Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 14:16 - ಪರಿಶುದ್ದ ಬೈಬಲ್‌

16 ಸಂಸೋನನ ಹೆಂಡತಿಯು ಅವನ ಹತ್ತಿರ ಹೋಗಿ ಅಳುವುದಕ್ಕೆ ಪ್ರಾರಂಭಿಸಿದಳು. ಅವಳು, “ನೀನು ನನ್ನನ್ನು ನಿಜವಾಗಿ ಪ್ರೀತಿಸುವುದಿಲ್ಲ, ನನ್ನನ್ನು ದ್ವೇಷಿಸುತ್ತಿ; ನೀನು ನಮ್ಮ ಜನರಿಗೆ ಒಗಟನ್ನು ಹೇಳಿರುವೆ; ಆದರೆ ಅದರ ಅರ್ಥವನ್ನು ನನಗೆ ಹೇಳಿಲ್ಲ” ಎಂದು ಗೋಳಾಡತೊಡಗಿದಳು. ಅದಕ್ಕೆ ಸಂಸೋನನು, “ನಾನು ನನ್ನ ತಂದೆತಾಯಿಯರಿಗೆ ಅದನ್ನು ತಿಳಿಸಲಿಲ್ಲ, ನಿನಗೆ ತಿಳಿಸುವೆನೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಕೆಯು ಸಂಸೋನನ ಮುಂದೆ ಅಳುತ್ತಾ, “ನೀನು ನನ್ನನ್ನು ಪ್ರೀತಿಸುವುದಿಲ್ಲ, ದ್ವೇಷಿಸುತ್ತೀಯಷ್ಟೆ; ನನ್ನ ಜನರಿಗೆ ಒಗಟನ್ನು ಹೇಳಿದ್ದೀ, ಅದರ ಅರ್ಥವನ್ನು ನನಗೆ ತಿಳಿಸಲಿಲ್ಲವಲ್ಲಾ” ಎಂದು ತೊಂದರೆಪಡಿಸಿದಳು. ಅವನು ಆಕೆಗೆ, “ಅದನ್ನು ನನ್ನ ತಂದೆತಾಯಿಗಳಿಗೂ ಹೇಳಲಿಲ್ಲ; ನಿನಗೆ ಹೇಳುವೆನೋ?” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಕೆ ಸಂಸೋನನ ಮುಂದೆ ಅಳುತ್ತಾ, “ನೀವು ನನ್ನನ್ನು ಪ್ರೀತಿಸುವುದಿಲ್ಲ, ದ್ವೇಷಿಸುತ್ತೀರಷ್ಟೇ; ನನ್ನ ಜನರಿಗೆ ಒಗಟನ್ನು ಹೇಳಿದ್ದೀರಿ, ಅದರ ಅರ್ಥವನ್ನು ನನಗೆ ತಿಳಿಸಲಿಲ್ಲವಲ್ಲಾ” ಎಂದು ಪೀಡಿಸಿದಳು. ಅವನು ಆಕೆಗೆ, “ಇದನ್ನು ನನ್ನ ತಂದೆತಾಯಿಗಳಿಗೂ ಹೇಳಲಿಲ್ಲ; ನಿನಗೆ ಹೇಳುವೆನೋ?” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಕೆಯು ಸಂಸೋನನ ಮುಂದೆ ಅಳುತ್ತಾ - ನೀನು ನನ್ನನ್ನು ಪ್ರೀತಿಸುವದಿಲ್ಲ, ದ್ವೇಷಿಸುತ್ತೀಯಷ್ಟೆ; ನನ್ನ ಜನರಿಗೆ ಒಗಟನ್ನು ಹೇಳಿದ್ದೀ, ಅದರ ಅರ್ಥವನ್ನು ನನಗೆ ತಿಳಿಸಲಿಲ್ಲವಲ್ಲಾ ಎಂದು ತೊಂದರೆಪಡಿಸಿದಳು. ಅವನು ಆಕೆಗೆ - ಅದನ್ನು ನನ್ನ ತಂದೆತಾಯಿಗಳಿಗೇ ಹೇಳಲಿಲ್ಲ; ನಿನಗೆ ಹೇಳುವೆನೋ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಸಂಸೋನನ ಹೆಂಡತಿ ಅವನ ಮುಂದೆ ಅತ್ತು, “ನನ್ನನ್ನು ಹಗೆ ಮಾಡುತ್ತಿರುವೆ. ನೀನು ನನ್ನನ್ನು ನಿಜವಾಗಿ ಪ್ರೀತಿ ಮಾಡುವುದಿಲ್ಲ, ಏಕೆಂದರೆ ನೀನು ನನ್ನ ಜನರಿಗೆ ಒಂದು ಒಗಟನ್ನು ಹೇಳಿ ನನಗೆ ತಿಳಿಸದೆ ಹೋದೆ,” ಎಂದಳು. ಅವನು ಅವಳಿಗೆ, “ಇಗೋ, ನಾನು ನನ್ನ ತಂದೆತಾಯಿಗೆ ಅದನ್ನು ತಿಳಿಸಲಿಲ್ಲ. ನಿನಗೆ ತಿಳಿಸುವೆನೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 14:16
4 ತಿಳಿವುಗಳ ಹೋಲಿಕೆ  

ಆಗ ದೆಲೀಲಳು ಸಂಸೋನನಿಗೆ, “‘ನಾನು ನಿನ್ನನ್ನು ಪ್ರೀತಿಸುತ್ತೇನೆ’ ಎಂದು ನೀನು ಹೇಗೆ ಹೇಳಲು ಸಾಧ್ಯ? ನನ್ನನ್ನು ನೀನು ನಂಬುವುದೇ ಇಲ್ಲ. ನೀನು ನನಗೆ ನಿನ್ನ ರಹಸ್ಯವನ್ನು ತಿಳಿಸುವುದಿಲ್ಲ. ಮೂರನೆಯ ಸಲ ನೀನು ನನ್ನನ್ನು ವಂಚಿಸಿದೆ. ನೀನು ನನಗೆ ನಿನ್ನ ಶಕ್ತಿಯ ರಹಸ್ಯವನ್ನು ತಿಳಿಸಲಿಲ್ಲ” ಎಂದಳು.


ಆದ್ದರಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರೂ ಒಂದೇ ಶರೀರವಾಗುವರು.


ಸಂಸೋನನ ಹೆಂಡತಿಯು ಔತಣದ ಏಳು ದಿನಗಳೆಲ್ಲಾ ಅಳುತ್ತಿದ್ದಳು. ಆದ್ದರಿಂದ ಏಳನೆಯ ದಿನ ಅವನು ಒಗಟಿನ ಅರ್ಥವನ್ನು ಅವಳಿಗೆ ಹೇಳಿದನು. ಅವಳು ಪೀಡಿಸಿದ್ದರಿಂದ ಅವನು ಹೇಳಿದನು. ಆಗ ಅವಳು ತನ್ನ ಜನರಲ್ಲಿಗೆ ಹೋಗಿ ಆ ಒಗಟಿನ ಅರ್ಥವನ್ನು ತಿಳಿಸಿದಳು.


ಅವಳು ಸಂಸೋನನನ್ನು ಪ್ರತಿದಿನ ಪೀಡಿಸತೊಡಗಿದಳು. ಅವನ ಶಕ್ತಿಯ ರಹಸ್ಯದ ಬಗ್ಗೆ ಅವಳು ಪದೇಪದೇ ಕೇಳುತ್ತಿದ್ದದರಿಂದ ಅವನಿಗೆ ಸಾಯುವಷ್ಟು ಬೇಸರವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು