್ತು ಮನಸ್ಸೆಯ ಪ್ರದೇಶಗಳಲ್ಲಿ ಸಂಚರಿಸಿದನು. ಅವನು ಗಿಲ್ಯಾದಿನ ಮಿಚ್ಛೆಗೆ ಬಂದನು. ಗಿಲ್ಯಾದಿನ ಮಿಚ್ಛೆಯ ನಗರದಿಂದ ಅವನು ಅಮ್ಮೋನಿಯರ ಪ್ರದೇಶಕ್ಕೆ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಆಗ ಯೆಹೋವನ ಆತ್ಮವು ಯೆಪ್ತಾಹನ ಮೇಲೆ ಬಂದಿತು. ಅವನು ಗಿಲ್ಯಾದ್ ಪ್ರಾಂತ್ಯ, ಮನಸ್ಸೆಯ ದೇಶ ಇವುಗಳಲ್ಲಿ ಸಂಚರಿಸಿ ತಿರುಗಿ ಗಿಲ್ಯಾದಿನ ಮಿಚ್ಪೆಗೆ ಬಂದು, ಅಲ್ಲಿಂದ ಅಮ್ಮೋನಿಯರ ಮೇಲೆ ಯುದ್ಧಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಆಗ ಸರ್ವೇಶ್ವರನ ಆತ್ಮ ಯೆಪ್ತಾಹನ ಮೇಲೆ ಬಂದಿತು. ಅವನು ಗಿಲ್ಯಾದ್ ಪ್ರಾಂತ್ಯ, ಮನಸ್ಸೆಯ ನಾಡು, ಇವುಗಳಲ್ಲಿ ಸಂಚರಿಸಿ ಮತ್ತೆ ಗಿಲ್ಯಾದಿನ ಮಿಚ್ಫೆಗೆ ಬಂದು ಅಲ್ಲಿಂದ ಅಮ್ಮೋನಿಯರ ಮೇಲೆ ಯುದ್ಧಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಆಗ ಯೆಹೋವನ ಆತ್ಮವು ಯೆಪ್ತಾಹನ ಮೇಲೆ ಬಂದಿತು. ಅವನು ಗಿಲ್ಯಾದ್ ಪ್ರಾಂತ, ಮನಸ್ಸೆಯ ದೇಶ ಇವುಗಳಲ್ಲಿ ಸಂಚರಿಸಿ ತಿರಿಗಿ ಗಿಲ್ಯಾದಿನ ವಿುಚ್ಪೆಗೆ ಬಂದು ಅಲ್ಲಿಂದ ಅಮ್ಮೋನಿಯರ ಮೇಲೆ ಯುದ್ಧಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಆಗ ಯೆಹೋವ ದೇವರ ಆತ್ಮ ಯೆಫ್ತಾಹನ ಮೇಲೆ ಬಂತು. ಅವನು ಗಿಲ್ಯಾದ್, ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ, ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು, ಅಲ್ಲಿಂದ ಅಮ್ಮೋನಿಯರೆದುರಿಗೆ ಹಾದುಹೋದನು. ಅಧ್ಯಾಯವನ್ನು ನೋಡಿ |