Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 14:19 - ಪರಿಶುದ್ದ ಬೈಬಲ್‌

19 ಸಂಸೋನನು ಬಹಳ ಕೋಪಗೊಂಡನು. ಯೆಹೋವನ ಆತ್ಮವು ಸಂಸೋನನ ಮೇಲೆ ಪ್ರಬಲವಾಗಿ ಬಂತು. ಅವನು ಅಷ್ಕೆಲೋನ್ ನಗರಕ್ಕೆ ಧಾವಿಸಿದನು. ಆ ನಗರದಲ್ಲಿ ಅವನು ಮೂವತ್ತು ಜನ ಫಿಲಿಷ್ಟಿಯರನ್ನು ಕೊಂದನು. ಆಮೇಲೆ ಅವನು ಹೆಣಗಳ ಮೇಲಿನ ಎಲ್ಲ ಬಟ್ಟೆಗಳನ್ನೂ ಸ್ವತ್ತನ್ನೂ ಸುಲಿದುಕೊಂಡನು. ಆ ಬಟ್ಟೆಗಳನ್ನು ತಂದು ಒಗಟಿನ ಅರ್ಥ ಹೇಳಿದ ಜನರಿಗೆ ಕೊಟ್ಟನು. ಬಳಿಕ ಅವನು ತನ್ನ ತಂದೆಯ ಮನೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೋವನ ಆತ್ಮವು ಫಕ್ಕನೆ ಅವನ ಮೇಲೆ ಬಂದಿತು; ಅವನು ಅಷ್ಕೆಲೋನಿಗೆ ಹೋಗಿ ಅಲ್ಲಿನ ಮೂವತ್ತು ಮಂದಿಯನ್ನು ಹೊಡೆದು, ಅವರ ವಸ್ತ್ರಗಳನ್ನು ಸುಲುಕೊಂಡು ಒಗಟನ್ನು ಬಿಚ್ಚಿದವರಿಗೆ ತಂದುಕೊಟ್ಟನು. ಮತ್ತು ಕೋಪಗೊಂಡವನಾಗಿ ತನ್ನ ತಂದೆಯ ಮನೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸರ್ವೇಶ್ವರನ ಆತ್ಮ ಫಕ್ಕನೆ ಅವನ ಮೇಲೆ ಬಂದಿತು. ಅವನು ಅಷ್ಕೆಲೋನಿಗೆ ಹೋಗಿ ಅಲ್ಲಿನ ಮೂವತ್ತು ಮಂದಿಯನ್ನು ಹೊಡೆದು ಅವರ ವಸ್ತ್ರಗಳನ್ನು ಸುಲಿದುಕೊಂಡು ಒಗಟನ್ನು ಬಿಡಿಸಿದವರಿಗೆ ತಂದುಕೊಟ್ಟನು. ಬಳಿಕ ಕೋಪಗೊಂಡು ತನ್ನ ತಂದೆಯ ಮನೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆಹೋವನ ಆತ್ಮವು ಫಕ್ಕನೆ ಅವನ ಮೇಲೆ ಬಂದಿತು; ಅವನು ಅಷ್ಕೆಲೋನಿಗೆ ಹೋಗಿ ಅಲ್ಲಿನ ಮೂವತ್ತು ಮಂದಿಯನ್ನು ಹೊಡೆದು ಅವರ ವಸ್ತ್ರಗಳನ್ನು ಸುಲುಕೊಂಡು ಒಗಟನ್ನು ಬಿಚ್ಚಿದವರಿಗೆ ತಂದುಕೊಟ್ಟನು. ಮತ್ತು ರೇಗಿದವನಾಗಿ ತನ್ನ ತಂದೆಯ ಮನೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆಹೋವ ದೇವರ ಆತ್ಮ ಅವನ ಮೇಲೆ ಬಂದದ್ದರಿಂದ, ಅವನು ಅಷ್ಕೆಲೋನಿಗೆ ಹೋಗಿ, ಆ ಊರಿನಲ್ಲಿ ಮೂವತ್ತು ಜನರನ್ನು ವಧಿಸಿ, ಸುಲಿದುಕೊಂಡು ಒಗಟನ್ನು ತಿಳಿಸಿದವರಿಗೆ ದುಸ್ತು ವಸ್ತ್ರಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 14:19
9 ತಿಳಿವುಗಳ ಹೋಲಿಕೆ  

ಅವರು ಹೇಳಿದ್ದನ್ನು ಕೇಳಿದಾಗ ದೇವರಾತ್ಮನು ಸೌಲನ ಮೈಮೇಲೆ ಮಹಾಶಕ್ತಿಯೊಡನೆ ಬಂದಿತು. ಸೌಲನು ಬಹುಕೋಪಗೊಂಡನು.


ಒತ್ನೀಯೇಲನ ಮೇಲೆ ಯೆಹೋವನ ಆತ್ಮ ಬಂದಿತು; ಆದ್ದರಿಂದ ಅವನು ಇಸ್ರೇಲರ ನ್ಯಾಯಾಧೀಶನಾದನು. ಒತ್ನೀಯೇಲನು ಇಸ್ರೇಲರನ್ನು ಯುದ್ಧಕ್ಕೆ ಕರೆದೊಯ್ದನು. ಅರಾಮಿನ ಅರಸನಾದ ಕೂಷನ್ ರಿಷಾತಯಿಮ್‌ನನ್ನು ಸೋಲಿಸಲು ಯೆಹೋವನು ಒತ್ನೀಯೇಲನಿಗೆ ಸಹಾಯ ಮಾಡಿದನು.


ಅವನು ಮಾಹಾನೆಹದಾನ ನಗರದಲ್ಲಿದ್ದಾಗ ಯೆಹೋವನ ಆತ್ಮವು ಸಂಸೋನನನ್ನು ಪ್ರೇರೇಪಿಸತೊಡಗಿತು. ಈ ನಗರವು ಚೊರ್ಗ ಮತ್ತು ಎಷ್ಟಾವೋಲ್ ನಗರಗಳ ಮಧ್ಯದಲ್ಲಿದೆ.


ಸಂಸೋನನನ್ನು ಲೆಹೀ ಎಂಬ ಸ್ಥಳಕ್ಕೆ ತಂದಾಗ ಫಿಲಿಷ್ಟಿಯರು ಅವನನ್ನು ನೋಡುವದಕ್ಕೆ ಬಂದರು. ಅವರು ಸಂತೋಷದಿಂದ ಆರ್ಭಟಿಸುತ್ತಿದ್ದರು. ಆಗ ಯೆಹೋವನ ಆತ್ಮವು ಪ್ರಬಲವಾಗಿ ಸಂಸೋನನ ಮೇಲೆ ಬಂದಿತು. ಸಂಸೋನನು ಹಗ್ಗಗಳನ್ನು ಸುಟ್ಟದಾರಗಳೊ ಎಂಬಂತೆ ಕಿತ್ತುಹಾಕಿದನು; ಕೈಗೆ ಕಟ್ಟಿದ್ದ ಹಗ್ಗಗಳು ಕಳಚಿಬಿದ್ದವು.


ಯೆಹೋವನ ಆತ್ಮವು ಸಂಸೋನನ ಮೇಲೆ ಪ್ರಬಲವಾಗಿ ಬಂದುದರಿಂದ ಅವನು ಬರಿಗೈಯಿಂದಲೇ ಹೋತದ ಮರಿಯನ್ನೋ ಎಂಬಂತೆ ಅದನ್ನು ಎರಡು ಹೋಳಾಗಿ ಸೀಳಿಬಿಟ್ಟನು. ಆದರೆ ಸಂಸೋನನು ಇದನ್ನು ತನ್ನ ತಂದೆತಾಯಿಗಳಿಗೆ ಹೇಳಲಿಲ್ಲ.


