Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 13:16 - ಪರಿಶುದ್ದ ಬೈಬಲ್‌

16 ಆಗ ಯೆಹೋವನ ದೂತನು ಮಾನೋಹನಿಗೆ, “ನೀನು ನನ್ನನ್ನು ಹೋಗದಂತೆ ನಿಲ್ಲಿಸಿಕೊಂಡರೂ ಸಹ ನಾನು ನಿಮ್ಮ ಆಹಾರವನ್ನು ಊಟ ಮಾಡುವುದಿಲ್ಲ. ಏನಾದರೂ ಕೊಡಬೇಕೆಂದು ನಿನಗೆ ಮನಸ್ಸಿದ್ದರೆ ಅದನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸು” ಅಂದನು. (ಅವನು ಯೆಹೋವನ ದೂತನೆಂಬುದು ಮಾನೋಹನಿಗೆ ಗೊತ್ತಿರಲಿಲ್ಲ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನ ದೂತನು ಮಾನೋಹನಿಗೆ, “ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ಆಹಾರವನ್ನು ಊಟಮಾಡುವುದಿಲ್ಲ; ಯಜ್ಞಮಾಡಬೇಕೆಂದು ನಿನಗೆ ಮನಸ್ಸಿದ್ದರೆ ಅದನ್ನು ಯೆಹೋವನಿಗೆ ಸಮರ್ಪಿಸು” ಅಂದನು. ಅವನು ಯೆಹೋವನ ದೂತನೆಂಬುದು ಮಾನೋಹನಿಗೆ ಗೊತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ಆಹಾರವನ್ನು ಊಟಮಾಡುವುದಿಲ್ಲ; ಬಲಿದಾನ ಮಾಡಬೇಕೆಂದು ನಿನಗೆ ಮನಸ್ಸಿದ್ದರೆ ಅದನ್ನು ಸರ್ವೇಶ್ವರನಿಗೆ ಸಮರ್ಪಿಸು,” ಎಂದನು. ಅವನು ಸರ್ವೇಶ್ವರನ ದೂತನೆಂಬುದು ಮಾನೋಹನಿಗೆ ಗೊತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವನು - ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ಆಹಾರವನ್ನು ಊಟಮಾಡುವದಿಲ್ಲ; ಯಜ್ಞಮಾಡಬೇಕೆಂದು ನಿನಗೆ ಮನಸ್ಸಿದ್ದರೆ ಅದನ್ನು ಯೆಹೋವನಿಗೆ ಸಮರ್ಪಿಸು ಅಂದನು. ಅವನು ಯೆಹೋವನ ದೂತನೆಂಬದು ಮಾನೋಹನಿಗೆ ಗೊತ್ತಿದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆಹೋವ ದೇವರ ದೂತನು ಮಾನೋಹನಿಗೆ, “ನೀನು ನನ್ನನ್ನು ನಿಲ್ಲಿಸಿಕೊಂಡರೂ, ನಾನು ನಿನ್ನ ರೊಟ್ಟಿಯನ್ನು ತಿನ್ನುವುದಿಲ್ಲ; ನೀನು ದಹನಬಲಿಯನ್ನು ಅರ್ಪಿಸಿದರೆ, ಅದನ್ನು ಯೆಹೋವ ದೇವರಿಗೆ ಅರ್ಪಿಸಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 13:16
5 ತಿಳಿವುಗಳ ಹೋಲಿಕೆ  

ಆದರೆ ಅವನ ಹೆಂಡತಿಯು ಅವನಿಗೆ, “ಯೆಹೋವನು ನಮ್ಮನ್ನು ಕೊಲ್ಲಬಯಸುವುದಿಲ್ಲ. ಯೆಹೋವನು ನಮ್ಮನ್ನು ಕೊಲ್ಲಬೇಕೆಂದಿದ್ದರೆ ಆತನು ನಮ್ಮ ಕೈಯಿಂದ ಸರ್ವಾಂಗಹೋಮವನ್ನೂ ಧಾನ್ಯಸಮರ್ಪಣೆಯನ್ನೂ ಸ್ವೀಕರಿಸುತ್ತಿರಲಿಲ್ಲ; ಆತನು ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ; ಇದನ್ನೆಲ್ಲ ನಮಗೆ ಹೇಳುತ್ತಿರಲಿಲ್ಲ” ಅಂದಳು.


ಬಳಿಕ ನಿಮ್ಮ ದೇವರಾದ ಯೆಹೋವನಿಗಾಗಿ ಸರಿಯಾದ ಯಜ್ಞವೇದಿಕೆಯನ್ನು ಈ ಗುಡ್ಡದ ಶಿಖರದಲ್ಲಿ ಕಟ್ಟಿಸು. ಆಮೇಲೆ ಆ ಎರಡನೆಯ ಹೋರಿಯನ್ನು ಈ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸು; ಅಶೇರಸ್ತಂಭದ ಕಟ್ಟಿಗೆಯನ್ನು ಈ ಸರ್ವಾಂಗಹೋಮಕ್ಕೆ ಉಪಯೋಗಿಸು” ಎಂದು ಹೇಳಿದನು.


ದೇವದೂತನು ಗಿದ್ಯೋನನಿಗೆ, “ಆ ಮಾಂಸವನ್ನೂ ಹುಳಿಯಿಲ್ಲದ ಆ ರೊಟ್ಟಿಯನ್ನೂ ಆ ಕಲ್ಲಿನ ಮೇಲೆ ಇಡು. ಆಮೇಲೆ ಆ ನೀರನ್ನು ಅದರ ಮೇಲೆ ಸುರಿ” ಎಂದನು. ದೇವದೂತನು ಹೇಳಿದಂತೆಯೇ ಗಿದ್ಯೋನನು ಮಾಡಿದನು.


ನಾನು ನಿಮಗೆ ಊಟವನ್ನು ತಂದುಕೊಡುವೆನು. ನೀವು ಬೇಕಾದಷ್ಟು ಊಟ ಮಾಡಿದ ನಂತರ ನಿಮ್ಮ ಪ್ರಯಾಣವನ್ನು ಮುಂದುವರಿಸಬಹುದು” ಎಂದು ಹೇಳಿದನು. ಆ ಮೂವರು ಪುರುಷರು, “ಸರಿ, ನೀನು ಹೇಳಿದಂತೆಯೇ ಮಾಡು” ಅಂದರು.


ಆ ಮನುಷ್ಯನು ನಿಜವಾಗಿಯೂ ಯೆಹೋವನ ದೂತನೆಂದು ಕೊನೆಗೆ ಮಾನೋಹನು ಅರಿತುಕೊಂಡನು. ಯೆಹೋವನ ದೂತನು ಅವರಿಗೆ ಪುನಃ ಕಾಣಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು