ಅವರು ಅವನಿಗೆ, “ಷಿಬ್ಬೋಲೆತ್ ಅನ್ನು” ಎಂದು ಹೇಳುವರು. ಎಫ್ರಾಯೀಮಿನ ಜನರಿಗೆ ಆ ಪದವನ್ನು ಸರಿಯಾಗಿ ಉಚ್ಚರಿಸಲು ಬರುತ್ತಿರಲಿಲ್ಲ. ಅವರು ಆ ಪದವನ್ನು “ಸಿಬ್ಬೋಲೆತ್” ಎಂದು ಉಚ್ಚರಿಸುತ್ತಿದ್ದರು. ಆ ಮನುಷ್ಯನು “ಸಿಬ್ಬೋಲೆತ್” ಅಂದತಕ್ಷಣ ಗಿಲ್ಯಾದಿನ ಜನರಿಗೆ ಅವನು ಎಫ್ರಾಯೀಮ್ಯನೆಂದು ಗೊತ್ತಾಗುತ್ತಿತ್ತು. ಅವರು ಅವನನ್ನು ದಾರಿಯ ತಿರುವುಗಳಲ್ಲೇ ಕೊಂದುಬಿಡುತ್ತಿದ್ದರು. ಅವರು ಎಫ್ರಾಯೀಮಿನ ನಲವತ್ತೆರಡು ಸಾವಿರ ಜನರನ್ನು ಕೊಂದುಹಾಕಿದರು.
ಗಿಲ್ಯಾದ್ ಕ್ಷೇತ್ರದಲ್ಲಿ ವಾಸಮಾಡುತ್ತಿದ್ದ ಜನನಾಯಕರು, “ಅಮ್ಮೋನಿಯರ ಮೇಲೆ ಧಾಳಿಮಾಡಲು ಯಾರು ನಮ್ಮ ಮುಂದಾಳಾಗುತ್ತಾರೋ ಆ ವ್ಯಕ್ತಿಯೇ ಗಿಲ್ಯಾದ್ ಕ್ಷೇತ್ರದಲ್ಲಿ ವಾಸಮಾಡುವ ಜನರೆಲ್ಲರಿಗೂ ನಾಯಕನಾಗುತ್ತಾನೆ” ಎಂದು ಸಾರಿದರು.