Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 14:11 - ಪರಿಶುದ್ದ ಬೈಬಲ್‌

11 ಅವನು ಔತಣದ ಏರ್ಪಾಟು ಮಾಡಿದ್ದನ್ನು ಕಂಡು ಫಿಲಿಷ್ಟಿಯರು ಅವನ ಸಂಗಡ ಇರುವುದಕ್ಕೆ ಮೂವತ್ತು ಜನರನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ಅವನನ್ನು ನೋಡಿದಾಗ ತಮ್ಮಲ್ಲಿಂದ ಮೂವತ್ತು ಮಂದಿಯನ್ನು ಆರಿಸಿ ಅವನ ಜೊತೆಯಲ್ಲಿರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಫಿಲಿಷ್ಟಿಯನು ಅವನನ್ನು ನೋಡಿದಾಗ ತಮ್ಮ ಮಧ್ಯದಿಂದ ಮೂವತ್ತು ಮಂದಿ ‘ಆಪ್ತರನ್ನು’ ಆರಿಸಿ ಅವನ ಜೊತೆಯಲ್ಲಿ ಇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು ಅವನನ್ನು ನೋಡಿದಾಗ ತಮ್ಮಲ್ಲಿಂದ ಮೂವತ್ತು ಮಂದಿಯನ್ನು ಆರಿಸಿ ಅವನ ಜೊತೆಯಲ್ಲಿರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ಅವನನ್ನು ಕಂಡಾಗ, ಅವನ ಸಂಗಡ ಇರುವುದಕ್ಕೆ ಮೂವತ್ತು ಮಂದಿ ಸಂಗಡಿಗರನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 14:11
8 ತಿಳಿವುಗಳ ಹೋಲಿಕೆ  

ಮದುಮಗಳು ಮದುಮಗನಿಗೆ ಮಾತ್ರ ಸೇರಿದವಳಾಗಿದ್ದಾಳೆ. ಮದುಮಗನಿಗೆ ಸಹಾಯಮಾಡುವ ಸ್ನೇಹಿತನು ಮದುಮಗನ ಬರುವಿಕೆಗಾಗಿ ಕಾಯುತ್ತಿರುತ್ತಾನೆ ಮತ್ತು ಆತನ ಕರೆಗಾಗಿ ಆಲಿಸುತ್ತಿರುತ್ತಾನೆ. ಮದುಮಗನ ಸ್ವರವನ್ನು ಕೇಳುವಾಗ ಈ ಸ್ನೇಹಿತನು ಬಹು ಸಂತೋಷಪಡುವನು. ಅದೇ ಸಂತೋಷ ನನಗಿದೆ. ನನ್ನ ಪೂರ್ಣಾನಂದದ ಸಮಯವು ಇದೇ ಆಗಿದೆ.


ಯೇಸು, “ಮದುವೆ ಸಮಯದಲ್ಲಿ ಮದುಮಗನ ಸಂಗಡವಿರುವ ಅವನ ಸ್ನೇಹಿತರು ದುಃಖಪಡುವುದಿಲ್ಲ. ಆದರೆ ಮದುಮಗನು ಅವರನ್ನು ಬಿಟ್ಟುಹೋಗುವ ಸಮಯ ಬರುತ್ತದೆ. ಆಗ ಅವರು ದುಃಖಪಡುತ್ತಾರೆ ಮತ್ತು ಉಪವಾಸ ಮಾಡುತ್ತಾರೆ.


ಇಷಯನು ಮತ್ತು ಅವನ ಮಕ್ಕಳು ಬಂದಾಗ, ಸಮುವೇಲನು ಎಲೀಯಾಬನನ್ನು ನೋಡಿದನು. ಸಮುವೇಲನು ತನ್ನಲ್ಲೇ ಯೋಚಿಸುತ್ತಾ, “ಯೆಹೋವನು ಆಯ್ಕೆ ಮಾಡಿರುವವನು ನಿಜವಾಗಿಯೂ ಅವನೇ ಇರಬೇಕು” ಎಂದುಕೊಂಡನು.


ಜನರು ಓಡಿಹೋಗಿ, ಸರಕುಗಳ ಹಿಂದೆ ಅಡಗಿಕೊಂಡಿದ್ದ ಸೌಲನನ್ನು ಹಿಡಿದುಕೊಂಡು ಬಂದರು. ಸೌಲನು ಜನರ ಮಧ್ಯದಲ್ಲಿ ನಿಂತುಕೊಂಡನು. ಸೌಲನು ಇತರ ಜನರಿಗಿಂತ ಎತ್ತರವಾಗಿದ್ದನು.


ಸಂಸೋನನ ತಂದೆಯು ಈ ಫಿಲಿಷ್ಟಿಯ ಸ್ತ್ರೀಯನ್ನು ನೋಡುವುದಕ್ಕೆಂದು ಹೋದನು. ಮದುವೆಯ ಗಂಡು ಒಂದು ಔತಣವನ್ನು ಕೊಡುವ ಪದ್ಧತಿ ಇತ್ತು. ಆದ್ದರಿಂದ ಸಂಸೋನನು ಒಂದು ಔತಣವನ್ನು ಏರ್ಪಡಿಸಿದನು.


ಆಗ ಸಂಸೋನನು ಆ ಮೂವತ್ತು ಜನರಿಗೆ, “ನಾನು ನಿಮಗೊಂದು ಒಗಟನ್ನು ಹೇಳಬಯಸುತ್ತೇನೆ. ಈ ಔತಣವು ಏಳು ದಿನ ಮುಂದುವರಿಯುತ್ತದೆ. ಈ ಅವಧಿಯಲ್ಲಿ ನೀವು ಉತ್ತರವನ್ನು ಹೇಳುವ ಪ್ರಯತ್ನ ಮಾಡಿರಿ. ನೀವು ಈ ಅವಧಿಯಲ್ಲಿ ಒಗಟುಗಳ ಅರ್ಥ ಹೇಳಿದರೆ ನಾನು ನಿಮಗೆ ಮೂವತ್ತು ನಾರುಬಟ್ಟೆಯ ಅಂಗಿಗಳನ್ನು ಮತ್ತು ಮೂವತ್ತು ವಿಶೇಷ ವಸ್ತ್ರಗಳನ್ನು ಕೊಡುತ್ತೇನೆ.


ನನ್ನ ಪ್ರಿಯೇ, ನನ್ನ ವಧುವೇ, ನನ್ನ ತೋಟವನ್ನು ಪ್ರವೇಶಿಸಿದ್ದೇನೆ. ನನ್ನ ಸುಗಂಧದ್ರವ್ಯದೊಡನೆ ಗೋಲರಸವನ್ನು ಶೇಖರಿಸಿದ್ದೇನೆ. ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿದ್ದೇನೆ. ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ. ಸ್ನೇಹಿತರೇ, ತಿನ್ನಿರಿ, ಕುಡಿಯಿರಿ! ಪ್ರೀತಿಯಿಂದ ಮತ್ತರಾಗಿ!


ಯೋಬನೇ, ಬೆಸ್ತರು ಅದನ್ನು ನಿನ್ನಿಂದ ಕೊಂಡುಕೊಳ್ಳಲು ಪ್ರಯತ್ನಿಸುವರೇ? ಅವರು ಅದನ್ನು ವರ್ತಕರಿಗೆ ಮಾರುವುದಕ್ಕಾಗಿ ತುಂಡುತುಂಡಾಗಿ ಕತ್ತರಿಸುವರೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು