Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 12:3 - ಪರಿಶುದ್ದ ಬೈಬಲ್‌

3 ನೀವು ನಮ್ಮ ಸಹಾಯಕ್ಕೆ ಬರುವುದಿಲ್ಲವೆಂದು ತಿಳಿದಾಗ ನಾನು ನನ್ನ ಜೀವವನ್ನೇ ಗಂಡಾಂತರಕ್ಕೆ ಒಡ್ಡಿದೆ. ಅಮ್ಮೋನಿಯರ ವಿರುದ್ಧ ಯುದ್ಧಮಾಡಲು ನಾನು ನದಿಯನ್ನು ದಾಟಿಹೋದೆ. ಅವರನ್ನು ಸೋಲಿಸಲು ಯೆಹೋವನು ನನಗೆ ಸಹಾಯ ಮಾಡಿದನು. ಈಗ ನೀವು ನನ್ನ ಸಂಗಡ ಯುದ್ಧ ಮಾಡುವುದಕ್ಕಾಗಿ ಏಕೆ ಬಂದಿದ್ದೀರಿ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀವು ಸಹಾಯಮಾಡುವುದಿಲ್ಲವೆಂದು ತಿಳಿದು ಜೀವವನ್ನು ಕೈಯಲ್ಲಿ ಹಿಡಿದು ಅಮ್ಮೋನಿಯರೊಡನೆ ಯುದ್ಧಕ್ಕೆ ಹೋದೆನು. ಯೆಹೋವನು ಅವರನ್ನು ನನ್ನ ಕೈಗೆ ಒಪ್ಪಿಸಿದನು. ಹೀಗಿರಲು ನೀವು ಈಗ ಬಂದು ನನ್ನೊಡನೆ ಕಲಹಮಾಡುವುದೇಕೆ?” ಎಂದು ಉತ್ತರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನೀವು ಸಹಾಯ ಮಾಡುವುದಿಲ್ಲ ಎಂದು ತಿಳಿದು ಪ್ರಾಣವನ್ನು ಕೈಯಲ್ಲಿ ಹಿಡಿದು ಅಮ್ಮೋನಿಯರೊಡನೆ ಯುದ್ಧಕ್ಕೆ ಹೋದೆ; ಸರ್ವೇಶ್ವರ ಅವರನ್ನು ನನ್ನ ಕೈಗೆ ಒಪ್ಪಿಸಿದರು. ಹೀಗಿರಲು, ನೀವು ಈಗ ಬಂದು ನನ್ನೊಡನೆ ಕಲಹಮಾಡುವುದೇಕೆ?” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀವು ಸಹಾಯಮಾಡುವದಿಲ್ಲವೆಂದು ತಿಳಿದು ಜೀವವನ್ನು ಕೈಯಲ್ಲಿ ಹಿಡಿದು ಅಮ್ಮೋನಿಯರೊಡನೆ ಯುದ್ಧಕ್ಕೆ ಹೋದೆನು; ಯೆಹೋವನು ಅವರನ್ನು ನನ್ನ ಕೈಗೆ ಒಪ್ಪಿಸಿದನು. ಹೀಗಿರಲು ನೀವು ಈಗ ಬಂದು ನನ್ನೊಡನೆ ಕಲಹಮಾಡುವದೇಕೆ ಎಂದು ಉತ್ತರಕೊಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀವು ನನ್ನನ್ನು ರಕ್ಷಿಸುವುದಿಲ್ಲವೆಂದು ನಾನು ಕಂಡು ನನ್ನ ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡು, ಅಮ್ಮೋನಿಯರಿಗೆ ವಿರೋಧವಾಗಿ ಹೋದೆನು. ಯೆಹೋವ ದೇವರು ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರು. ನೀವು ನನ್ನ ಸಂಗಡ ಯುದ್ಧಮಾಡುವುದಕ್ಕೆ ಈ ಹೊತ್ತು ನನಗೆ ವಿರೋಧವಾಗಿ ಏಕೆ ಬಂದಿರಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 12:3
11 ತಿಳಿವುಗಳ ಹೋಲಿಕೆ  

ನಾನು ನನ್ನನ್ನು ಅಪಾಯಕ್ಕೊಡ್ಡುವೆನು; ನನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡಿರುವೆನು.


ಆ ಹೆಂಗಸು ಸೌಲನ ಬಳಿಗೆ ಬಂದಳು. ಸೌಲನು ನಿಜವಾಗಿಯೂ ಭಯಗೊಂಡಿರುವುದನ್ನು ಅವಳು ನೋಡಿ, “ಇಲ್ಲಿ ನೋಡು, ನಾನು ನಿನ್ನ ಸೇವಕಿ. ನಾನು ನಿನಗೆ ವಿಧೇಯಳಾಗಿದ್ದೇನೆ. ನಾನು ನನ್ನ ಜೀವವನ್ನೇ ಕಡೆಗಣಿಸಿ ನೀನು ಹೇಳಿದ್ದನ್ನು ಮಾಡಿದೆ.


ದಾವೀದನು ಫಿಲಿಷ್ಟಿಯನಾದ ಗೊಲ್ಯಾತನನ್ನು ಕೊಂದಾಗ ತನ್ನ ಜೀವವನ್ನೇ ಪಣವಾಗಿಟ್ಟಿದ್ದನು. ಯೆಹೋವನು ಇಸ್ರೇಲರೆಲ್ಲರಿಗೂ ಬಹು ದೊಡ್ಡ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿದೆ ಮತ್ತು ಸಂತೋಷಗೊಂಡೆ. ದಾವೀದನಿಗೆ ಕೇಡುಮಾಡಲು ನೀನು ಏಕೆ ಬಯಸಿರುವೆ? ಅವನು ನಿರಪರಾಧಿ. ಅವನನ್ನು ಕೊಲ್ಲಲು ಯಾವ ಕಾರಣವೂ ಇಲ್ಲ!” ಎಂದು ಹೇಳಿದನು.


ನನ್ನ ಪ್ರಾಣವು ಯಾವಾಗಲೂ ಅಪಾಯದಲ್ಲಿದೆ. ಆದರೂ ನಾನು ನಿನ್ನ ಉಪದೇಶಗಳನ್ನು ಮರೆತುಬಿಟ್ಟಿಲ್ಲ.


ನಮ್ಮ ಸಹೋದರರು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ವಾಕ್ಯದ ಬಲದಿಂದಲೂ ಅವನನ್ನು ಸೋಲಿಸಿದರು. ಅವರು ತಮ್ಮ ಜೀವಗಳನ್ನು ಪ್ರೀತಿಸಲಿಲ್ಲ. ಅವರು ಮರಣಕ್ಕೆ ಭಯಪಡಲಿಲ್ಲ.


ಅವರು ನನ್ನ ಪ್ರಾಣವನ್ನು ಉಳಿಸುವುದಕ್ಕಾಗಿ ತಮ್ಮ ಪ್ರಾಣಗಳನ್ನೇ ಅಪಾಯಕ್ಕೆ ಈಡುಮಾಡಿದರು. ನಾನು ಅವರಿಗೆ ಕೃತಜ್ಞನಾಗಿದ್ದೇನೆ. ಯೆಹೂದ್ಯರಲ್ಲದ ಸಭೆಗಳವರೆಲ್ಲರೂ ಅವರಿಗೆ ಕೃತಜ್ಞರಾಗಿದ್ದಾರೆ.


ದೇವರು ನಮ್ಮೊಂದಿಗಿದ್ದಾನೆ. ನಮ್ಮನ್ನು ಆಳುವವನು ಆತನೇ. ಅವನ ಯಾಜಕರು ನಮ್ಮೊಂದಿಗಿದ್ದಾರೆ. ದೇವರ ಯಾಜಕರು ತುತ್ತೂರಿಯನ್ನೂದಿ ನಿಮ್ಮನ್ನು ಆತನ ಬಳಿಗೆ ಬರಲು ಎಚ್ಚರಿಸುತ್ತಾರೆ. ಇಸ್ರೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನ ಜನರೊಂದಿಗೆ ಕಾದಾಡಬೇಡಿರಿ. ನೀವು ಜಯಹೊಂದುವದಿಲ್ಲ” ಎಂದು ಹೇಳಿದನು.


ಇಸ್ರೇಲರು ನಿಮ್ಮ ವಿರುದ್ಧ ಯಾವ ಪಾಪವನ್ನೂ ಮಾಡಿಲ್ಲ. ಆದರೆ ನೀನು ಇಸ್ರೇಲರ ವಿರುದ್ಧ ಬಹಳ ಕೆಟ್ಟದ್ದನ್ನು ಮಾಡುತ್ತಿರುವೆ. ನ್ಯಾಯವು ಇಸ್ರೇಲರ ಪರವಾಗಿದೆಯೋ ಅಥವಾ ಅಮ್ಮೋನಿಯರ ಪರವಾಗಿದೆಯೋ ಎಂಬುದನ್ನು ನಿಜವಾದ ನ್ಯಾಯಾಧೀಶನಾದ ಯೆಹೋವನೇ ತೀರ್ಮಾನಿಸಬೇಕು.”


ಆದರೆ ನಿಮಗೆ ನಮ್ಮ ತಂದೆಯು ಏನು ಮಾಡಿದನೆಂಬುದನ್ನು ಯೋಚಿಸಿರಿ. ನಮ್ಮ ತಂದೆಯು ನಿಮಗೋಸ್ಕರ ಯುದ್ಧ ಮಾಡಿದನು. ಅವನು ಮಿದ್ಯಾನ್ಯರಿಂದ ನಿಮ್ಮನ್ನು ರಕ್ಷಿಸಲು ತನ್ನ ಜೀವವನ್ನು ಅಪಾಯಕ್ಕೆ ಒಡ್ಡಿದನು.


ಯೆಫ್ತಾಹನು ಅವರಿಗೆ, “ಅಮ್ಮೋನಿಯರು ನಮಗೆ ಅನೇಕ ತೊಂದರೆಗಳನ್ನು ಕೊಡುತ್ತಿದ್ದರು. ಆದ್ದರಿಂದ ನಾನು ಮತ್ತು ನನ್ನ ಜನರು ಅವರ ವಿರುದ್ಧ ಹೋರಾಡಿದೆವು. ನಾನು ನಿಮ್ಮನ್ನು ಕರೆದೆ. ಆದರೆ ನೀವು ನಮಗೆ ಸಹಾಯಮಾಡಲು ಬರಲಿಲ್ಲ.


ಆಗ ಯೆಫ್ತಾಹನು ಗಿಲ್ಯಾದಿನ ಜನರನ್ನು ಒಂದೆಡೆ ಸೇರಿಸಿದನು. ಅವರು ಎಫ್ರಾಯೀಮ್ಯರ ವಿರುದ್ಧ ಯುದ್ಧ ಮಾಡಿದರು. ಏಕೆಂದರೆ ಎಫ್ರಾಯೀಮ್ಯರು ಗಿಲ್ಯಾದ್ಯರನ್ನು ಅವಮಾನ ಮಾಡಿದ್ದರು. ಅವರು, “ಗಿಲ್ಯಾದಿನವರಾದ ನೀವು ಎಫ್ರಾಯೀಮ್ಯರಲ್ಲಿ ಬದುಕಿ ಉಳಿದವರೇ ಹೊರತು ಬೇರೆಯವರಲ್ಲ. ನಿಮಗೆ ನಿಮ್ಮ ಸ್ವಂತ ಪ್ರದೇಶವೂ ಇಲ್ಲ. ನಿಮ್ಮ ಒಂದು ಭಾಗವು ಎಫ್ರಾಯೀಮ್ ಕುಲಕ್ಕೆ ಸೇರಿದೆ; ಇನ್ನೊಂದು ಭಾಗವು ಮನಸ್ಸೆ ಕುಲಕ್ಕೆ ಸೇರಿದೆ” ಎಂದಿದ್ದರು. ಅವರು ಹೀಗೆ ಅಂದದ್ದರಿಂದ ಗಿಲ್ಯಾದಿನ ಜನರು ಎಫ್ರಾಯೀಮ್ ಜನರನ್ನು ಸೋಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು