ನ್ಯಾಯಸ್ಥಾಪಕರು 13:7 - ಪರಿಶುದ್ದ ಬೈಬಲ್7 ಆದರೆ ಅವನು ನನಗೆ, ‘ನೀನು ಗರ್ಭವತಿಯಾಗಿರುವೆ; ನಿನಗೊಬ್ಬ ಮಗನು ಹುಟ್ಟುತ್ತಾನೆ. ನೀನು ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿಯಬೇಡ. ಯಾವ ನಿಷಿದ್ಧ ಆಹಾರವನ್ನೂ ತಿನ್ನಬೇಡ. ಏಕೆಂದರೆ ಆ ಹುಡುಗನು ಹುಟ್ಟಿದಂದಿನಿಂದ ಸಾಯುವವರೆಗೂ ದೇವರಿಗೆ ಪ್ರತಿಷ್ಠಿತನಾಗಿರುವನು ಎಂದು ಹೇಳಿದನು’” ಅಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದರೆ ನನಗೆ, ‘ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವಿ; ಆದುದರಿಂದ ನೀನು ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು, ಯಾವ ನಿಷಿದ್ಧಾಹಾರವನ್ನೂ ಮುಟ್ಟಬೇಡ; ಆ ಹುಡುಗನು ಹುಟ್ಟಿದಂದಿನಿಂದ ಸಾಯುವ ವರೆಗೆ ದೇವರಿಗೆ ಪ್ರತಿಷ್ಠಿತನಾಗಿರುವನು’ ಎಂದು ಹೇಳಿದನು” ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆದರೆ ಆತ ನನಗೆ, ‘ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ; ಆದ್ದರಿಂದ ನೀನು ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು. ಯಾವ ನಿಷಿದ್ಧಾಹಾರವನ್ನೂ ಮುಟ್ಟಬೇಡ; ಆ ಮಗು ಹುಟ್ಟಿದಂದಿನಿಂದ ಸಾಯುವವರೆಗೆ ಪ್ರತಿಷ್ಠಿತನಾಗಿರುವನು,’ ಎಂದು ಹೇಳಿದನು,” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆದರೆ ನನಗೆ - ನೀನು ಗರ್ಭವತಿಯಾಗಿ ಮಗನನ್ನು ಹೆರುವಿ; ಆದದರಿಂದ ನೀನು ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು, ಯಾವ ನಿಷಿದ್ಧಾಹಾರವನ್ನೂ ಮುಟ್ಟಬೇಡ; ಆ ಹುಡುಗನು ಹುಟ್ಟಿದಂದಿನಿಂದ ಸಾಯುವವರೆಗೆ ದೇವರಿಗೆ ಪ್ರತಿಷ್ಠಿತನಾಗಿರುವನು ಎಂದು ಹೇಳಿದನು ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವನು ನನಗೆ, ‘ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ; ಈಗ ನೀನು ದ್ರಾಕ್ಷಾರಸವನ್ನೂ, ಮದ್ಯವನ್ನೂ ಕುಡಿಯದೆ, ಅಶುದ್ಧವಾದ ಒಂದನ್ನಾದರೂ ತಿನ್ನದೆ ಇರು. ಏಕೆಂದರೆ ಆ ಹುಡುಗನು ಹುಟ್ಟಿದಂದಿನಿಂದ ಮರಣಹೊಂದುವವರೆಗೆ ದೇವರಿಗೆ ಪ್ರತಿಷ್ಠಿತನಾಗಿರುವನು ಎಂದು ಹೇಳಿದನು,’ ಎಂದಳು.” ಅಧ್ಯಾಯವನ್ನು ನೋಡಿ |