Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 14:10 - ಪರಿಶುದ್ದ ಬೈಬಲ್‌

10 ಸಂಸೋನನ ತಂದೆಯು ಈ ಫಿಲಿಷ್ಟಿಯ ಸ್ತ್ರೀಯನ್ನು ನೋಡುವುದಕ್ಕೆಂದು ಹೋದನು. ಮದುವೆಯ ಗಂಡು ಒಂದು ಔತಣವನ್ನು ಕೊಡುವ ಪದ್ಧತಿ ಇತ್ತು. ಆದ್ದರಿಂದ ಸಂಸೋನನು ಒಂದು ಔತಣವನ್ನು ಏರ್ಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಸಂಸೋನನ ತಂದೆಯು ಹೆಣ್ಣಿನ ಮನೆಗೆ ಬಂದ ಮೇಲೆ ಸಂಸೋನನು ಯೌವನಸ್ಥರ ಪದ್ದತಿಯ ಪ್ರಕಾರ ಅಲ್ಲಿ ಔತಣವನ್ನು ಸಿದ್ಧಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸಂಸೋನನ ತಂದೆ ಹೆಣ್ಣಿನ ಮನೆಗೆ ಬಂದ ಮೇಲೆ ಸಂಸೋನನು ಯೌವನಸ್ಥರ ಪದ್ಧತಿಯ ಪ್ರಕಾರ ಅಲ್ಲಿ ಔತಣವನ್ನು ಸಿದ್ಧಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಸಂಸೋನನ ತಂದೆಯು ಹೆಣ್ಣಿನ ಮನೆಗೆ ಬಂದ ಮೇಲೆ ಸಂಸೋನನು ಯೌವನಸ್ಥರ ಪದ್ಧತಿಯ ಪ್ರಕಾರ ಅಲ್ಲಿ ಔತಣವನ್ನು ಸಿದ್ಧಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವನ ತಂದೆಯು ಆ ಸ್ತ್ರೀ ಇರುವ ಸ್ಥಳಕ್ಕೆ ಬಂದಾಗ, ಸಂಸೋನನು ಪ್ರಾಯಸ್ಥರು ಮಾಡುವ ಪದ್ಧತಿಯ ಪ್ರಕಾರ ಅಲ್ಲಿ ಔತಣ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 14:10
8 ತಿಳಿವುಗಳ ಹೋಲಿಕೆ  

ಆಗ ದೇವದೂತನು ನನಗೆ ಹೀಗೆ ಹೇಳಿದನು: “ಈ ರೀತಿ ಬರೆ: ಯಜ್ಞದ ಕುರಿಮರಿಯಾದಾತನ ವಿವಾಹದ ಔತಣಕ್ಕೆ ಆಹ್ವಾನಿಸಲ್ಪಟ್ಟ ಜನರು ಧನ್ಯರು!” ನಂತರ ದೇವದೂತನು, “ಇವು ದೇವರ ಸತ್ಯವಾದ ನುಡಿಗಳು” ಎಂದು ಹೇಳಿದನು.


ಊಟವು ಸಂತೋಷಗೊಳಿಸುವುದು; ದ್ರಾಕ್ಷಾರಸವು ಉಲ್ಲಾಸಗೊಳಿಸುವುದು; ಹಣವು ಅನೇಕ ಸಮಸ್ಯೆಗಳನ್ನು ಬಗೆಹರಿಸುವುದು.


ಆದ್ದರಿಂದ ಲಾಬಾನನು ಆ ಸ್ಥಳದಲ್ಲಿದ್ದ ಜನರಿಗೆಲ್ಲ ಒಂದು ಔತಣಕೂಟವನ್ನು ಏರ್ಪಡಿಸಿದನು.


ಮದುವೆಯ ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರನ್ನು ರುಚಿ ನೋಡಿದನು. ದ್ರಾಕ್ಷಾರಸವು ಎಲ್ಲಿಂದ ಬಂತೆಂಬುದು ಅವನಿಗೆ ಗೊತ್ತಿರಲಿಲ್ಲ. ಆದರೆ ಅದು ಆ ಸೇವಕರಿಗೆ ತಿಳಿದಿತ್ತು. ಮದುವೆಯ ಮೇಲ್ವಿಚಾರಕನು ಮದುಮಗನನ್ನು ಕರೆದು,


ಸಂಸೋನನು ತನ್ನ ಕೈಯಿಂದ ಸ್ವಲ್ಪ ಜೇನುತುಪ್ಪವನ್ನು ತೆಗೆದುಕೊಂಡು ಅದನ್ನು ತಿನ್ನುತ್ತಾ ನಡೆದನು. ತಂದೆತಾಯಿಗಳ ಹತ್ತಿರ ಬಂದು ಅವರಿಗೆ ಸ್ವಲ್ಪ ಜೇನುತುಪ್ಪವನ್ನು ಕೊಟ್ಟನು. ಅವರೂ ತಿಂದರು. ಆದರೆ ಆ ಸತ್ತಸಿಂಹದ ದೇಹದಿಂದ ಜೇನುತುಪ್ಪವನ್ನು ತೆಗೆದುಕೊಂಡ ಸಂಗತಿಯನ್ನು ಸಂಸೋನನು ಅವರಿಗೆ ಹೇಳಲಿಲ್ಲ.


ಅವನು ಔತಣದ ಏರ್ಪಾಟು ಮಾಡಿದ್ದನ್ನು ಕಂಡು ಫಿಲಿಷ್ಟಿಯರು ಅವನ ಸಂಗಡ ಇರುವುದಕ್ಕೆ ಮೂವತ್ತು ಜನರನ್ನು ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು