Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 14:15 - ಪರಿಶುದ್ದ ಬೈಬಲ್‌

15 ನಾಲ್ಕನೆಯ ದಿನ ಅವರು ಸಂಸೋನನ ಹೆಂಡತಿಯಲ್ಲಿಗೆ ಬಂದು, “ನೀನು ನಮ್ಮನ್ನು ಬಡವರನ್ನಾಗಿ ಮಾಡಲು ಇಲ್ಲಿಗೆ ಕರೆದಿರುವಿಯಾ? ನೀನು ನಿನ್ನ ಗಂಡನನ್ನು ಮರುಳುಗೊಳಿಸಿ ನಮಗೆ ಒಗಟಿನ ಅರ್ಥವನ್ನು ಹೇಳುವಂತೆ ಮಾಡು. ನೀನು ನಮಗೆ ಒಗಟಿನ ಅರ್ಥವನ್ನು ಹೇಳದಿದ್ದರೆ ನಾವು ನಿನ್ನನ್ನು ಮತ್ತು ನಿನ್ನ ತಂದೆಯ ಮನೆಯಲ್ಲಿರುವ ಎಲ್ಲರನ್ನೂ ಸುಟ್ಟುಹಾಕುತ್ತೇವೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರು ಏಳನೆಯ ದಿನದಲ್ಲಿ ಸಂಸೋನನ ಹೆಂಡತಿಗೆ, “ನಿನ್ನ ಗಂಡನನ್ನು ಮರುಳುಗೊಳಿಸಿ ಅವನಿಂದ ಒಗಟಿನ ಅರ್ಥವನ್ನು ತಿಳಿದುಕೋ; ಇಲ್ಲವಾದರೆ ನಾವು ನಿನ್ನನ್ನೂ, ನಿನ್ನ ತಂದೆಯ ಮನೆಯವರನ್ನೂ ಬೆಂಕಿಯಿಂದ ಸುಟ್ಟುಬಿಡುವೆವು; ನಮಗಿರುವುದೆಲ್ಲವನ್ನೂ ಕಸಿದುಕೊಳ್ಳುವುದಕ್ಕೆ ನಮ್ಮನ್ನು ಇಲ್ಲಿಗೆ ಕರೆಸಿದಿರೋ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವರು ಏಳನೆಯ ದಿನದಲ್ಲಿ ಸಂಸೋನನ ಹೆಂಡತಿಗೆ, “ನಿನ್ನ ಗಂಡನನ್ನು ಮರುಳುಗೊಳಿಸಿ ಅವನಿಂದ ಒಗಟಿನ ಅರ್ಥವನ್ನು ತಿಳಿದುಕೋ; ಇಲ್ಲವಾದರೆ ನಾವು ನಿನ್ನನ್ನೂ ನಿನ್ನ ತಂದೆಯ ಮನೆಯವರನ್ನೂ ಬೆಂಕಿಯಿಂದ ಸುಟ್ಟುಬಿಡುತ್ತೇವೆ; ನಮಗಿರುವುದೆಲ್ಲವನ್ನೂ ಕಸಿದುಕೊಳ್ಳುವುದಕ್ಕೆ ನಮ್ಮನ್ನು ಇಲ್ಲಿಗೆ ಕರಿಸಿದಿರೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವರು ಏಳನೆಯ ದಿನದಲ್ಲಿ ಸಂಸೋನನ ಹೆಂಡತಿಗೆ - ನಿನ್ನ ಗಂಡನನ್ನು ಮರುಳುಗೊಳಿಸಿ ಅವನಿಂದ ಒಗಟಿನ ಅರ್ಥವನ್ನು ತಿಳಿದುಕೋ; ಇಲ್ಲವಾದರೆ ನಾವು ನಿನ್ನನ್ನೂ ನಿನ್ನ ತಂದೆಯ ಮನೆಯವರನ್ನೂ ಬೆಂಕಿಯಿಂದ ಸುಟ್ಟುಬಿಡುವೆವು; ನಮಗಿರುವದೆಲ್ಲವನ್ನೂ ಕಸಕೊಳ್ಳುವದಕ್ಕೆ ನಮ್ಮನ್ನು ಇಲ್ಲಿಗೆ ಕರಿಸಿದಿರೋ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಾಲ್ಕನೆಯ ದಿವಸದಲ್ಲಿ ಅವರು ಸಂಸೋನನ ಹೆಂಡತಿಗೆ, “ನಾವು ನಿನ್ನನ್ನೂ, ನಿನ್ನ ತಂದೆಯ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಡದ ಹಾಗೆ ನೀನು ನಿನ್ನ ಗಂಡನ ಆ ಒಗಟನ್ನು ನಮಗೆ ತಿಳಿಸುವ ಹಾಗೆ ಅವನನ್ನು ಮರಳುಗೊಳಿಸು. ನೀನು ನಮಗಿರುವುದೆಲ್ಲವನ್ನು ಕಸಿದುಕೊಳ್ಳುವುದಕ್ಕೆ ಅಲ್ಲವೇ ನಮ್ಮನ್ನು ಇಲ್ಲಿಗೆ ಕರೆಸಿದೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 14:15
9 ತಿಳಿವುಗಳ ಹೋಲಿಕೆ  

ಫಿಲಿಷ್ಟಿಯ ಪ್ರಭುಗಳು ದೆಲೀಲಳ ಬಳಿಗೆ ಹೋಗಿ, “ಸಂಸೋನನು ಅಷ್ಟೊಂದು ಶಕ್ತಿಶಾಲಿಯಾಗಿರುವುದಕ್ಕೆ ಕಾರಣಗಳನ್ನು ನಾವು ತಿಳಿದುಕೊಳ್ಳಬೇಕಾಗಿದೆ. ಅವನನ್ನು ಮರುಳುಗೊಳಿಸಿ ಅವನ ರಹಸ್ಯವನ್ನು ತಿಳಿದುಕೊಳ್ಳಲು ಪ್ರಯತ್ನ ಮಾಡು. ಆಗ ನಾವು ಅವನನ್ನು ಸೋಲಿಸಿ, ಬಂಧಿಸಿ ನಮ್ಮ ಅಧೀನದಲ್ಲಿಟ್ಟುಕೊಳ್ಳಲು ಸಾಧ್ಯವಾಗುತ್ತದೆ. ನೀನು ಇದನ್ನು ಮಾಡಿದರೆ ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಇಪ್ಪತ್ತೆಂಟು ಬೆಳ್ಳಿನಾಣ್ಯಗಳನ್ನು ಕೊಡುತ್ತೇವೆ” ಎಂದು ಹೇಳಿದರು.


“ಇದನ್ನು ಮಾಡಿದವರು ಯಾರು?” ಎಂದು ಫಿಲಿಷ್ಟಿಯರು ವಿಚಾರಿಸಿದರು. ಒಬ್ಬನು, “ತಿಮ್ನಾ ನಗರದವನ ಅಳಿಯನಾದ ಸಂಸೋನನು ಇದನ್ನು ಮಾಡಿದನು. ಸಂಸೋನನ ಮಾವನು ಸಂಸೋನನ ಹೆಂಡತಿಯನ್ನು ಮದುವೆಯಲ್ಲಿದ್ದ ಉತ್ತಮ ಪುರುಷನೊಬ್ಬನಿಗೆ ಮದುವೆಮಾಡಿಕೊಟ್ಟಿದ್ದಕ್ಕಾಗಿ ಅವನು ಹೀಗೆಲ್ಲಾ ಮಾಡಿದನು” ಎಂದು ಹೇಳಿದನು. ಆಗ ಫಿಲಿಷ್ಟಿಯರು ಸಂಸೋನನ ಹೆಂಡತಿಯನ್ನು ಮತ್ತು ಅವಳ ತಂದೆಯನ್ನು ಸುಟ್ಟುಹಾಕಿದರು.


ನಿನ್ನ ನೆರೆಯವನ ಮೇಲೆ ನಂಬಿಕೆ ಇಡಬೇಡ! ನಿನ್ನ ಸ್ನೇಹಿತನ ಮೇಲೆ ಭರವಸವಿಡಬೇಡ! ನಿನ್ನ ಹೆಂಡತಿಯೊಂದಿಗೂ ನಿನ್ನ ಮನಸ್ಸಿನಲ್ಲಿರುವ ವಿಷಯವನ್ನು ತಿಳಿಸಬೇಡ.


ಸೂಳೆಯು ಒಂದು ರೊಟ್ಟಿಗೇ ಬರಬಹುದು; ಆದರೆ ಬೇರೊಬ್ಬನ ಹೆಂಡತಿಗೆ ನಿನ್ನ ಜೀವವನ್ನೇ ಕಳೆದುಕೊಳ್ಳಬೇಕಾಗುವುದು.


ಮತ್ತೊಬ್ಬನ ಹೆಂಡತಿಯ ಮಾತುಗಳು ಜೇನಿನಂತೆ ಸಿಹಿಯಾಗಿವೆ; ಎಣ್ಣೆಗಿಂತ ನಯವಾಗಿವೆ.


ನಿನಗೆ, “ನಮ್ಮ ಜೊತೆ ಬಾ! ನಾವು ಅಲ್ಲಿ ಅವಿತುಕೊಂಡಿದ್ದು ಯಾರನ್ನಾದರೂ ಕೊಲೆಮಾಡೋಣ; ಕೆಲವು ನಿರಪರಾಧಿಗಳ ಮೇಲೆ ನಿಷ್ಕಾರಣವಾಗಿ ಆಕ್ರಮಣ ಮಾಡಿ


ಎಫ್ರಾಯೀಮ್ಯರು ತಮ್ಮ ಸೈನಿಕರೆಲ್ಲರನ್ನು ಒಂದು ಕಡೆ ಸೇರಿಸಿದರು. ಆಮೇಲೆ ಅವರು ನದಿಯನ್ನು ದಾಟಿ ಝಾಫೋನ್ ನಗರಕ್ಕೆ ಬಂದರು. ಅವರು ಯೆಫ್ತಾಹನಿಗೆ, “ನೀನು ಅಮ್ಮೋನಿಯರ ಸಂಗಡ ಯುದ್ಧ ಮಾಡುವಾಗ ಸಹಾಯಕ್ಕಾಗಿ ನಮ್ಮನ್ನು ಏಕೆ ಕರೆಯಲಿಲ್ಲ? ನಿನ್ನನ್ನು ಮನೆಯೊಳಗೆ ಹಾಕಿ ನಿನ್ನ ಮನೆಯನ್ನು ಸುಟ್ಟುಬಿಡುತ್ತೇವೆ” ಅಂದರು.


ಸಂಸೋನನು ಅವರಿಗೆ ಈ ಒಗಟನ್ನು ಹೇಳಿದನು: “ತಿಂದುಬಿಡುವಂಥದರಿಂದ ತಿನ್ನತಕ್ಕದ್ದು ದೊರಕಿತು. ಕ್ರೂರವಾದದ್ದರಿಂದ ಮಧುರವಾದದ್ದು ಸಿಕ್ಕಿತು.” ಆ ಮೂವತ್ತು ಜನರು ಮೂರು ದಿನಗಳವರೆಗೆ ಒಗಟಿನ ಅರ್ಥವನ್ನು ಕಂಡುಹಿಡಿಯಲು ಪ್ರಯತ್ನ ಮಾಡಿದರು. ಆದರೆ ಅವರಿಂದ ಸಾಧ್ಯವಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು