ನ್ಯಾಯಸ್ಥಾಪಕರು 13:2 - ಪರಿಶುದ್ದ ಬೈಬಲ್2 ಚೊರ್ಗಾ ನಗರದಲ್ಲಿ ಒಬ್ಬ ಮನುಷ್ಯನಿದ್ದನು. ಅವನ ಹೆಸರು ಮಾನೋಹ, ಅವನು ದಾನ್ ಕುಲದವನಾಗಿದ್ದನು. ಮಾನೋಹನಿಗೆ ಒಬ್ಬ ಹೆಂಡತಿಯಿದ್ದಳು. ಆದರೆ ಅವಳು ಬಂಜೆಯಾಗಿದ್ದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಚೊರ್ಗಾ ಎಂಬ ಊರಲ್ಲಿ ದಾನ್ ಕುಲದವನಾದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು. ಅವನ ಹೆಂಡತಿಯು ಬಂಜೆಯಾಗಿದ್ದರಿಂದ ಅವನಿಗೆ ಮಕ್ಕಳಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಚೊರ್ಗಾ ಎಂಬ ಊರಲ್ಲಿ ದಾನ್ ಕುಲದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು. ಅವನ ಹೆಂಡತಿ ಬಂಜೆಯಾಗಿದ್ದುದರಿಂದ ಅವನಿಗೆ ಮಕ್ಕಳಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಚೊರ್ಗಾ ಎಂಬ ಊರಲ್ಲಿ ದಾನ್ ಕುಲದವನಾದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು. ಅವನ ಹೆಂಡತಿಯು ಬಂಜೆಯಾಗಿದ್ದದರಿಂದ ಅವನಿಗೆ ಮಕ್ಕಳಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆದರೆ ಚೊರ್ಗದವನಾದ ದಾನನ ಗೋತ್ರದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು. ಅವನ ಹೆಂಡತಿಯು ಮಕ್ಕಳನ್ನು ಹೆರದೆ, ಬಂಜೆಯಾಗಿದ್ದಳು. ಅಧ್ಯಾಯವನ್ನು ನೋಡಿ |
ಯೆಹೋವನ ದೂತನು ಗಿಲ್ಗಾಲ್ ನಗರದಿಂದ ಬೋಕೀಮ್ ನಗರದವರೆಗೆ ಹೋದನು. ಆ ದೂತನು ಇಸ್ರೇಲರಿಗೆ ಯೆಹೋವನ ಒಂದು ಸಂದೇಶವನ್ನು ತಿಳಿಸಿದನು. ಆ ಸಂದೇಶವು ಹೀಗೆದೆ: “ನಾನು ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿ ಹೊರಗೆತಂದೆ. ನಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಪ್ರದೇಶಕ್ಕೆ ನಿಮ್ಮನ್ನು ಕರೆದುಕೊಂಡು ಬಂದೆನು. ‘ನಾನು ನಿಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದಿಗೂ ಮುರಿಯುವುದಿಲ್ಲ.