ನ್ಯಾಯಸ್ಥಾಪಕರು 13:5 - ಪರಿಶುದ್ದ ಬೈಬಲ್5 ಏಕೆಂದರೆ ನೀನು ಗರ್ಭವತಿಯಾಗಿರುವೆ ಮತ್ತು ನಿನಗೊಬ್ಬ ಮಗನು ಹುಟ್ಟಲಿದ್ದಾನೆ. ಅವನು ಹುಟ್ಟಿದಂದಿನಿಂದಲೇ ದೇವರಿಗೆ ಪ್ರತಿಷ್ಠಿತನಾಗಿದ್ದಾನೆ. ಆದ್ದರಿಂದ ಅವನ ಕೂದಲನ್ನು ಕತ್ತರಿಸಕೂಡದು. ಅವನು ಇಸ್ರೇಲರನ್ನು ಫಿಲಿಷ್ಟಿಯರ ಹಿಡಿತದಿಂದ ಬಿಡಿಸುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇಬಾರದು; ಅವನು ಹುಟ್ಟಿದಂದಿನಿಂದ ದೇವರಿಗೆ ಪ್ರತಿಷ್ಠಿತನಾಗಿರುವನು; ಇಸ್ರಾಯೇಲರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಲು ಪ್ರಾರಂಭಿಸುವನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇ ಬಾರದು. ಅವನು ಹುಟ್ಟಿನಿಂದ ದೇವರಿಗೆ ಪ್ರತಿಷ್ಠಿತನಾಗುವನು. ಅವನು ಇಸ್ರಯೇಲರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸುವುದಕ್ಕೆ ಪ್ರಾರಂಭಿಸುವನು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇಬಾರದು; ಅವನು ಹುಟ್ಟಿದಂದಿನಿಂದ ದೇವರಿಗೆ ಪ್ರತಿಷ್ಠಿತನಾಗಿರುವನು; ಇಸ್ರಾಯೇಲ್ಯರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸುವದಕ್ಕೆ ಪ್ರಾರಂಭಿಸುವನು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನೀನು ಗರ್ಭವನ್ನು ಧರಿಸಿ, ಒಬ್ಬ ಮಗನನ್ನು ಹೆರುವೆ; ಅವನ ತಲೆಯ ಮೇಲೆ ಕ್ಷೌರದ ಕತ್ತಿ ಬರಬಾರದು. ಏಕೆಂದರೆ ಗರ್ಭದಿಂದಲೇ ಆ ಹುಡುಗನು ದೇವರಿಗೆ ಪ್ರತಿಷ್ಠಿತನಾದ ನಾಜೀರನಾಗಿರುವನು. ಅವನು ಇಸ್ರಾಯೇಲರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ, ರಕ್ಷಿಸಲು ಪ್ರಾರಂಭಿಸುವನು,” ಎಂದನು. ಅಧ್ಯಾಯವನ್ನು ನೋಡಿ |
ಅವಳು ದೇವರಲ್ಲಿ ಒಂದು ವಿಶೇಷ ವಾಗ್ದಾನವನ್ನು ಮಾಡಿದಳು. ಅವಳು, “ಯೆಹೋವನೇ, ಸರ್ವಶಕ್ತನೇ, ನಾನು ಎಷ್ಟು ದುಃಖಿತಳೆಂಬುದನ್ನು ನೋಡು, ನನ್ನನ್ನು ಜ್ಞಾಪಿಸಿಕೊ! ನನ್ನನ್ನು ಮರೆಯದಿರು. ನೀನು ನನಗೊಬ್ಬ ಮಗನನ್ನು ಕರುಣಿಸಿದರೆ, ಅವನು ಜೀವದಿಂದಿರುವ ತನಕ ನಿನ್ನವನಾಗಿರುವಂತೆ ನಿನಗೇ ಪ್ರತಿಷ್ಠಿಸುತ್ತೇನೆ. ಅವನು ನಾಜೀರನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಇತರೆ ಮದ್ಯವನ್ನಾಗಲಿ ಸೇವಿಸುವುದಿಲ್ಲ. ಅವನ ತಲೆಕೂದಲನ್ನು ಕ್ಷೌರ ಕತ್ತಿಯಿಂದ ಕತ್ತರಿಸುವುದಿಲ್ಲ” ಎಂದು ಹೇಳಿದಳು