Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 12:5 - ಪರಿಶುದ್ದ ಬೈಬಲ್‌

5 ಗಿಲ್ಯಾದಿನ ಜನರು ಜೋರ್ಡನ್ ನದಿಯನ್ನು ದಾಟಲು ಅನುಕೂಲವಾದ ಸ್ಥಳಗಳನ್ನೆಲ್ಲಾ ವಶಪಡಿಸಿಕೊಂಡರು. ಅವು ಎಫ್ರಾಯೀಮ್ ಪ್ರದೇಶದೊಳಕ್ಕೆ ಹೋಗುವ ಮಾರ್ಗದಲ್ಲಿಯೇ ಇದ್ದವು. ಯಾವಾಗಲಾದರೂ ಎಫ್ರಾಯೀಮ್ ಕುಲದವರಲ್ಲಿ ಅಳಿದುಳಿದವನೊಬ್ಬ ಅಲ್ಲಿಗೆ ಬಂದು, “ನನ್ನನ್ನು ದಾಟಗೊಡಿರಿ” ಎಂದು ಕೇಳಿದರೆ ಗಿಲ್ಯಾದಿನವರು, “ನೀನು ಎಫ್ರಾಯೀಮಿನವನೇ?” ಎಂದು ಕೇಳುತ್ತಿದ್ದರು. ಅವನು “ಅಲ್ಲ” ಎಂದು ಉತ್ತರಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದಲ್ಲದೆ ಅವರು ಎಫ್ರಾಯೀಮಿಗೆ ಹೋಗುವ ಯೊರ್ದನಿನ ಹಾಯಗಡಗಳನ್ನೆಲ್ಲಾ ಹಿಡಿದರು. ತಪ್ಪಿಸಿಕೊಂಡ ಎಫ್ರಾಯೀಮ್ಯರಲ್ಲೊಬ್ಬನು ಅಲ್ಲಿಗೆ ಬಂದು ನನ್ನನ್ನು ದಾಟಗೊಡಿಸಿರಿ ಎಂದು ಅವರನ್ನು ಕೇಳಿದರೆ ಅವರು, “ನೀನು ಎಫ್ರಾಯೀಮ್ಯನೋ” ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇದಲ್ಲದೆ, ಅವರು ತಪ್ಪಿಸಿಕೊಂಡು ಹೋಗದಂತೆ ಎಫ್ರಯಿಮಿಗೆ ಹೋಗುವ ಜೋರ್ಡನಿನ ಹಾಯಗಡಗಳನ್ನೆಲ್ಲಾ ಹಿಡಿದರು. ತಪ್ಪಿಸಿಕೊಂಡ ಎಫ್ರಯಿಮ್ಯರಲ್ಲಿ ಒಬ್ಬನು ಅಲ್ಲಿಗೆ ಬಂದು ನನ್ನನ್ನು ದಾಟಗೊಡಿರಿ ಎಂದು ಅವರನ್ನು ಕೇಳಿದಾಗ ಅವರು, “ನೀನು ಎಫ್ರಯಿಮನೋ?’ ಎಂದು ಕೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇದಲ್ಲದೆ ಅವರು ಎಫ್ರಾಯೀವಿುಗೆ ಹೋಗುವ ಯೊರ್ದನಿನ ಹಾಯಗಡಗಳನ್ನೆಲ್ಲಾ ಹಿಡಿದರು. ತಪ್ಪಿಸಿಕೊಂಡ ಎಫ್ರಾಯೀಮ್ಯರಲ್ಲೊಬ್ಬನು ಅಲ್ಲಿಗೆ ಬಂದು ನನ್ನನ್ನು ದಾಟಗೊಡಿರಿ ಎಂದು ಅವರನ್ನು ಕೇಳಿದರೆ ಅವರು - ನೀನು ಎಫ್ರಾಯೀಮ್ಯನೋ ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಗಿಲ್ಯಾದ್ಯರು ಎಫ್ರಾಯೀಮ್ಯರಿಗೆ ಮುಂದುಗಡೆ ಯೊರ್ದನ್ ನದಿ ರೇವುಗಳನ್ನು ಹಿಡಿದರು. ಆಗ ಏನಾಯಿತೆಂದರೆ, ಎಫ್ರಾಯೀಮ್ಯರಲ್ಲಿ ತಪ್ಪಿಸಿಕೊಂಡ ಯಾವನಾದರೂ ಬಂದು, “ದಾಟುತ್ತೇನೆ,” ಎಂದು ಹೇಳಿದರೆ, ಗಿಲ್ಯಾದ್ಯರು, “ನೀನು ಎಫ್ರಾಯೀಮ್ಯನೋ?” ಎಂದು ಅವನನ್ನು ಕೇಳುತ್ತಿದ್ದರು. ಅವನು, “ಇಲ್ಲ,” ಎಂದರೆ, ಅವನಿಗೆ, “ನೀನು ಷಿಬ್ಬೋಲೆತ್ ಅನ್ನು,” ಎಂದು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 12:5
9 ತಿಳಿವುಗಳ ಹೋಲಿಕೆ  

ಏಹೂದನು ಇಸ್ರೇಲರಿಗೆ, “ನನ್ನನ್ನು ಹಿಂಬಾಲಿಸಿರಿ, ನಮ್ಮ ಶತ್ರುಗಳಾದ ಮೋವಾಬ್ಯರನ್ನು ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡಿದ್ದಾನೆ” ಎಂದನು. ಇಸ್ರೇಲರು ಏಹೂದನನ್ನು ಹಿಂಬಾಲಿಸಿದರು. ಅವರು ಜೋರ್ಡನ್ ನದಿಯ ಹಾಯಗಡಗಳನ್ನೆಲ್ಲಾ ವಶಪಡಿಸಿಕೊಂಡರು. ಆ ಸ್ಥಳಗಳು ಮೋವಾಬಿಗೆ ಹೋಗುವ ದಾರಿಯಲ್ಲಿದ್ದವು. ಜೋರ್ಡನ್ ನದಿಯನ್ನು ದಾಟಿಹೋಗಲು ಇಸ್ರೇಲರು ಯಾರಿಗೂ ಅವಕಾಶ ಕೊಡಲಿಲ್ಲ.


ಇನ್ನೂ ಶೀಲೋವಿನಲ್ಲಿದ್ದ ಇಸ್ರೇಲಿನ ಉಳಿದ ಜನರು, ಈ ಮೂರು ಕುಲದವರು ಕಟ್ಟಿಸಿದ ಯಜ್ಞವೇದಿಕೆಯ ಬಗ್ಗೆ ಕೇಳಿದರು. ಕಾನಾನಿನ ಗಡಿಯ ಬಳಿಯಿರುವ ಗೆಲಿಲೋತ್ ಎಂಬಲ್ಲಿ ಇದನ್ನು ಕಟ್ಟಲಾಗಿದೆ ಎಂಬುದು ಅವರಿಗೆ ತಿಳಿಯಿತು. ಇದು ಇಸ್ರೇಲರಿಗೆ ಸೇರಿದ ಜೋರ್ಡನ್ ನದಿಯ ಸಮೀಪದಲ್ಲಿತ್ತು.


ಗಿದ್ಯೋನನು ಎಫ್ರಾಯೀಮ್ ಬೆಟ್ಟಪ್ರದೇಶಗಳಿಗೆ ದೂತರನ್ನು ಕಳುಹಿಸಿದನು. ಆ ದೂತರು, “ಬನ್ನಿ, ಮಿದ್ಯಾನ್ಯರ ಮೇಲೆ ಧಾಳಿ ಮಾಡಿರಿ. ಬೇತ್‌ಬಾರದವರೆಗಿನ ನದಿಯ ಮತ್ತು ಜೋರ್ಡನ್ ನದಿಯ ಪ್ರದೇಶವನ್ನು ಹಿಡಿದುಕೊಳ್ಳಿರಿ. ಮಿದ್ಯಾನ್ಯರು ಅಲ್ಲಿಗೆ ಬರುವ ಮೊದಲೇ ಈ ಕೆಲಸವನ್ನು ಮಾಡಿರಿ” ಎಂದು ತಿಳಿಸಿದರು. ಅವರು ಎಫ್ರಾಯೀಮ್ ಕುಲದ ಎಲ್ಲ ಜನರನ್ನು ಕರೆದರು. ಅವರು ಬೇತ್‌ಬಾರಾದವರೆಗೆ ನದಿಯ ಪ್ರದೇಶವನ್ನು ಹಿಡಿದುಕೊಂಡರು.


ರಾಜಭಟರು ನಗರದ ಹೊರಗೆ ಹೋಗಿ ನಗರದ ದ್ವಾರಗಳನ್ನು ಮುಚ್ಚಿ ಇಸ್ರೇಲಿನಿಂದ ಬಂದ ಆ ಇಬ್ಬರನ್ನು ಹುಡುಕಿಕೊಂಡು ಹೋದರು. ಅವರು ಜೋರ್ಡನ್ ನದಿಯವರೆಗೆ ಹೋಗಿ ಜನರು ನದಿದಾಟುವ ಎಲ್ಲ ಸ್ಥಳಗಳಲ್ಲಿ ಹುಡುಕಿದರು.


ಆಗ ಯೆಫ್ತಾಹನು ಗಿಲ್ಯಾದಿನ ಜನರನ್ನು ಒಂದೆಡೆ ಸೇರಿಸಿದನು. ಅವರು ಎಫ್ರಾಯೀಮ್ಯರ ವಿರುದ್ಧ ಯುದ್ಧ ಮಾಡಿದರು. ಏಕೆಂದರೆ ಎಫ್ರಾಯೀಮ್ಯರು ಗಿಲ್ಯಾದ್ಯರನ್ನು ಅವಮಾನ ಮಾಡಿದ್ದರು. ಅವರು, “ಗಿಲ್ಯಾದಿನವರಾದ ನೀವು ಎಫ್ರಾಯೀಮ್ಯರಲ್ಲಿ ಬದುಕಿ ಉಳಿದವರೇ ಹೊರತು ಬೇರೆಯವರಲ್ಲ. ನಿಮಗೆ ನಿಮ್ಮ ಸ್ವಂತ ಪ್ರದೇಶವೂ ಇಲ್ಲ. ನಿಮ್ಮ ಒಂದು ಭಾಗವು ಎಫ್ರಾಯೀಮ್ ಕುಲಕ್ಕೆ ಸೇರಿದೆ; ಇನ್ನೊಂದು ಭಾಗವು ಮನಸ್ಸೆ ಕುಲಕ್ಕೆ ಸೇರಿದೆ” ಎಂದಿದ್ದರು. ಅವರು ಹೀಗೆ ಅಂದದ್ದರಿಂದ ಗಿಲ್ಯಾದಿನ ಜನರು ಎಫ್ರಾಯೀಮ್ ಜನರನ್ನು ಸೋಲಿಸಿದರು.


ಅವರು ಅವನಿಗೆ, “ಷಿಬ್ಬೋಲೆತ್ ಅನ್ನು” ಎಂದು ಹೇಳುವರು. ಎಫ್ರಾಯೀಮಿನ ಜನರಿಗೆ ಆ ಪದವನ್ನು ಸರಿಯಾಗಿ ಉಚ್ಚರಿಸಲು ಬರುತ್ತಿರಲಿಲ್ಲ. ಅವರು ಆ ಪದವನ್ನು “ಸಿಬ್ಬೋಲೆತ್” ಎಂದು ಉಚ್ಚರಿಸುತ್ತಿದ್ದರು. ಆ ಮನುಷ್ಯನು “ಸಿಬ್ಬೋಲೆತ್” ಅಂದತಕ್ಷಣ ಗಿಲ್ಯಾದಿನ ಜನರಿಗೆ ಅವನು ಎಫ್ರಾಯೀಮ್ಯನೆಂದು ಗೊತ್ತಾಗುತ್ತಿತ್ತು. ಅವರು ಅವನನ್ನು ದಾರಿಯ ತಿರುವುಗಳಲ್ಲೇ ಕೊಂದುಬಿಡುತ್ತಿದ್ದರು. ಅವರು ಎಫ್ರಾಯೀಮಿನ ನಲವತ್ತೆರಡು ಸಾವಿರ ಜನರನ್ನು ಕೊಂದುಹಾಕಿದರು.


ಲೇವಿಯ ಕುಲದ ಒಬ್ಬ ತರುಣನಿದ್ದನು. ಅವನು ಯೆಹೂದದ ಬೆತ್ಲೆಹೇಮಿನವನಾಗಿದ್ದು ಯೆಹೂದ್ಯರ ಸಂಗಡ ವಾಸಮಾಡುತ್ತಿದ್ದನು.


ಎಲ್ಕಾನ ಎಂಬ ಒಬ್ಬ ಮನುಷ್ಯನಿದ್ದನು. ಅವನು ಎಫ್ರಾಯೀಮ್ ಬೆಟ್ಟದ ಸೀಮೆಯ ರಾಮಾತಯಿಮ್ ಎಂಬ ಊರಿನವನು. ಅವನು ಚೋಫೀಮ್ ಕುಟುಂಬದವನೂ ಯೆರೋಹಾಮನ ಮಗನೂ ಆಗಿದ್ದನು. ಯೆರೋಹಾಮನು ಎಲೀಹುವಿನ ಮಗ. ಎಲೀಹುವನು ತೋಹುವನ ಮಗ. ತೋಹುವನು ಚೂಫನ ಮಗ. ಇವರೆಲ್ಲ ಎಫ್ರಾಯೀಮ್ ಕುಲದವರು.


ಸೊಲೊಮೋನನ ಸೇವಕರಲ್ಲಿ ನೆಬಾಟನ ಮಗನಾದ ಯಾರೊಬ್ಬಾಮನೂ ಒಬ್ಬನಾಗಿದ್ದನು. ಯಾರೊಬ್ಬಾಮನು ಎಫ್ರಾಯೀಮ್ ಕುಲದವನು, ಅವನು ಚರೇದ ಪಟ್ಟಣದವನು. ಯಾರೊಬ್ಬಾಮನ ತಾಯಿಯ ಹೆಸರು ಜೆರೂಗ, ಆಕೆ ವಿಧವೆಯಾಗಿದ್ದಳು. ಯಾರೊಬ್ಬಾಮನು ರಾಜನ ವಿರುದ್ಧ ತಿರುಗಿಬಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು