Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:33 - ಪರಿಶುದ್ದ ಬೈಬಲ್‌

33 ಅವನು ಅವರನ್ನು ಸೋಲಿಸಿ ಅರೋಯೇರ್ ನಗರದಿಂದ ಮಿನ್ನೀತ್ ನಗರದವರೆಗೆ ಇಪ್ಪತ್ತು ನಗರಗಳನ್ನು ಗೆದ್ದುಕೊಂಡನು. ಆಮೇಲೆ ಅವನು ಅಮ್ಮೋನಿಯರ ಸಂಗಡ ಯುದ್ಧಮಾಡಿ ಅಬೇಲ್‌ಕೆರಾಮೀಮ್ ನಗರವನ್ನು ಗೆದ್ದುಕೊಂಡನು. ಇಸ್ರೇಲರು ಅಮ್ಮೋನಿಯರನ್ನು ಸೋಲಿಸಿದರು. ಅಮ್ಮೋನಿಯರಿಗೆ ಇದೊಂದು ದೊಡ್ಡ ಸೋಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅವನು ಅವರನ್ನು ಸೋಲಿಸಿ ಅರೋಯೇರಿನಿಂದ ಮಿನ್ನೀತಿನ ದಾರಿಯವರೆಗೂ ಆಬೇಲ್ ಕೆರಾಮೀಮಿನವರೆಗೂ ಇಪ್ಪತ್ತು ಪಟ್ಟಣಗಳನ್ನು ಹಾಳುಮಾಡಿಬಿಟ್ಟನು. ಹೀಗೆ ದೊಡ್ಡ ಜಯವಾಗಿ ಅಮ್ಮೋನಿಯರು ಇಸ್ರಾಯೇಲರ ಮುಂದೆ ತಗ್ಗಿಸಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅವನು ಅವರನ್ನು ಸೋಲಿಸಿ ಅರೋಯೇರಿನಿಂದ ಮಿನ್ನೀತಿನ ದಾರಿಯವರೆಗೂ ಅಬೇಲ್ ಕೆರಾಮೀಮಿನವರೆಗೂ ಇಪ್ಪತ್ತು ಪಟ್ಟಣಗಳನ್ನು ಹಾಳುಮಾಡಿದನು. ಹೀಗೆ ದೊಡ್ಡ ಜಯವಾಗಿ, ಅಮ್ಮೋನಿಯರು ಇಸ್ರಯೇಲರಿಗೆ ಶರಣಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅವನು ಅವರನ್ನು ಸೋಲಿಸಿ ಅರೋಯೇರಿನಿಂದ ವಿುನ್ನೀತಿನ ದಾರಿಯವರೆಗೂ ಆಬೇಲ್ ಕೆರಾಮೀವಿುನವರೆಗೂ ಇಪ್ಪತ್ತು ಪಟ್ಟಣಗಳನ್ನು ಹಾಳುಮಾಡಿಬಿಟ್ಟನು. ಹೀಗೆ ದೊಡ್ಡ ಜಯವಾಗಿ ಅಮ್ಮೋನಿಯರು ಇಸ್ರಾಯೇಲ್ಯರ ಮುಂದೆ ತಗ್ಗಿಸಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಯೆಫ್ತಾಹನು ಅವರನ್ನು ಅರೋಯೇರಿನಿಂದ ಮಿನ್ನೀಥಿನ ದಾರಿಯವರೆಗೆ ಮತ್ತು ಆಬೇಲ್ ಕೆರಾಮೀಮಗೆ ಹೋಗುವವರೆಗೆ ಇರುವ ಇಪ್ಪತ್ತು ಪಟ್ಟಣಗಳನ್ನು ಹಾಳುಮಾಡಿದನು. ಹೀಗೆ ದೊಡ್ಡ ಜಯಹೊಂದಿ, ಅಮ್ಮೋನಿಯರು ಇಸ್ರಾಯೇಲರಿಗೆ ಶರಣಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:33
5 ತಿಳಿವುಗಳ ಹೋಲಿಕೆ  

“‘ಇಸ್ರೇಲ್ ಮತ್ತು ಯೆಹೂದ ದೇಶದವರು ನಿನ್ನೊಂದಿಗೆ ವ್ಯಾಪಾರ ಮಾಡಿದರು. ಅವರು ನಿನ್ನ ವಸ್ತುಗಳಿಗೆ ಗೋಧಿ, ಆಲೀವ್, ಅಂಜೂರ, ಜೇನು, ಎಣ್ಣೆ ಮತ್ತು ಮುಲಾಮುಗಳನ್ನು ಕೊಟ್ಟರು.


ನಾವು ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಎಂಬ ಊರನ್ನು ಮತ್ತು ಆ ಕಣಿವೆಯ ಮಧ್ಯದಲ್ಲಿದ್ದ ಇನ್ನೊಂದು ಊರನ್ನು ವಶಪಡಿಸಿಕೊಂಡೆವು. ಅರ್ನೋನ್ ಕಣಿವೆ ಮತ್ತು ಗಿಲ್ಯಾದ್‌ಗಳ ನಡುವೆ ಇರುವ ಎಲ್ಲಾ ಪಟ್ಟಣಗಳನ್ನು ಸೋಲಿಸಲು ಯೆಹೋವನು ಅವಕಾಶ ಮಾಡಿಕೊಟ್ಟನು. ಯಾವ ಪಟ್ಟಣವೂ ನಮಗೆ ಅಸಾಧ್ಯವಾಗಿ ಕಂಡುಬರಲಿಲ್ಲ.


ಆಮೇಲೆ ಯೆಫ್ತಾಹನು ಅಮ್ಮೋನಿಯರ ದೇಶಕ್ಕೆ ಹೋಗಿ ಯುದ್ಧಮಾಡಿದನು. ಅವರನ್ನು ಸೋಲಿಸಲು ಯೆಹೋವನು ಯೆಫ್ತಾಹನಿಗೆ ಸಹಾಯ ಮಾಡಿದನು.


ಗಾದ್ ಕುಲದವರು ದೀಬೋನ್, ಅಟಾರೋತ್, ಅರೋಯೇರ್,


ರಾಜನಾದ ಅಹಾಬನು ತನ್ನ ಸೈನ್ಯವನ್ನು ಮುನ್ನಡೆಸಿ, ಅರಾಮ್ಯರ ಸೇನೆಯಿಂದ ರಥಗಳನ್ನೂ ಅಶ್ವಸೇನೆಯನ್ನೂ ಸೋಲಿಸಿದನು. ಅರಾಮ್ಯರ ಸೇನೆಯ ಮಹಾ ಅಪಜಯಕ್ಕೆ ರಾಜನಾದ ಅಹಾಬನು ಕಾರಣನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು