ನ್ಯಾಯಸ್ಥಾಪಕರು 12:9 - ಪರಿಶುದ್ದ ಬೈಬಲ್9 ಇಬ್ಜಾನನಿಗೆ ಮೂವತ್ತು ಗಂಡುಮಕ್ಕಳು ಮತ್ತು ಮೂವತ್ತು ಹೆಣ್ಣುಮಕ್ಕಳು ಇದ್ದರು. ಅವನು ತನ್ನ ಮೂವತ್ತು ಹೆಣ್ಣುಮಕ್ಕಳಿಗೆ ತನ್ನ ರಕ್ತಸಂಬಂಧಿ ಅಲ್ಲದವರೊಂದಿಗೆ ಮದುವೆಯಾಗಬೇಕೆಂದು ಹೇಳಿದನು. ಅವನು ತನ್ನ ಸಂಬಂಧಿಗಳಲ್ಲದ ಮೂವತ್ತು ಕನ್ಯೆಯರನ್ನು ಹುಡುಕಿ ತನ್ನ ಗಂಡುಮಕ್ಕಳಿಗೆ ಅವರನ್ನು ಮದುವೆಮಾಡಿಸಿದನು. ಇಬ್ಜಾನನು ಏಳು ವರ್ಷ ಇಸ್ರೇಲರ ನ್ಯಾಯಾಧೀಶನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವನಿಗೆ ಮೂವತ್ತು ಮಂದಿ ಗಂಡುಮಕ್ಕಳೂ, ಮೂವತ್ತು ಮಂದಿ ಹೆಣ್ಣುಮಕ್ಕಳೂ ಇದ್ದರು. ತನ್ನ ಹೆಣ್ಣುಮಕ್ಕಳನ್ನು ಬೇರೆಯವರಿಗೆ ಕೊಟ್ಟು, ಗಂಡುಮಕ್ಕಳಿಗೋಸ್ಕರ ಹೊರಗಿನ ಮೂವತ್ತು ಮಂದಿ ಕನ್ಯೆಯರನ್ನು ತಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವನಿಗೆ ಮೂವತ್ತು ಮಂದಿ ಗಂಡುಮಕ್ಕಳೂ ಮೂವತ್ತು ಮಂದಿ ಹೆಣ್ಣುಮಕ್ಕಳೂ ಇದ್ದರು. ತನ್ನ ಹೆಣ್ಣುಮಕ್ಕಳನ್ನು ಬೇರೆಯವರಿಗೆ ಕೊಟ್ಟು ಗಂಡುಮಕ್ಕಳಿಗಾಗಿ ಹೊರಗಿನ ಮೂವತ್ತು ಮಂದಿ ಕನ್ಯೆಯರನ್ನು ತಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವನಿಗೆ ಮೂವತ್ತು ಮಂದಿ ಗಂಡುಮಕ್ಕಳೂ ಮೂವತ್ತು ಮಂದಿ ಹೆಣ್ಣುಮಕ್ಕಳೂ ಇದ್ದರು; ತನ್ನ ಹೆಣ್ಣು ಮಕ್ಕಳನ್ನು ಬೇರೆಯವರಿಗೆ ಕೊಟ್ಟು ಗಂಡು ಮಕ್ಕಳಿಗೋಸ್ಕರ ಹೊರಗಿನ ಮೂವತ್ತು ಮಂದಿ ಕನ್ಯೆಯರನ್ನು ತಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವನಿಗೆ ಮೂವತ್ತು ಮಂದಿ ಪುತ್ರರು, ಮೂವತ್ತು ಮಂದಿ ಪುತ್ರಿಯರು ಇದ್ದರು. ಪುತ್ರಿಯರನ್ನು ಹೊರಗೆ ಮದುವೆ ಮಾಡಿಕೊಟ್ಟನು; ಹೊರಗಿನಿಂದ ಮೂವತ್ತು ಮಂದಿ ಕನ್ಯೆಯರನ್ನು ತನ್ನ ಪುತ್ರರಿಗೆ ತೆಗೆದುಕೊಂಡನು. ಅವನು ಇಸ್ರಾಯೇಲಿಗೆ ಏಳು ವರ್ಷ ನ್ಯಾಯತೀರಿಸಿದನು. ಅಧ್ಯಾಯವನ್ನು ನೋಡಿ |