Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 13:8 - ಪರಿಶುದ್ದ ಬೈಬಲ್‌

8 ಆಗ ಮಾನೋಹನು ಯೆಹೋವನಿಗೆ, “ಸ್ವಾಮೀ, ಆ ದೇವಪುರುಷನನ್ನು ನಮ್ಮಲ್ಲಿಗೆ ಇನ್ನೊಮ್ಮೆ ದಯವಿಟ್ಟು ಕಳುಹಿಸೆಂದು ಬೇಡಿಕೊಳ್ಳುತ್ತೇವೆ. ಹುಟ್ಟಿಲಿರುವ ಮಗನಿಗಾಗಿ ನಾವು ಮಾಡಬೇಕಾದದ್ದನ್ನು ಅವನು ನಮಗೆ ತಿಳಿಸಲಿ” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮಾನೋಹನು ಇದನ್ನು ಕೇಳಿ ಯೆಹೋವನಿಗೆ, “ಸ್ವಾಮೀ, ದಯವಿರಲಿ; ನೀನು ಕಳುಹಿಸಿದ ದೇವಪುರುಷನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟಲಿಕ್ಕಿರುವ ಮಗುವಿಗೋಸ್ಕರ ಮಾಡಬೇಕಾದದ್ದನ್ನು ನಮಗೆ ಬೋಧಿಸಲಿ” ಎಂದು ಬೇಡಿಕೊಳ್ಳಲು ದೇವರು ಅವನ ಮೊರೆಯನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮಾನೋಹನು ಇದನ್ನು ಕೇಳಿ ಸರ್ವೇಶ್ವರನಿಗೆ, “ಸ್ವಾಮೀ, ದಯವಿರಲಿ; ನೀವು ಕಳುಹಿಸಿದ ದೇವಪುರುಷ ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟಲಿರುವ ಮಗುವಿಗಾಗಿ ಮಾಡಬೇಕಾದುದ್ದನ್ನು ನಮಗೆ ಬೋಧಿಸಲಿ,” ಎಂದು ಬೇಡಿಕೊಳ್ಳಲು ದೇವರು ಅವನ ಮೊರೆಯನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮಾನೋಹನು ಇದನ್ನು ಕೇಳಿ ಯೆಹೋವನಿಗೆ - ಸ್ವಾಮೀ, ದಯವಿರಲಿ; ನೀನು ಕಳುಹಿಸಿದ ದೇವಪುರುಷನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟಲಿಕ್ಕಿರುವ ಮಗುವಿಗೋಸ್ಕರ ಮಾಡಬೇಕಾದದ್ದನ್ನು ನಮಗೆ ಬೋಧಿಸಲಿ ಎಂದು ಬೇಡಿಕೊಳ್ಳಲು ದೇವರು ಅವನ ಮೊರೆಯನ್ನು ಕೇಳಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಮಾನೋಹನು ಯೆಹೋವ ದೇವರಿಗೆ ಬೇಡಿಕೊಂಡು, “ನನ್ನ ಕರ್ತದೇವರೇ, ನೀವು ಕಳುಹಿಸಿದ ದೇವರ ಮನುಷ್ಯನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು, ಹುಟ್ಟುವ ಕೂಸಿಗೋಸ್ಕರ ನಾವು ಮಾಡಬೇಕಾದದ್ದನ್ನು ನಮಗೆ ಕಲಿಸಲಿ,” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 13:8
8 ತಿಳಿವುಗಳ ಹೋಲಿಕೆ  

ಈಗ ಎದ್ದು ಪಟ್ಟಣದೊಳಗೆ ಹೋಗು. ನೀನು ಏನು ಮಾಡಬೇಕೆಂಬುದನ್ನು ಅಲ್ಲಿಯ ಒಬ್ಬನು ನಿನಗೆ ತಿಳಿಸುವನು” ಎಂದಿತು.


ದೇವರೇ, ನೀನು ನನಗೆ ಅಗೋಚರವಾಗಿದ್ದರೂ ನೀತಿಮಾರ್ಗವನ್ನು ಬೋಧಿಸು, ನಾನು ತಪ್ಪು ಮಾಡಿದ್ದರೆ ಅದನ್ನು ಮತ್ತೆ ಮಾಡುವುದಿಲ್ಲ’ ಎಂದು ಹೇಳಬಹುದು.


ಒಮ್ಮೆ ಯೆಹೋವನ ದೂತನು ಮಾನೋಹನ ಹೆಂಡತಿಗೆ ಪ್ರತ್ಯಕ್ಷನಾಗಿ, “ನೀನು ಮಕ್ಕಳನ್ನು ಪಡೆಯಲು ಸಾಧ್ಯವಾಗಿಲ್ಲ; ಆದರೆ ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ.


ಆಗ ಆ ಸ್ತ್ರೀಯು ತನ್ನ ಗಂಡನ ಬಳಿಗೆ ಹೋಗಿ, “ಒಬ್ಬ ದೇವಪುರುಷನು ನನ್ನಲ್ಲಿಗೆ ಬಂದನು. ಅವನು ದೇವರಿಂದ ಬಂದ ದೇವದೂತನಂತೆ ಕಂಡನು. ನನಗೆ ಭಯವಾಯಿತು. ನಾನು ಅವನಿಗೆ, ‘ನೀನು ಎಲ್ಲಿಂದ ಬಂದೆ?’ ಎಂದು ಕೇಳಲಿಲ್ಲ; ಅವನೂ ನನಗೆ ತನ್ನ ಹೆಸರನ್ನು ಹೇಳಲಿಲ್ಲ.


ಆದರೆ ಅವನು ನನಗೆ, ‘ನೀನು ಗರ್ಭವತಿಯಾಗಿರುವೆ; ನಿನಗೊಬ್ಬ ಮಗನು ಹುಟ್ಟುತ್ತಾನೆ. ನೀನು ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿಯಬೇಡ. ಯಾವ ನಿಷಿದ್ಧ ಆಹಾರವನ್ನೂ ತಿನ್ನಬೇಡ. ಏಕೆಂದರೆ ಆ ಹುಡುಗನು ಹುಟ್ಟಿದಂದಿನಿಂದ ಸಾಯುವವರೆಗೂ ದೇವರಿಗೆ ಪ್ರತಿಷ್ಠಿತನಾಗಿರುವನು ಎಂದು ಹೇಳಿದನು’” ಅಂದಳು.


ದೇವರು ಮಾನೋಹನ ಪ್ರಾರ್ಥನೆಯನ್ನು ಕೇಳಿದನು. ದೇವದೂತನು ಮತ್ತೊಮ್ಮೆ ಆ ಸ್ತ್ರೀಯ ಬಳಿಗೆ ಬಂದನು. ಆಗ ಅವಳು ಹೊಲದಲ್ಲಿ ಕುಳಿತಿದ್ದಳು; ಅವಳ ಗಂಡ ಅಲ್ಲಿರಲಿಲ್ಲ.


ಮಾನೋಹನು ಎದ್ದು ತನ್ನ ಹೆಂಡತಿಯನ್ನು ಹಿಂಬಾಲಿಸಿದನು. ಅವನು ಆ ಮನುಷ್ಯನ ಹತ್ತಿರ ಬಂದಾಗ, “ನನ್ನ ಹೆಂಡತಿಯ ಜೊತೆಗೆ ಹಿಂದೆ ಮಾತನಾಡಿದ ಮನುಷ್ಯನು ನೀನೋ?” ಎಂದು ಕೇಳಿದನು. ಆ ದೇವದೂತನು, “ಹೌದು, ನಾನೇ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು