ನ್ಯಾಯಸ್ಥಾಪಕರು 12:6 - ಪರಿಶುದ್ದ ಬೈಬಲ್6 ಅವರು ಅವನಿಗೆ, “ಷಿಬ್ಬೋಲೆತ್ ಅನ್ನು” ಎಂದು ಹೇಳುವರು. ಎಫ್ರಾಯೀಮಿನ ಜನರಿಗೆ ಆ ಪದವನ್ನು ಸರಿಯಾಗಿ ಉಚ್ಚರಿಸಲು ಬರುತ್ತಿರಲಿಲ್ಲ. ಅವರು ಆ ಪದವನ್ನು “ಸಿಬ್ಬೋಲೆತ್” ಎಂದು ಉಚ್ಚರಿಸುತ್ತಿದ್ದರು. ಆ ಮನುಷ್ಯನು “ಸಿಬ್ಬೋಲೆತ್” ಅಂದತಕ್ಷಣ ಗಿಲ್ಯಾದಿನ ಜನರಿಗೆ ಅವನು ಎಫ್ರಾಯೀಮ್ಯನೆಂದು ಗೊತ್ತಾಗುತ್ತಿತ್ತು. ಅವರು ಅವನನ್ನು ದಾರಿಯ ತಿರುವುಗಳಲ್ಲೇ ಕೊಂದುಬಿಡುತ್ತಿದ್ದರು. ಅವರು ಎಫ್ರಾಯೀಮಿನ ನಲವತ್ತೆರಡು ಸಾವಿರ ಜನರನ್ನು ಕೊಂದುಹಾಕಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವನು ಅಲ್ಲವೆಂದರೆ ಅವನಿಗೆ, “ನೀನು ಷಿಬ್ಬೋಲೆತ್ ಎಂದು ಹೇಳು” ಎಂದು ಹೇಳುವರು. ಹಾಗೆ ಅನ್ನಲಿಕ್ಕೆ ಬಾರದೆ ಅವನು ಸಿಬ್ಬೋಲೆತ್ ಅನ್ನುವನು. ಕೂಡಲೆ ಅವರು ಅವನನ್ನು ಹಿಡಿದು ಯೊರ್ದನಿನ ಹಾಯಗಡಗಳ (ಕಾಲ್ನಡಿಗೆಯಿಂದ ದಾಟಬಹುದಾದ ನಿರುಳ್ಳಸ್ಥಳ) ಬಳಿಯಲ್ಲೇ ಕೊಂದುಹಾಕುವರು. ಹೀಗೆ ಆ ಕಾಲದಲ್ಲಿ ಎಫ್ರಾಯೀಮ್ಯರೊಳಗೆ ನಲ್ವತ್ತೆರಡು ಸಾವಿರ ಜನರು ಹತರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅವನು, “ಇಲ್ಲ” ಎಂದರೆ ಅವನಿಗೆ, “ನೀನು ‘ಷಿಬ್ಬೋಲೆತ್’ ಅನ್ನು” ಎಂದು ಹೇಳುತ್ತಿದ್ದರು. ಹಾಗೆ ಉಚ್ಚಸರಿಸಲಿಕ್ಕೆ ಬಾರದೆ ಅವನು “ಸಿಬ್ಬೋಲೆತ್” ಅನ್ನುತ್ತಿದ್ದನು. ಕೂಡಲೇ ಅವರು ಅವನನ್ನು ಹಿಡಿದು ಜೋರ್ಡನಿನ ಹಾಯಗಡಗಳ ಬಳಿಯಲ್ಲೇ ಕೊಂದುಹಾಕುತ್ತಿದ್ದರು. ಹೀಗೆ ಆ ಕಾಲದಲ್ಲಿ ಎಫ್ರಯಿಮರಲ್ಲಿ ನಾಲ್ವತ್ತೆರಡು ಸಾವಿರ ಜನರು ನಾಶವಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವನು ಅಲ್ಲವೆಂದರೆ ಅವನಿಗೆ - ನೀನು ಷಿಬ್ಬೋಲೆತ್ ಅನ್ನು ಎಂದು ಹೇಳುವರು. ಹಾಗೆ ಅನ್ನಲಿಕ್ಕೆ ಬಾರದೆ ಅವನು ಸಿಬ್ಬೋಲೆತ್ ಅನ್ನುವನು. ಕೂಡಲೆ ಅವರು ಅವನನ್ನು ಹಿಡಿದು ಯೊರ್ದನಿನ ಹಾಯಗಡಗಳ ಬಳಿಯಲ್ಲೇ ಕೊಂದುಹಾಕುವರು. ಹೀಗೆ ಆ ಕಾಲದಲ್ಲಿ ಎಫ್ರಾಯೀಮ್ಯರೊಳಗೆ ನಾಲ್ವತ್ತೆರಡು ಸಾವಿರ ಜನರು ಹತರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಅವನು ಹಾಗೆ ಹೇಳಲಾರದೆ, “ಸಿಬ್ಬೋಲೆತ್,” ಎಂದು ಉಚ್ಛರಿಸುವವನನ್ನು ಹಿಡಿದು ಯೊರ್ದನ್ ನದಿ ರೇವುಗಳ ಬಳಿಯಲ್ಲಿ ಕೊಂದುಹಾಕುತ್ತಿದ್ದರು. ಹೀಗೆ ಆ ಕಾಲದಲ್ಲಿ ಎಫ್ರಾಯೀಮ್ಯರೊಳಗೆ ನಾಲ್ವತ್ತೆರಡು ಸಾವಿರ ಜನರು ನಾಶವಾದರು. ಅಧ್ಯಾಯವನ್ನು ನೋಡಿ |
ಗಿಲ್ಯಾದಿನ ಜನರು ಜೋರ್ಡನ್ ನದಿಯನ್ನು ದಾಟಲು ಅನುಕೂಲವಾದ ಸ್ಥಳಗಳನ್ನೆಲ್ಲಾ ವಶಪಡಿಸಿಕೊಂಡರು. ಅವು ಎಫ್ರಾಯೀಮ್ ಪ್ರದೇಶದೊಳಕ್ಕೆ ಹೋಗುವ ಮಾರ್ಗದಲ್ಲಿಯೇ ಇದ್ದವು. ಯಾವಾಗಲಾದರೂ ಎಫ್ರಾಯೀಮ್ ಕುಲದವರಲ್ಲಿ ಅಳಿದುಳಿದವನೊಬ್ಬ ಅಲ್ಲಿಗೆ ಬಂದು, “ನನ್ನನ್ನು ದಾಟಗೊಡಿರಿ” ಎಂದು ಕೇಳಿದರೆ ಗಿಲ್ಯಾದಿನವರು, “ನೀನು ಎಫ್ರಾಯೀಮಿನವನೇ?” ಎಂದು ಕೇಳುತ್ತಿದ್ದರು. ಅವನು “ಅಲ್ಲ” ಎಂದು ಉತ್ತರಿಸಿದರೆ,