ಔತಣದ ಏಳನೆಯ ದಿನ ಸೂರ್ಯಾಸ್ತಮಾನಕ್ಕಿಂತ ಮುಂಚೆ ಫಿಲಿಷ್ಟಿಯರಿಗೆ ಅರ್ಥ ಗೊತ್ತಾಯಿತು. ಅವರು ಸಂಸೋನನಲ್ಲಿಗೆ ಬಂದು ಅವನಿಗೆ, “ಜೇನಿಗಿಂತ ಸಿಹಿಯಾದದ್ದು ಯಾವುದು; ಸಿಂಹಕ್ಕಿಂತ ಕ್ರೂರವಾದದ್ದು ಯಾವುದು” ಎಂದರು. ಅದಕ್ಕೆ ಸಂಸೋನನು ಅವರಿಗೆ, “ನೀವು ನನ್ನ ಹಸುವಿನಿಂದ ನೇಗಿಲು ಹೊಡೆಯದ್ದಿದ್ದರೆ ಒಗಟನ್ನು ಬಿಡಿಸುವುದು ನಿಮ್ಮಿಂದ ಆಗುತ್ತಿರಲಿಲ್ಲ” ಎಂದನು.


ಯೆಹೂದ್ಯರು ಗಾಜಾ ನಗರವನ್ನೂ ಅದರ ಸುತ್ತಮುತ್ತಲಿನ ಎಲ್ಲಾ ಸಣ್ಣ ಪಟ್ಟಣಗಳನ್ನೂ ಸ್ವಾಧೀನಪಡಿಸಿಕೊಂಡರು. ಯೆಹೂದ್ಯರು ಅಷ್ಕೆಲೋನ್ ಮತ್ತು ಎಕ್ರೋನ್ ನಗರಗಳನ್ನೂ ಅವುಗಳ ಸುತ್ತಮುತ್ತಲಿನ ಎಲ್ಲಾ ಸಣ್ಣಪುಟ್ಟ ಪಟ್ಟಣಗಳನ್ನೂ ಸಹ ಸ್ವಾಧೀನಪಡಿಸಿಕೊಂಡರು.


ಫಿಲಿಷ್ಟಿಯರು, “ಇಸ್ರೇಲರ ದೇವರು ನಮ್ಮನ್ನು ಕ್ಷಮಿಸಬೇಕಾದರೆ ನಾವು ಯಾವ ಕಾಣಿಕೆಗಳನ್ನು ಕಳುಹಿಸಬೇಕು?” ಎಂದು ಕೇಳಿದರು. ಅರ್ಚಕರು ಮತ್ತು ಮಾಂತ್ರಿಕರು, “ನಿಮ್ಮಲ್ಲಿ ಐದು ಮಂದಿ ಅಧಿಪತಿಗಳಿದ್ದೀರಿ. ಪ್ರತಿಯೊಂದು ನಗರಕ್ಕೆ ಒಬ್ಬ ಅಧಿಪತಿಯಿದ್ದಾನೆ. ನೀವು ಮತ್ತು ನಿಮ್ಮ ಅಧಿಪತಿಗಳೆಲ್ಲರೂ ಒಂದೇ ರೀತಿಯಲ್ಲಿ ತೊಂದರೆಗೊಳಗಾಗಿದ್ದೀರಿ. ಆದ್ದರಿಂದ ಚಿನ್ನದಲ್ಲಿ ಐದು ಗಡ್ಡೆಗಳನ್ನು ಹಾಗೂ ಐದು ಇಲಿಗಳನ್ನು ಮಾಡಿಸಬೇಕು.


ಈ ರೀತಿ ಫಿಲಿಷ್ಟಿಯರು ತಾವು ಯೆಹೋವನಿಗೆ ಮಾಡಿದ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಚಿನ್ನದ ಗಡ್ಡೆಗಳನ್ನು ಕಾಣಿಕೆಗಳನ್ನಾಗಿ ಕಳುಹಿಸಿದರು. ಅವರು ಪ್ರತಿಯೊಂದು ಫಿಲಿಷ್ಟಿಯ ನಗರಕ್ಕೆ ಒಂದರಂತೆ ಚಿನ್ನದ ಗಡ್ಡೆಗಳನ್ನು ಕಳುಹಿಸಿದ್ದರು. ಅಷ್ಡೋದ್, ಗಾಜಾ, ಅಷ್ಕೆಲೋನ್, ಗತ್ ಮತ್ತು ಎಕ್ರೋನ್‌ಗಳೇ ಆ ನಗರಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು