Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 13:6 - ಪರಿಶುದ್ದ ಬೈಬಲ್‌

6 ಆಗ ಆ ಸ್ತ್ರೀಯು ತನ್ನ ಗಂಡನ ಬಳಿಗೆ ಹೋಗಿ, “ಒಬ್ಬ ದೇವಪುರುಷನು ನನ್ನಲ್ಲಿಗೆ ಬಂದನು. ಅವನು ದೇವರಿಂದ ಬಂದ ದೇವದೂತನಂತೆ ಕಂಡನು. ನನಗೆ ಭಯವಾಯಿತು. ನಾನು ಅವನಿಗೆ, ‘ನೀನು ಎಲ್ಲಿಂದ ಬಂದೆ?’ ಎಂದು ಕೇಳಲಿಲ್ಲ; ಅವನೂ ನನಗೆ ತನ್ನ ಹೆಸರನ್ನು ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ತರುವಾಯ ಆ ಸ್ತ್ರೀಯು ತನ್ನ ಗಂಡನ ಬಳಿಗೆ ಹೋಗಿ, “ಒಬ್ಬ ದೇವರಪುರುಷನು ನನ್ನ ಹತ್ತಿರ ಬಂದಿದ್ದನು. ಅವನ ರೂಪವು ದೇವದೂತನ ರೂಪದಂತಿದ್ದು ಭಯಂಕರನಾಗಿದ್ದನು. ನೀನು ಎಲ್ಲಿಂದ ಬಂದಿ ಎಂದು ನಾನು ಅವನನ್ನು ಕೇಳಲಿಲ್ಲ; ಅವನೂ ತನ್ನ ಹೆಸರನ್ನು ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ತರುವಾಯ ಆ ಸ್ತ್ರೀ ತನ್ನ ಗಂಡನ ಬಳಿಗೆ ಹೋಗಿ, “ಒಬ್ಬ ದೇವಪುರುಷ ನನ್ನ ಹತ್ತಿರ ಬಂದಿದ್ದನು. ಅವನ ರೂಪ ದೇವದೂತನ ರೂಪದಂತೆ ಘನಗಂಭೀರವಾಗಿತ್ತು. ‘ಎಲ್ಲಿಂದ ಬಂದಿರಿ?’ ಎಂದು ನಾನು ಅವನನ್ನು ಕೇಳಲಿಲ್ಲ; ಅವನೂ ತನ್ನ ಹೆಸರನ್ನು ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ತರುವಾಯ ಆ ಸ್ತ್ರೀಯು ತನ್ನ ಗಂಡನ ಬಳಿಗೆ ಹೋಗಿ - ಒಬ್ಬ ದೇವಪುರುಷನು ನನ್ನ ಹತ್ತಿರ ಬಂದಿದ್ದನು. ಅವನ ರೂಪವು ದೇವದೂತನ ರೂಪದಂತಿದ್ದು ಭಯಂಕರನಾಗಿದ್ದನು. ನೀನು ಎಲ್ಲಿಂದ ಬಂದಿ ಎಂದು ನಾನು ಅವನನ್ನು ಕೇಳಲಿಲ್ಲ; ಅವನೂ ತನ್ನ ಹೆಸರನ್ನು ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಆ ಸ್ತ್ರೀಯು ಬಂದು ತನ್ನ ಗಂಡನಿಗೆ, “ಒಬ್ಬ ದೇವರ ಮನುಷ್ಯ ನನ್ನ ಹತ್ತಿರ ಬಂದಿದ್ದನು. ಅವನ ರೂಪವು ದೇವದೂತನ ರೂಪದ ಹಾಗೆ ಮಹಾ ಭಯಂಕರವಾಗಿತ್ತು. ನಾನು ಅವನನ್ನು ಎಲ್ಲಿಂದ ಬಂದೆ ಎಂದು ಕೇಳಲಿಲ್ಲ; ಅವನು ತನ್ನ ಹೆಸರನ್ನು ನನಗೆ ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 13:6
29 ತಿಳಿವುಗಳ ಹೋಲಿಕೆ  

ಆದರೆ ಆ ಸೇವಕನು, “ಈ ಪಟ್ಟಣದಲ್ಲಿ ಒಬ್ಬ ದೇವರ ಮನುಷ್ಯನಿದ್ದಾನೆ. ಜನರು ಅವನನ್ನು ಗೌರವಿಸುತ್ತಾರೆ. ಅವನು ಹೇಳುವ ವಿಷಯಗಳೆಲ್ಲ ನಿಜವಾಗುತ್ತವೆ. ಆದ್ದರಿಂದ ಈ ಪಟ್ಟಣಕ್ಕೆ ಹೋಗೋಣ ಬಹುಶಃ ನಾವು ಮುಂದೆ ಎಲ್ಲಿಗೆ ಹೋಗಬೇಕೆಂಬುದನ್ನು ಈ ದೇವರ ಮನುಷ್ಯನು ತಿಳಿಸಬಹುದು” ಎಂದು ಉತ್ತರಿಸಿದನು.


ದೇವರ ಮನುಷ್ಯನಾದ ಮೋಶೆಯು ತಾನು ಸಾಯುವ ಮೊದಲು ಇಸ್ರೇಲರನ್ನು ಆಶೀರ್ವದಿಸಿದನು.


ನಾನು ಆತನನ್ನು ನೋಡಿದಾಗ, ಆತನ ಪಾದಗಳ ಬಳಿ ಸತ್ತವನಂತೆ ಕುಸಿದುಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ! ನಾನೇ ಆದಿ ಮತ್ತು ಅಂತ್ಯ.


ಸಭೆಯಲ್ಲಿ ಕುಳಿತಿದ್ದವರೆಲ್ಲರೂ ಸ್ತೆಫನನ ಮುಖವನ್ನು ದಿಟ್ಟಿಸಿ ನೋಡಲು ಅವನ ಮುಖವು ದೇವದೂತನ ಮುಖದಂತೆ ಕಂಗೊಳಿಸಿತು.


ಯೇಸು ಪ್ರಾರ್ಥಿಸುತ್ತಿದ್ದಾಗ, ಆತನ ಮುಖವು ರೂಪಾಂತರವಾಯಿತು. ಆತನ ಬಟ್ಟೆಗಳು ಬೆಳ್ಳಗೆ ಹೊಳೆಯತೊಡಗಿದವು.


ದೇವದೂತನು, “ನನ್ನ ಹೆಸರು ಗಬ್ರಿಯೇಲ. ನಾನು ದೇವರ ಸನ್ನಿಧಿಯಲ್ಲಿ ನಿಂತುಕೊಂಡಿರುವವನು. ನಿನಗೆ ಈ ಶುಭಸಮಾಚಾರವನ್ನು ತಿಳಿಸಲು ದೇವರು ನನ್ನನ್ನು ಕಳುಹಿಸಿದ್ದಾನೆ.


ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು ನನಗೆ, “ದಾನಿಯೇಲನೇ, ದೇವರು ನಿನ್ನನ್ನು ತುಂಬ ಪ್ರೀತಿಸುತ್ತಾನೆ. ನಾನು ನಿನಗೆ ಈ ಮುಂದೆ ಹೇಳುವ ಮಾತುಗಳ ಬಗ್ಗೆ ಚೆನ್ನಾಗಿ ವಿಚಾರಮಾಡು. ಎದ್ದುನಿಲ್ಲು, ನನ್ನನ್ನು ನಿನ್ನ ಬಳಿಗೆ ಕಳುಹಿಸಲಾಗಿದೆ” ಎಂದು ಹೇಳಿದನು. ಆಗ ನಾನು ಎದ್ದುನಿಂತೆ. ನಾನು ಭಯದಿಂದ ಇನ್ನೂ ನಡುಗುತ್ತಿದ್ದೆ.


ಅಲ್ಲಿ ನಿಂತುಕೊಂಡಿದ್ದಾಗ ನಾನು ಮುಖವೆತ್ತಿ ನೋಡಿದೆ. ನನ್ನ ಎದುರಿಗೆ ಒಬ್ಬ ವ್ಯಕ್ತಿಯು ನಿಂತಿದ್ದನ್ನು ಕಂಡೆ. ಅವನು ನಾರುಬಟ್ಟೆಯನ್ನು ಧರಿಸಿಕೊಂಡಿದ್ದನು. ಅವನು ಊಫಜಿನ ಅಪರಂಜಿಯ ಪಟ್ಟಿಯನ್ನು ಸೊಂಟಕ್ಕೆ ಬಿಗಿದುಕೊಂಡಿದ್ದನು.


ಆಗ ಮನುಷ್ಯನಂತಿದ್ದ ಗಬ್ರಿಯೇಲನು ನಾನು ನಿಂತಲ್ಲಿಗೆ ಬಂದನು. ಅವನು ತೀರ ನನ್ನ ಹತ್ತಿರಕ್ಕೆ ಬಂದಾಗ ನನಗೆ ಬಹಳ ಭಯವಾಯಿತು. ನಾನು ನೆಲಕ್ಕೆ ಬಿದ್ದೆ. ಆದರೆ ಗಬ್ರಿಯೇಲನು ನನಗೆ, “ಮನುಷ್ಯನೇ, ಈ ದರ್ಶನ ಅಂತ್ಯಕಾಲದ ಕುರಿತಾಗಿದೆ ಎಂಬುದು ನಿನಗೆ ತಿಳಿದಿರಲಿ” ಎಂದು ಹೇಳಿದನು.


ಆ ಸ್ತ್ರೀಯು ತನ್ನ ಗಂಡನಿಗೆ, “ನೋಡಿ, ನಮ್ಮ ಮನೆಯ ದಾರಿಯಲ್ಲಿ ಹಾದುಹೋಗುವ ಎಲೀಷನು ಪರಿಶುದ್ಧನೂ ದೇವಮನುಷ್ಯನೂ ಎಂದು ನನಗೆ ತೋರುತ್ತದೆ.


ಆದರೆ ನೀನು ದೇವರ ಮನುಷ್ಯ. ಆದ್ದರಿಂದ ಈ ಎಲ್ಲಾ ಸಂಗತಿಗಳಿಂದ ದೂರವಾಗಿರು. ದೇವರ ಸೇವೆಯನ್ನು ಮಾಡುತ್ತಾ ಉತ್ತಮಮಾರ್ಗದಲ್ಲಿ ಜೀವಿಸಲು ಪ್ರಯತ್ನಿಸು; ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತೆಗಳನ್ನು ಹೊಂದಿದವನಾಗಿರು.


ಎಲೀಷನು ಆ ಸ್ತ್ರೀಗೆ, “ಮುಂದಿನ ವಸಂತಮಾಸದ ಈ ಕಾಲಕ್ಕೆ ನೀನು ನಿನ್ನ ಗಂಡುಮಗುವನ್ನು ಅಪ್ಪಿಕೊಂಡಿರುವೆ” ಎಂದು ಹೇಳಿದನು. ಆ ಸ್ತ್ರೀಯು, “ದೇವಮನುಷ್ಯನೇ, ಹೀಗೆ ಹೇಳಿ ನಿನ್ನ ಸೇವಕಿಯನ್ನು ವಂಚಿಸಬೇಡ” ಎಂದು ಹೇಳಿದಳು.


ಆ ಸ್ತ್ರೀಯು, “ಈಗ ನಿಜವಾಗಿಯೂ ನೀನು ದೇವಮನುಷ್ಯನೆಂಬುದು ನನಗೆ ತಿಳಿಯಿತು. ಯೆಹೋವನು ನಿನ್ನ ಮೂಲಕ ನಿಜವಾಗಿಯೂ ಮಾತಾಡುತ್ತಾನೆಂಬುದು ನನಗೆ ತಿಳಿದಿದೆ” ಎಂದು ಹೇಳಿದಳು.


ಆ ಸ್ತ್ರೀಯು ಎಲೀಯನಿಗೆ, “ನೀನು ದೇವಮನುಷ್ಯ. ನೀನು ನನಗೆ ಸಹಾಯಮಾಡಲು ಬಂದಿರುವೆಯಾ? ಅಥವಾ ನನ್ನ ಪಾಪಗಳನ್ನೆಲ್ಲ ನನ್ನ ನೆನಪಿಗೆ ತಂದುಕೊಳ್ಳುವಂತೆ ಮಾಡಲು, ನನ್ನ ಮಗನಿಗೆ ಸಾವನ್ನು ಉಂಟುಮಾಡುವುದಕ್ಕಾಗಿಯೇ ಬಂದಿರುವೆಯಾ?” ಎಂದು ಕೇಳಿದಳು.


ದೇವಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು, “ಯೆಹೋವನು ಈ ಸಂಗತಿಗಳನ್ನು ತಿಳಿಸಿದನು: ‘ನಿನ್ನ ಪೂರ್ವಿಕರು ಈಜಿಪ್ಟಿನಲ್ಲಿ ಫರೋಹನ ಗುಲಾಮರಾಗಿದ್ದರು. ಆಗ ನಾನು ನಿನ್ನ ಪೂರ್ವಿಕರಿಗೆ ದರ್ಶನ ನೀಡಿದೆ.


ನಂತರ ಮಾನೋಹನು ತನ್ನ ಹೆಂಡತಿಗೆ, “ನಾವು ದೇವರನ್ನು ಕಣ್ಣಾರೆ ಕಂಡೆವು, ಆದ್ದರಿಂದ ಖಂಡಿತವಾಗಿ ನಾವು ಸತ್ತುಹೋಗುತ್ತೇವೆ” ಅಂದನು.


ಆಗ ಮಾನೋಹನು ಯೆಹೋವನಿಗೆ, “ಸ್ವಾಮೀ, ಆ ದೇವಪುರುಷನನ್ನು ನಮ್ಮಲ್ಲಿಗೆ ಇನ್ನೊಮ್ಮೆ ದಯವಿಟ್ಟು ಕಳುಹಿಸೆಂದು ಬೇಡಿಕೊಳ್ಳುತ್ತೇವೆ. ಹುಟ್ಟಿಲಿರುವ ಮಗನಿಗಾಗಿ ನಾವು ಮಾಡಬೇಕಾದದ್ದನ್ನು ಅವನು ನಮಗೆ ತಿಳಿಸಲಿ” ಎಂದು ಬೇಡಿಕೊಂಡನು.


ಒಂದು ದಿವಸ ಯೆಹೂದ ಕುಲದ ಕೆಲವರು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಬಳಿಗೆ ಬಂದರು. ಅವರಲ್ಲಿ ಕನಿಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಒಬ್ಬನಾಗಿದ್ದನು. ಕಾಲೇಬನು ಯೆಹೋಶುವನಿಗೆ, “ಕಾದೇಶ್‌ಬರ್ನೇಯದಲ್ಲಿ ಯೆಹೋವನು ತನ್ನ ಸೇವಕನಾದ ಮೋಶೆಯೊಂದಿಗೆ ನಮ್ಮಿಬ್ಬರ ವಿಷಯವಾಗಿ ಮಾತಾಡಿದ್ದು ನಿನಗೆ ನೆನಪಿದೆಯಷ್ಟೇ.


ನಾನು ನಿನ್ನ ಪೂರ್ವಿಕರ ದೇವರು, ನಾನು ಅಬ್ರಹಾಮನ ದೇವರು, ನಾನು ಇಸಾಕನ ದೇವರು, ನಾನು ಯಾಕೋಬನ ದೇವರು” ಎಂದು ಹೇಳಿದನು. ದೇವರನ್ನು ನೋಡುವುದಕ್ಕೆ ಭಯಪಟ್ಟು ಮೋಶೆ ತನ್ನ ಮುಖವನ್ನು ಮುಚ್ಚಿಕೊಂಡನು.


ಆ ಬೆಟ್ಟದಲ್ಲಿ ಯೆಹೋವನ ದೂತನು ಮೋಶೆಗೆ ಉರಿಯುವ ಪೊದೆಯಲ್ಲಿ ಕಾಣಿಸಿಕೊಂಡನು. ಪೊದೆಯು ಉರಿಯುತ್ತಿದ್ದರೂ ಸುಟ್ಟು ಹೋಗದಿರುವುದನ್ನು ಮೋಶೆ ಗಮನಿಸಿದನು.


ಯಾಕೋಬನು ಆತನಿಗೆ, “ದಯವಿಟ್ಟು ನಿನ್ನ ಹೆಸರನ್ನು ತಿಳಿಸು” ಎಂದು ಕೇಳಿದನು. ಅದಕ್ಕೆ ಆ ಪುರುಷನು, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಯಾಕೋಬನನ್ನು ಆಶೀರ್ವದಿಸಿದನು.


ಅಬ್ರಹಾಮನು ದೃಷ್ಟಿಸಿ ನೋಡಿದಾಗ ತನ್ನ ಮುಂದೆ ಮೂವರು ಪುರುಷರು ನಿಂತಿರುವುದನ್ನು ಕಂಡನು. ಕೂಡಲೇ ಅವರ ಬಳಿಗೆ ಓಡಿಹೋಗಿ ಅವರಿಗೆ ಸಾಷ್ಟಾಂಗನಮಸ್ಕಾರ ಮಾಡಿ ಅವರಿಗೆ,


ಆ ಸಮಯದಲ್ಲಿ ಯೆಹೋವನ ದೂತನು ಗಿದ್ಯೋನ ಎಂಬ ವ್ಯಕ್ತಿಯ ಬಳಿಗೆ ಬಂದನು. ಯೆಹೋವನ ದೂತನು ಒಫ್ರ ಎಂಬ ಊರಲ್ಲಿ ಏಲಾ ವೃಕ್ಷದ ಕೆಳಗೆ ಕುಳಿತುಕೊಂಡನು. ಆ ಗಿಡವು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಯೋವಾಷನು ಗಿದ್ಯೋನನ ತಂದೆ. ಗಿದ್ಯೋನನು ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು. ಯೆಹೋವನ ದೂತನು ಗಿದ್ಯೋನನ ಹತ್ತಿರ ಕುಳಿತುಕೊಂಡನು. ಮಿದ್ಯಾನ್ಯರಿಗೆ ಗೋಧಿ ಕಾಣಬಾರದೆಂದು ಗಿದ್ಯೋನನು ಮರೆಯಾಗಿದ್ದನು.


ಒಮ್ಮೆ ಯೆಹೋವನ ದೂತನು ಮಾನೋಹನ ಹೆಂಡತಿಗೆ ಪ್ರತ್ಯಕ್ಷನಾಗಿ, “ನೀನು ಮಕ್ಕಳನ್ನು ಪಡೆಯಲು ಸಾಧ್ಯವಾಗಿಲ್ಲ; ಆದರೆ ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ.


ಆದರೆ ಅವನು ನನಗೆ, ‘ನೀನು ಗರ್ಭವತಿಯಾಗಿರುವೆ; ನಿನಗೊಬ್ಬ ಮಗನು ಹುಟ್ಟುತ್ತಾನೆ. ನೀನು ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿಯಬೇಡ. ಯಾವ ನಿಷಿದ್ಧ ಆಹಾರವನ್ನೂ ತಿನ್ನಬೇಡ. ಏಕೆಂದರೆ ಆ ಹುಡುಗನು ಹುಟ್ಟಿದಂದಿನಿಂದ ಸಾಯುವವರೆಗೂ ದೇವರಿಗೆ ಪ್ರತಿಷ್ಠಿತನಾಗಿರುವನು ಎಂದು ಹೇಳಿದನು’” ಅಂದಳು.


ಆ ಸ್ತ್ರೀಯು ಓಡಿಹೋಗಿ ತನ್ನ ಗಂಡನಿಗೆ, “ಆ ಮನುಷ್ಯನು ತಿರುಗಿ ಬಂದಿದ್ದಾನೆ, ಆ ದಿನ ನನ್ನಲ್ಲಿಗೆ ಬಂದ ಮನುಷ್ಯನು ಈಗ ಇಲ್ಲಿದ್ದಾನೆ” ಅಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು