Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 12:1 - ಪರಿಶುದ್ದ ಬೈಬಲ್‌

1 ಎಫ್ರಾಯೀಮ್ಯರು ತಮ್ಮ ಸೈನಿಕರೆಲ್ಲರನ್ನು ಒಂದು ಕಡೆ ಸೇರಿಸಿದರು. ಆಮೇಲೆ ಅವರು ನದಿಯನ್ನು ದಾಟಿ ಝಾಫೋನ್ ನಗರಕ್ಕೆ ಬಂದರು. ಅವರು ಯೆಫ್ತಾಹನಿಗೆ, “ನೀನು ಅಮ್ಮೋನಿಯರ ಸಂಗಡ ಯುದ್ಧ ಮಾಡುವಾಗ ಸಹಾಯಕ್ಕಾಗಿ ನಮ್ಮನ್ನು ಏಕೆ ಕರೆಯಲಿಲ್ಲ? ನಿನ್ನನ್ನು ಮನೆಯೊಳಗೆ ಹಾಕಿ ನಿನ್ನ ಮನೆಯನ್ನು ಸುಟ್ಟುಬಿಡುತ್ತೇವೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಎಫ್ರಾಯೀಮ್ಯರು ಒಟ್ಟಿಗೆ ಸೇರಿಕೊಂಡು ಯೊರ್ದನ್ ನದಿಯನ್ನು ದಾಟಿ ಉತ್ತರದಿಕ್ಕಿನಲ್ಲಿರುವ ಚಾಫೋನಿಗೆ ಹೋಗಿ ಯೆಪ್ತಾಹನಿಗೆ, “ನೀನು ಅಮ್ಮೋನಿಯರ ಸಂಗಡ ಯುದ್ಧಕ್ಕೆ ಹೋಗುವಾಗ ನಮ್ಮನ್ನು ಯಾಕೆ ಕರೆಯಲಿಲ್ಲ? ಈಗ ನಾವು ನಿನ್ನನ್ನೂ ನಿನ್ನ ಮನೆಯನ್ನೂ ಸುಟ್ಟುಬಿಡುತ್ತೇವೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಎಫ್ರಯಿಮ್ಯರು ಒಟ್ಟುಗೂಡಿ ಜೋರ್ಡನನ್ನು ದಾಟಿ ಉತ್ತರದಿಕ್ಕಿಗೆ ಯೆಪ್ತಾಹನಿದ್ದಲ್ಲಿಗೆ ಹೋದರು. ಅವನಿಗೆ, “ನೀನು ಅಮ್ಮೋನಿಯರ ಸಂಗಡ ಯುದ್ಧಕ್ಕೆ ಹೋಗುವಾಗ ನಮ್ಮನ್ನು ಏಕೆ ಕರೆಯಲಿಲ್ಲ? ಈಗ ನಾವು ನಿನ್ನನ್ನೂ ನಿನ್ನ ಮನೆಯನ್ನೂ ಸುಟ್ಟುಬಿಡುತ್ತೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಎಫ್ರಾಯೀಮ್ಯರು ಕೂಡಿಕೊಂಡು ಯೊರ್ದನನ್ನು ದಾಟಿ ಉತ್ತರದಿಕ್ಕಿಗೆ ಯೆಪ್ತಾಹನಿದ್ದಲ್ಲಿಗೆ ಹೋಗಿ ಅವನಿಗೆ - ನೀನು ಅಮ್ಮೋನಿಯರ ಸಂಗಡ ಯುದ್ಧಕ್ಕೆ ಹೋಗುವಾಗ ನಮ್ಮನ್ನು ಯಾಕೆ ಕರೆಯಲಿಲ್ಲ? ಈಗ ನಾವು ನಿನ್ನನ್ನೂ ನಿನ್ನ ಮನೆಯನ್ನೂ ಸುಟ್ಟುಬಿಡುತ್ತೇವೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಎಫ್ರಾಯೀಮನ ಜನರು ಕೂಡಿಕೊಂಡು ಉತ್ತರದ ಜಪೋನಿಗೆ ಹೋಗಿ, ಯೆಫ್ತಾಹನಿಗೆ, “ನೀನು ಅಮ್ಮೋನಿಯರ ಮೇಲೆ ಯುದ್ಧಮಾಡುವುದಕ್ಕೆ ಹೋದಾಗ, ನಮ್ಮನ್ನು ಏಕೆ ನಿನ್ನ ಸಂಗಡ ಹೋಗಲು ಕರೆಕಳುಹಿಸಲಿಲ್ಲ? ನಾವು ನಿನ್ನ ಮನೆಯನ್ನು ನಿನ್ನನ್ನು ಸಹಿತವಾಗಿ ಬೆಂಕಿಯಿಂದ ಸುಟ್ಟುಬಿಡುತ್ತೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 12:1
14 ತಿಳಿವುಗಳ ಹೋಲಿಕೆ  

ಎಫ್ರಾಯೀಮ್ಯರು ಗಿದ್ಯೋನನ ಮೇಲೆ ಕೋಪಗೊಂಡಿದ್ದರು. ಎಫ್ರಾಯೀಮ್ಯರು ಗಿದ್ಯೋನನನ್ನು ಕಂಡಾಗ, “ನೀನು ನಮ್ಮ ಸಂಗಡ ಹೀಗೇಕೆ ವರ್ತಿಸಿದೆ? ನೀನು ಮಿದ್ಯಾನ್ಯರೊಂದಿಗೆ ಯುದ್ಧಮಾಡಲು ಹೋದಾಗ ನಮ್ಮನ್ನು ಏಕೆ ಕರೆಯಲಿಲ್ಲ?” ಎಂದು ಗಿದ್ಯೋನನನ್ನು ಕೇಳಿದರು.


ಹೊಟ್ಟೆಕಿಚ್ಚು ಮತ್ತು ಸ್ವಾರ್ಥತೆಗಳು ಎಲ್ಲಿರುವವೋ ಅಲ್ಲಿ ಗಲಿಬಿಲಿಯೂ ಎಲ್ಲಾ ಬಗೆಯ ನೀಚತನಗಳೂ ಇರುತ್ತವೆ.


ಆದರೆ ಯೇಸು ಅವರಿಗೆ, “ನಾನು ತಂದೆಯಿಂದ ಅನೇಕ ಒಳ್ಳೆಯ ಕಾರ್ಯಗಳನ್ನು ಮಾಡಿದ್ದೇನೆ. ನೀವು ಆ ಕಾರ್ಯಗಳನ್ನು ನೋಡಿದ್ದೀರಿ. ಆ ಒಳ್ಳೆಯ ಕಾರ್ಯಗಳಲ್ಲಿ ಯಾವುದರ ನಿಮಿತ್ತ ನೀವು ನನ್ನನ್ನು ಕೊಲ್ಲಬೇಕೆಂದಿದ್ದೀರಿ?” ಎಂದು ಹೇಳಿದನು.


ನಾಲ್ಕನೆಯ ದಿನ ಅವರು ಸಂಸೋನನ ಹೆಂಡತಿಯಲ್ಲಿಗೆ ಬಂದು, “ನೀನು ನಮ್ಮನ್ನು ಬಡವರನ್ನಾಗಿ ಮಾಡಲು ಇಲ್ಲಿಗೆ ಕರೆದಿರುವಿಯಾ? ನೀನು ನಿನ್ನ ಗಂಡನನ್ನು ಮರುಳುಗೊಳಿಸಿ ನಮಗೆ ಒಗಟಿನ ಅರ್ಥವನ್ನು ಹೇಳುವಂತೆ ಮಾಡು. ನೀನು ನಮಗೆ ಒಗಟಿನ ಅರ್ಥವನ್ನು ಹೇಳದಿದ್ದರೆ ನಾವು ನಿನ್ನನ್ನು ಮತ್ತು ನಿನ್ನ ತಂದೆಯ ಮನೆಯಲ್ಲಿರುವ ಎಲ್ಲರನ್ನೂ ಸುಟ್ಟುಹಾಕುತ್ತೇವೆ” ಎಂದರು.


ಆಮೇಲೆ ನಾನು, “ಜನರು ಪ್ರಯಾಸಪಟ್ಟು ಕೆಲಸ ಮಾಡುವುದೇಕೆ?” ಎಂದು ಆಲೋಚಿಸಿದೆ. ಜನರು ಏಳಿಗೆ ಹೊಂದಲು ಮತ್ತು ಬೇರೆಯವರಿಗಿಂತ ಹೆಚ್ಚು ಅಭಿವೃದ್ಧಿಯಾಗಲು ಪ್ರಯತ್ನಿಸುವರು; ಅದಕ್ಕೆ ಅವರ ಮತ್ಸರವೇ ಕಾರಣ. ಇದೂ ಗಾಳಿಯನ್ನು ಹಿಂದಟ್ಟಿದ್ದ ಹಾಗೆ ವ್ಯರ್ಥ.


ನಾನು ಅವರನ್ನು ಪ್ರೀತಿಸಿದರೂ ಅವರು ನನ್ನನ್ನು ದ್ವೇಷಿಸುವರು. ನಾನಾದರೋ ನಿನಗೆ ಪ್ರಾರ್ಥಿಸುತ್ತಿದ್ದೇನೆ.


“ಇದನ್ನು ಮಾಡಿದವರು ಯಾರು?” ಎಂದು ಫಿಲಿಷ್ಟಿಯರು ವಿಚಾರಿಸಿದರು. ಒಬ್ಬನು, “ತಿಮ್ನಾ ನಗರದವನ ಅಳಿಯನಾದ ಸಂಸೋನನು ಇದನ್ನು ಮಾಡಿದನು. ಸಂಸೋನನ ಮಾವನು ಸಂಸೋನನ ಹೆಂಡತಿಯನ್ನು ಮದುವೆಯಲ್ಲಿದ್ದ ಉತ್ತಮ ಪುರುಷನೊಬ್ಬನಿಗೆ ಮದುವೆಮಾಡಿಕೊಟ್ಟಿದ್ದಕ್ಕಾಗಿ ಅವನು ಹೀಗೆಲ್ಲಾ ಮಾಡಿದನು” ಎಂದು ಹೇಳಿದನು. ಆಗ ಫಿಲಿಷ್ಟಿಯರು ಸಂಸೋನನ ಹೆಂಡತಿಯನ್ನು ಮತ್ತು ಅವಳ ತಂದೆಯನ್ನು ಸುಟ್ಟುಹಾಕಿದರು.


ಪ್ರತಿವರ್ಷ ಇಸ್ರೇಲಿನ ಹೆಂಗಸರು ಗಿಲ್ಯಾದಿನ ಯೆಫ್ತಾಹನ ಮಗಳನ್ನು ಸ್ಮರಿಸುತ್ತಾರೆ. ಇಸ್ರೇಲಿನ ಹೆಂಗಸರು ಯೆಫ್ತಾಹನ ಮಗಳಿಗಾಗಿ ಪ್ರತಿವರ್ಷ ನಾಲ್ಕು ದಿನ ಅಳುತ್ತಾರೆ. ಇದು ಇಸ್ರೇಲಿನಲ್ಲಿ ಒಂದು ಪದ್ಧತಿಯಾಗಿದೆ.


ಯೆಫ್ತಾಹನು ಅವರಿಗೆ, “ಅಮ್ಮೋನಿಯರು ನಮಗೆ ಅನೇಕ ತೊಂದರೆಗಳನ್ನು ಕೊಡುತ್ತಿದ್ದರು. ಆದ್ದರಿಂದ ನಾನು ಮತ್ತು ನನ್ನ ಜನರು ಅವರ ವಿರುದ್ಧ ಹೋರಾಡಿದೆವು. ನಾನು ನಿಮ್ಮನ್ನು ಕರೆದೆ. ಆದರೆ ನೀವು ನಮಗೆ ಸಹಾಯಮಾಡಲು ಬರಲಿಲ್ಲ.


“ಎಫ್ರಾಯೀಮ್ ಇಸ್ರೇಲರೊಳಗೆ ತನ್ನನ್ನು ತಾನೇ ಮುಖ್ಯಸ್ಥನನ್ನಾಗಿ ಮಾಡಿಕೊಂಡನು. ಎಫ್ರಾಯೀಮನು ಮಾತನಾಡಿದಾಗ ಜನರು ಹೆದರಿ ನಡುಗಿದರು. ಆದರೆ ಅವನು ಪಾಪದಲ್ಲಿ ಬಿದ್ದನು. ಬಾಳನನ್ನು ಪೂಜಿಸಲು ಪ್ರಾರಂಭಿಸಿದನು.


ತನ್ನ ವಿರುದ್ಧವಾಗಿ ತಾನೇ ಹೋರಾಡುವ ರಾಜ್ಯ ಉಳಿಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು