ನ್ಯಾಯಸ್ಥಾಪಕರು 14:14 - ಪರಿಶುದ್ದ ಬೈಬಲ್14 ಸಂಸೋನನು ಅವರಿಗೆ ಈ ಒಗಟನ್ನು ಹೇಳಿದನು: “ತಿಂದುಬಿಡುವಂಥದರಿಂದ ತಿನ್ನತಕ್ಕದ್ದು ದೊರಕಿತು. ಕ್ರೂರವಾದದ್ದರಿಂದ ಮಧುರವಾದದ್ದು ಸಿಕ್ಕಿತು.” ಆ ಮೂವತ್ತು ಜನರು ಮೂರು ದಿನಗಳವರೆಗೆ ಒಗಟಿನ ಅರ್ಥವನ್ನು ಕಂಡುಹಿಡಿಯಲು ಪ್ರಯತ್ನ ಮಾಡಿದರು. ಆದರೆ ಅವರಿಂದ ಸಾಧ್ಯವಾಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಅವನು, “ತಿಂದುಬಿಡುವಂಥದರಿಂದ ತಿನ್ನತಕ್ಕದ್ದು ದೊರಕಿತು; ಕ್ರೂರವಾದದ್ದರಿಂದ ಮಧುರವಾದದ್ದು ಹುಟ್ಟಿತು” ಎಂದು ಹೇಳಿದನು. ಮೂರು ದಿನಗಳಾದರೂ ಅವರು ಅದನ್ನು ಬಿಡಿಸಲಾರದೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಗ ಅವನು, “ತಿಂದುಬಿಡುವಂಥದರಿಂದ ತಿನ್ನತಕ್ಕದ್ದು ದೊರಕಿತು ಕ್ರೂರವಾದದ್ದರಿಂದ ಮಧುರವಾದದ್ದು ಸಿಕ್ಕಿತು” ಎಂದು ಹೇಳಿದನು. ಮೂರು ದಿನಗಳಾದರೂ ಅವರು ಅದನ್ನು ಬಿಡಿಸಲಾರದೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಗ ಅವನು - ತಿಂದುಬಿಡುವಂಥದರಿಂದ ತಿನ್ನತಕ್ಕದ್ದು ದೊರಕಿತು; ಕ್ರೂರವಾದದ್ದರಿಂದ ಮಧುರವಾದದ್ದು ಸಿಕ್ಕಿತು ಎಂದು ಹೇಳಿದನು. ಮೂರು ದಿನಗಳಾದರೂ ಅವರು ಅದನ್ನು ಬಿಚ್ಚಲಾರದೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಅವನು ಅವರಿಗೆ ಹೇಳಿದ್ದೇನೆಂದರೆ, “ತಿಂದು ಬಿಡುವಂಥದ್ದರಿಂದ ತಿನ್ನತಕ್ಕದ್ದು ಹೊರಟಿತು. ಬಲಿಷ್ಠವಾದದ್ದರಿಂದ ಸಿಹಿಯು ಹೊರಟಿತು.” ಒಗಟನ್ನು ಅವರು ಮೂರು ದಿವಸ ಬಿಡಿಸಲಾರದೆ ಹೋದರು. ಅಧ್ಯಾಯವನ್ನು ನೋಡಿ |