ನ್ಯಾಯಸ್ಥಾಪಕರು 11:37 - ಪರಿಶುದ್ದ ಬೈಬಲ್37 ಯೆಫ್ತಾಹನ ಮಗಳು ತನ್ನ ತಂದೆಗೆ, “ನನಗೋಸ್ಕರ ಒಂದು ಕೆಲಸವನ್ನು ಮಾಡು. ಎರಡು ತಿಂಗಳುಗಳವರೆಗೆ ನನ್ನನ್ನು ಒಬ್ಬಂಟಿಗಳಾಗಿ ಇರಲು ಬಿಡು. ನಾನು ಬೆಟ್ಟಪ್ರದೇಶಕ್ಕೆ ಹೋಗುತ್ತೇನೆ. ನಾನು ಮದುವೆ ಮಾಡಿಕೊಳ್ಳುವುದಿಲ್ಲ ಮತ್ತು ಮಕ್ಕಳನ್ನು ಹೆರುವದಿಲ್ಲ. ನಾನು ಮತ್ತು ನನ್ನ ಗೆಳತಿಯರು ಹೋಗಿ ಒಟ್ಟಾಗಿ ಅಳುತ್ತೇವೆ” ಎಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಆಕೆಯು ತಿರುಗಿ ತನ್ನ ತಂದೆಗೆ, “ನನ್ನ ಬಿನ್ನಹವನ್ನು ಲಾಲಿಸು; ಎರಡು ತಿಂಗಳುಗಳ ಕಾಲ ನನ್ನನ್ನು ಬಿಡು. ನಾನು ನನ್ನ ಗೆಳತಿಯರೊಡನೆ ಬೆಟ್ಟದ ಪ್ರದೇಶಗಳಿಗೆ ಹೋಗಿ, ನನ್ನ ಕನ್ಯಾವಸ್ಥೆಗೋಸ್ಕರ ಗೋಳಾಡುವೆನು” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಆಕೆ ಪುನಃ ತನ್ನ ತಂದೆಗೆ, “ನನ್ನ ಬಿನ್ನಹವನ್ನು ಆಲಿಸು; ಎರಡು ತಿಂಗಳುಗಳವರೆಗೆ ನನ್ನನ್ನು ಬಿಡು, ನಾನು ನನ್ನ ಗೆಳತಿಯರೊಡನೆ ಗುಡ್ಡಪ್ರದೇಶಗಳಿಗೆ ಹೋಗಿ ನನ್ನ ಕನ್ಯಾವಸ್ಥೆಗಾಗಿ ಗೋಳಾಡುವೆನು,” ಎಂದಳು. ಅವನು, “ಎರಡು ತಿಂಗಳ ತನಕ ಹೋಗಿ ಬಾ,” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಆಕೆಯು ತಿರಿಗಿ ತನ್ನ ತಂದೆಗೆ - ನನ್ನ ಬಿನ್ನಹವನ್ನು ಲಾಲಿಸು; ಎರಡು ತಿಂಗಳುಗಳವರೆಗೆ ನನ್ನನ್ನು ಬಿಡು. ನಾನು ನನ್ನ ಗೆಳತಿಯರೊಡನೆ ಬೆಟ್ಟದ ಪ್ರದೇಶಗಳಿಗೆ ಹೋಗಿ ನನ್ನ ಕನ್ಯಾವಸ್ಥೆಗೋಸ್ಕರ ಗೋಳಾಡುವೆನು ಅನ್ನಲು ಅವನು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಇದಲ್ಲದೆ ಅವಳು ತನ್ನ ತಂದೆಗೆ, “ಈ ಕಾರ್ಯವು ನನಗೆ ಆಗಲಿ. ಆದರೆ ನಾನೂ, ನನ್ನ ಗೆಳತಿಯರೂ ಕೂಡ ನನ್ನ ಕನ್ಯಾವಸ್ಥೆಗಾಗಿ ಬೆಟ್ಟಗಳ ಮೇಲೆ ಹೋಗಿ, ನನ್ನ ಗೆಳತಿಯರ ಸಂಗಡ ಅಳುವುದಕ್ಕೆ ನನಗೆ ಎರಡು ತಿಂಗಳು ಸಮಯವನ್ನು ಕೊಡು,” ಎಂದಳು. ಅಧ್ಯಾಯವನ್ನು ನೋಡಿ |