Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:8 - ಪರಿಶುದ್ದ ಬೈಬಲ್‌

8 ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ, “ಕಷ್ಟ ಬಂದಿರುವುದರಿಂದಲೇ ನಿನ್ನಲ್ಲಿಗೆ ಬಂದಿದ್ದೇವೆ. ದಯವಿಟ್ಟು ನಮ್ಮೊಡನೆ ಬಾ; ಅಮ್ಮೋನಿಯರ ವಿರುದ್ಧ ಯುದ್ಧ ಮಾಡು. ಗಿಲ್ಯಾದಿನಲ್ಲಿ ವಾಸಮಾಡುತ್ತಿರುವ ಜನರೆಲ್ಲರಿಗೂ ನೀನು ನಾಯಕನಾಗುವೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು, “ಆದುದರಿಂದಲೇ ಈಗ ತಿರುಗಿ ನಿನ್ನ ಬಳಿಗೆ ಬಂದಿದ್ದೇವೆ; ನಮ್ಮ ಸಂಗಡ ಬಂದು ಅಮ್ಮೋನಿಯರೊಡನೆ ಯುದ್ಧಮಾಡುವುದಾದರೆ ಗಿಲ್ಯಾದಿನವರಿಗೆಲ್ಲಾ ನೀನೇ ನಾಯಕನಾಗಿರುವಿ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರು, “ಆದುದರಿಂದಲೇ ಈಗ ಪುನಃ ನಿನ್ನ ಬಳಿಗೆ ಬಂದಿದ್ದೇವೆ; ನಮ್ಮ ಸಂಗಡ ಬಂದು ಅಮ್ಮೋನಿಯರೊಡನೆ ಯುದ್ಧಮಾಡುವಿಯಾದರೆ ಗಿಲ್ಯಾದಿನವರಿಗೆಲ್ಲಾ ನೀನೆ ಶಿರಸ್ಸಾಗಿರುವೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರು - ಆದದರಿಂದಲೇ ಈಗ ತಿರಿಗಿ ನಿನ್ನ ಬಳಿಗೆ ಬಂದಿದ್ದೇವೆ; ನಮ್ಮ ಸಂಗಡ ಬಂದು ಅಮ್ಮೋನಿಯರೊಡನೆ ಯುದ್ಧಮಾಡುವಿಯಾದರೆ ಗಿಲ್ಯಾದಿನವರಿಗೆಲ್ಲಾ ನೀನೇ ಶಿರಸ್ಸಾಗಿರುವಿ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ, “ನೀನು ನಮ್ಮೊಂದಿಗೆ ಬಂದು ಅಮ್ಮೋನ್ಯರಿಗೆ ವಿರೋಧವಾಗಿ ಯುದ್ಧಮಾಡಿ, ಗಿಲ್ಯಾದಿನ ನಿವಾಸಿಗಳಾದ ನಮ್ಮೆಲ್ಲರಿಗೆ ನೀನು ತಲೆಯಾಗಿರುವ ಹಾಗೆ, ಈಗ ನಿನ್ನ ಬಳಿಗೆ ತಿರುಗಿ ಬಂದೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:8
8 ತಿಳಿವುಗಳ ಹೋಲಿಕೆ  

ಗಿಲ್ಯಾದ್ ಕ್ಷೇತ್ರದಲ್ಲಿ ವಾಸಮಾಡುತ್ತಿದ್ದ ಜನನಾಯಕರು, “ಅಮ್ಮೋನಿಯರ ಮೇಲೆ ಧಾಳಿಮಾಡಲು ಯಾರು ನಮ್ಮ ಮುಂದಾಳಾಗುತ್ತಾರೋ ಆ ವ್ಯಕ್ತಿಯೇ ಗಿಲ್ಯಾದ್ ಕ್ಷೇತ್ರದಲ್ಲಿ ವಾಸಮಾಡುವ ಜನರೆಲ್ಲರಿಗೂ ನಾಯಕನಾಗುತ್ತಾನೆ” ಎಂದು ಸಾರಿದರು.


ನಂತರ ರಾಜನಾದ ಯಾರೊಬ್ಬಾಮನು ದೇವಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನಲ್ಲಿ ನನಗಾಗಿ ಪ್ರಾರ್ಥಿಸು. ನನ್ನ ಕೈಯನ್ನು ಗುಣಪಡಿಸುವಂತೆ ಯೆಹೋವನಲ್ಲಿ ಪ್ರಾರ್ಥಿಸು” ಎಂದನು. ದೇವಮನುಷ್ಯನು ಯೆಹೋವನಿಗೆ ಪ್ರಾರ್ಥಿಸಿದನು. ಆಗ ರಾಜನ ಕೈ ಗುಣವಾಯಿತು. ಅದು ಮತ್ತೆ ಮೊದಲಿನಂತೆ ಆಯಿತು.


ಇದೊಂದು ಸಲ ನನ್ನ ಪಾಪಗಳನ್ನು ಕ್ಷಮಿಸಿ ಈ ‘ವಿಪತ್ತನ್ನು’ ನನ್ನಿಂದ ತೊಲಗಿಸಬೇಕೆಂದು ಯೆಹೋವನಿಗೆ ಪ್ರಾರ್ಥಿಸಿರಿ” ಎಂದು ಹೇಳಿದನು.


ಭಯಂಕರವಾದ ಗುಡುಗೂ ಆಲಿಕಲ್ಲಿನ ಮಳೆಯೂ ಬಹಳ ಹೆಚ್ಚಾದವು. ಇವುಗಳನ್ನು ನಿಲ್ಲಿಸಬೇಕೆಂದು ದೇವರನ್ನು ಪ್ರಾರ್ಥಿಸಿರಿ; ನಿಮ್ಮನ್ನು ಈ ದೇಶದಿಂದ ಕಳುಹಿಸಿಕೊಡುತ್ತೇನೆ; ತಡೆಯುವುದಿಲ್ಲ” ಎಂದು ಹೇಳಿದನು.


ಅದಕ್ಕೆ ಫರೋಹನು, “ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಯಜ್ಞಗಳನ್ನು ಅರ್ಪಿಸಲು ನಾನು ನಿಮಗೆ ಅಪ್ಪಣೆ ಕೊಡುವೆನು; ಆದರೆ ಬಹುದೂರ ಹೋಗಬೇಡಿ; ಈಗ ಹೋಗಿ ನನಗೋಸ್ಕರ ಪ್ರಾರ್ಥಿಸಿರಿ” ಅಂದನು.


ಫರೋಹನು ಮೋಶೆ ಆರೋನರನ್ನು ಕರೆಯಿಸಿ, “ನನ್ನಿಂದ ಮತ್ತು ನನ್ನ ಜನರ ಮೇಲಿಂದ ಕಪ್ಪೆಗಳನ್ನು ತೊಲಗಿಸಬೇಕೆಂದು ಯೆಹೋವನನ್ನು ಕೇಳಿಕೊಳ್ಳಿರಿ. ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಲು ನಾನು ಆತನ ಜನರನ್ನು ಹೋಗಗೊಡಿಸುವೆನು” ಎಂದು ಹೇಳಿದನು.


ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ, “ನಾನು ಗಿಲ್ಯಾದಿಗೆ ಹಿಂದಿರುಗಿ ಬಂದು ಅಮ್ಮೋನಿಯರ ವಿರುದ್ಧ ಯುದ್ಧಮಾಡಬೇಕೆಂದು ನೀವು ಅಪೇಕ್ಷಿಸುವುದೇನೋ ಒಳ್ಳೆಯದು. ಆದರೆ ಯೆಹೋವನ ಕೃಪೆಯಿಂದ ನಾನು ಗೆದ್ದರೆ ನಾನು ನಿಮಗೆ ಹೊಸ ನಾಯಕನಾಗುತ್ತೇನೆ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು