Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 14:4 - ಪರಿಶುದ್ದ ಬೈಬಲ್‌

4 ಇದು ಯೆಹೋವನ ಚಿತ್ತವೆಂಬುದು ಸಂಸೋನನ ತಂದೆತಾಯಿಗಳಿಗೆ ತಿಳಿದಿರಲಿಲ್ಲ. ಫಿಲಿಷ್ಟಿಯರಿಗೆ ಕೇಡುಮಾಡಲು ಯೆಹೋವನು ತಕ್ಕಮಾರ್ಗವನ್ನು ಹುಡುಕುತ್ತಿದ್ದನು. ಆ ಸಮಯದಲ್ಲಿ ಫಿಲಿಷ್ಟಿಯರು ಇಸ್ರೇಲರ ಮೇಲೆ ಆಳ್ವಿಕೆ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಫಿಲಿಷ್ಟಿಯರ ಕೇಡಿಗೆ ಕಾರಣ ಹುಡುಕುತ್ತಿದ್ದ ಯೆಹೋವನ ಪ್ರೇರಣೆಯಿಂದಲೇ ಈ ಸಂಗತಿ ಉಂಟಾಯಿತೆಂಬುದು ಅವನ ತಂದೆತಾಯಿಗಳಿಗೆ ಗೊತ್ತಿರಲಿಲ್ಲ. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರ ಮೇಲೆ ದೊರೆತನ ನಡೆಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಫಿಲಿಷ್ಟಿಯರ ದಂಡನೆಗೆ ಕಾರಣವನ್ನು ಹುಡುಕುತ್ತಿದ್ದ ಸರ್ವೇಶ್ವರನ ಪ್ರೇರಣೆಯಿಂದಲೇ ಇದೆಲ್ಲ ಸಂಭವಿಸಿತೆಂದು ಅವನ ತಂದೆತಾಯಿಗಳಿಗೆ ಗೊತ್ತಾಗಲಿಲ್ಲ. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಯೇಲರ ಮೇಲೆ ದೊರೆತನ ನಡೆಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಫಿಲಿಷ್ಟಿಯರ ಕೇಡಿಗೆ ಕಾರಣ ಹುಡುಕುತ್ತಿದ್ದ ಯೆಹೋವನ ಪ್ರೇರಣೆಯಿಂದಲೇ ಈ ಸಂಗತಿ ಉಂಟಾಯಿತೆಂಬದು ಅವನ ತಂದೆತಾಯಿಗಳಿಗೆ ಗೊತ್ತಿದ್ದಿಲ್ಲ. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲ್ಯರ ಮೇಲೆ ದೊರೆತನ ನಡಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇದು ಯೆಹೋವ ದೇವರಿಂದ ಉಂಟಾಯಿತೆಂದು ಅವನ ತಂದೆತಾಯಂದಿರು ಅರಿಯದೆ ಇದ್ದರು. ಏಕೆಂದರೆ ಫಿಲಿಷ್ಟಿಯರಿಗೆ ವಿರೋಧವಾಗಿ ಅವನು ಕಾರಣವನ್ನು ಹುಡುಕಿದನು. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರನ್ನು ಆಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 14:4
14 ತಿಳಿವುಗಳ ಹೋಲಿಕೆ  

ತಾವು ಶಕ್ತಿಶಾಲಿಗಳೆಂಬ ಭಾವನೆಯನ್ನು ಯೆಹೋವನು ಆ ಜನರಲ್ಲಿ ಹುಟ್ಟಿಸಿ ಅವರನ್ನು ಇಸ್ರೇಲರ ಮೇಲೆ ಯುದ್ಧಕ್ಕೆ ಬರಮಾಡಿದನು. ಯುದ್ಧದಲ್ಲಿ ಕರುಣೆಯಿಲ್ಲದೆ ಅವರನ್ನು ಸಂಹರಿಸಬೇಕೆಂಬುದು ಯೆಹೋವನ ಯೋಜನೆಯಾಗಿತ್ತು. ಯೆಹೋವನು ಮೋಶೆಗೆ ಹೇಳಿದ ರೀತಿಯಲ್ಲಿ ಯೆಹೋಶುವನು ಆ ಪಟ್ಟಣಗಳನ್ನು ನಾಶಮಾಡಲು ಇದರಿಂದ ಸಾಧ್ಯವಾಯಿತು.


ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಬಯಸಿದ್ದನ್ನೆಲ್ಲಾ ಮಾಡುತ್ತಾನೆ.


ಇಸ್ರೇಲರು ಮತ್ತೆ ಯೆಹೋವನಿಗೆ ವಿರೋಧವಾಗಿ ದುಷ್ಕೃತ್ಯಗಳನ್ನು ಮಾಡಿದರು. ಆದ್ದರಿಂದ ಫಿಲಿಷ್ಟಿಯರು ನಲವತ್ತು ವರ್ಷ ಅವರನ್ನು ಆಳುವಂತೆ ಯೆಹೋವನು ಮಾಡಿದನು.


ಯೋರಾಮನನ್ನು ಸಂಧಿಸಲು ಹೋದಾಗ ಅಹಜ್ಯನು ಕೊಲ್ಲಲ್ಪಡುವಂತೆ ಯೆಹೋವನು ಮಾಡಿದನು. ಅಹಜ್ಯನು ಯೇಹುವನ್ನು ಭೇಟಿಯಾಗಲು ಯೋರಾಮನೊಂದಿಗೆ ಹೋದನು. ಯೇಹುವಿನ ತಂದೆ ನಿಂಷಿ. ಅಹಾಬನ ಕುಟುಂಬವನ್ನು ನಾಶಗೊಳಿಸಲು ಯೆಹೋವನು ಯೇಹುವನ್ನು ಆರಿಸಿಕೊಂಡನು.


ಹೀಗೆ ರೆಹಬ್ಬಾಮನು ಜನರ ಬೇಡಿಕೆಯನ್ನು ಕೇಳಲಿಲ್ಲ. ಯಾಕೆಂದರೆ ಇದು ದೇವರ ಚಿತ್ತವಾಗಿತ್ತು. ದೇವರು ಅಹೀಯನ ಮುಖಾಂತರ ಯಾರೊಬ್ಬಾಮನಿಗೆ ಹೇಳಿದ ಮಾತು ನೆರವೇರುವಂತೆ ಹೀಗಾಯಿತು. ಅಹೀಯನು ಶೀಲೋವಿನವನಾಗಿದ್ದನು. ಯಾರೊಬ್ಬಾಮನು ನೆಬಾಟನ ಮಗನಾಗಿದ್ದನು.


ಎಲೀಷನು ಹಿರಿಯರೊಂದಿಗೆ ಇನ್ನೂ ಮಾತನಾಡುತ್ತಿರುವಾಗ ಸಂದೇಶಕನು ಅವನ ಬಳಿಗೆ ಬಂದನು. ಅವನ ಸಂದೇಶವು ಹೀಗಿತ್ತು: “ಈ ಆಪತ್ತು ಯೆಹೋವನಿಂದಲೇ ಬಂದಿದೆ! ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು?”


ರಾಜನು ಜನರ ಅಪೇಕ್ಷೆಯನ್ನು ನೆರವೇರಿಸಲಿಲ್ಲ. ನೆಬಾಟನ ಮಗನಾದ ಯಾರೊಬ್ಬಾಮನಿಗೆ ತಾನು ಮಾಡಿದ್ದ ವಾಗ್ದಾನವನ್ನು ಈಡೇರಿಸಲು ಯೆಹೋವನೇ ಹೀಗೆ ಮಾಡಿದನು. ಯೆಹೋವನು ಪ್ರವಾದಿಯಾದ ಅಹೀಯನ ಮೂಲಕ ಈ ವಾಗ್ದಾನವನ್ನು ಮಾಡಿದ್ದನು. ಅಹೀಯನು ಶೀಲೋವಿನವನು.


ಅಮಚ್ಯನು ಅವನ ಮಾತಿಗೆ ಲಕ್ಷ್ಯಕೊಡಲಿಲ್ಲ. ಇದು ದೇವರಿಂದಲೇ ಆಯಿತು. ಇಸ್ರೇಲ್ ಯೆಹೂದವನ್ನು ಸೋಲಿಸಬೇಕೆಂದು ದೇವರ ಇಚ್ಛೆಯಾಗಿತ್ತು. ಯಾಕೆಂದರೆ ಯೆಹೂದದ ಜನರು ಎದೋಮ್ಯರ ದೇವರುಗಳನ್ನು ಆರಾಧಿಸುತ್ತಿದ್ದರು.


ಆಗ ಯೆಹೂದಕುಲದ ಮೂರು ಸಾವಿರ ಜನರು ಸಂಸೋನನಲ್ಲಿಗೆ ಹೋದರು. ಅವರು ಏಟಾಮಿನ ಬಂಡೆಯ ಬಳಿಯಲ್ಲಿದ್ದ ಗುಹೆಗೆ ಬಂದು ಅವನಿಗೆ, “ನೀನು ನಮಗೆ ಮಾಡಿರುವುದೇನು? ಫಿಲಿಷ್ಟಿಯರು ನಮ್ಮನ್ನು ಆಳುತ್ತಿದ್ದಾರೆ ಎಂಬುದು ನಿನಗೆ ಗೊತ್ತಿಲ್ಲವೇ?” ಎಂದು ಕೇಳಿದರು. ಸಂಸೋನನು, “ಅವರು ನನಗೆ ಮಾಡಿದ ದ್ರೋಹಕ್ಕಾಗಿ ನಾನು ಅವರನ್ನು ಶಿಕ್ಷಿಸಿದೆ” ಎಂದನು.


ಆದ್ದರಿಂದ ಆತನು ನಿಮ್ಮ ವೈರಿಗಳನ್ನು ಕಳುಹಿಸಿ ಅವರ ಸೇವೆ ನೀವು ಮಾಡುವಂತೆ ಮಾಡುವನು. ನೀವು ಹಸಿವು ಬಾಯಾರಿಕೆಗಳಿಂದ ಬಳಲುವಿರಿ; ಬಟ್ಟೆಯಿಲ್ಲದೆ ಬಡವರಾಗಿ ಜೀವಿಸುವಿರಿ. ನಿಮ್ಮ ಯೆಹೋವನು ನಿಮ್ಮ ಮೇಲೆ ಭಾರವನ್ನು ಹೊರಿಸುವನು. ಆ ಭಾರವನ್ನು ನಿಮ್ಮಿಂದ ತೆಗೆಯಲಾಗುವುದಿಲ್ಲ; ನೀವು ನಾಶವಾಗುವಿರಿ.


ಸಂಸೋನನು ತನ್ನ ತಂದೆತಾಯಿಗಳೊಂದಿಗೆ ತಿಮ್ನಾ ನಗರಕ್ಕೆ ಹೋದನು. ಅವರು ನಗರದ ಸಮೀಪದ ದ್ರಾಕ್ಷಿತೋಟಗಳವರೆಗೆ ಹೋದರು. ಅಲ್ಲಿ ಹಠಾತ್ತಾಗಿ ಒಂದು ಪ್ರಾಯದ ಸಿಂಹವು ಘರ್ಜಿಸಿ ಸಂಸೋನನ ಮೇಲೆರಗಿತು.


ಆದರೆ ಬೇರೆ ಮುಖ್ಯಾಧಿಕಾರಿಗಳು ಮತ್ತು ದೇಶಾಧಿಪತಿಗಳು ಈ ಸಮಾಚಾರವನ್ನು ತಿಳಿದು ಹೊಟ್ಟೆಕಿಚ್ಚುಪಟ್ಟರು. ಅವರು ದಾನಿಯೇಲನ ಮೇಲೆ ದೋಷಾರೋಪಣೆ ಮಾಡಲು ಕಾರಣಗಳನ್ನು ಹುಡುಕಲಾರಂಭಿಸಿದರು. ದಾನಿಯೇಲನು ಮಾಡುವ ರಾಜ್ಯದ ಎಲ್ಲ ಕೆಲಸಗಳ ಮೇಲೆ ಅವರು ಕಣ್ಣಿಟ್ಟರು. ಆದರೆ ದಾನಿಯೇಲನಲ್ಲಿ ಯಾವ ತಪ್ಪೂ ಅವರಿಗೆ ಸಿಕ್ಕಲಿಲ್ಲ. ಆದ್ದರಿಂದ ಅವರು ಅವನ ಮೇಲೆ ಯಾವ ದೋಷಾರೋಪಣೆಯನ್ನೂ ಮಾಡಲಾಗಲಿಲ್ಲ. ದಾನಿಯೇಲನು ಪ್ರಾಮಾಣಿಕನೂ ವಿಶ್ವಾಸಪಾತ್ರನೂ ಆಗಿದ್ದನು. ಅವನು ಬಹಳ ಕಷ್ಟಪಟ್ಟು ಕೆಲಸ ಮಾಡುತ್ತಿದ್ದನು; ಅರಸನಿಗೆ ಯಾವ ರೀತಿಯಲ್ಲೂ ವಂಚನೆ ಮಾಡುತ್ತಿರಲಿಲ್ಲ.


ಸಂಸೋನನು ಅವನಿಗೆ, “ಫಿಲಿಷ್ಟಿಯರಾದ ನಿಮಗೆ ತೊಂದರೆಕೊಡಲು ನನಗೊಂದು ಒಳ್ಳೆಯ ಕಾರಣ ಸಿಕ್ಕಿತು. ಈಗ ಯಾರೂ ನನ್ನದು ತಪ್ಪೆಂದು ಹೇಳುವುದಿಲ್ಲ” ಎಂದು ಹೇಳಿದನು.


ನೀನು ಅವರಿಗೆ, ‘ನಿಮ್ಮ ಸೋದರರಾದ ಇಸ್ರೇಲರ ವಿರುದ್ಧ ನೀವು ಯುದ್ಧಕ್ಕೆ ಹೋಗಲೇಬಾರದೆಂದು ಯೆಹೋವನು ಹೇಳುತ್ತಾನೆ. ನಿಮ್ಮಲ್ಲಿ ಪ್ರತಿಯೊಬ್ಬನು ಮನೆಗೆ ಹೋಗಬೇಕು. ಈ ಸಂಗತಿಗಳೆಲ್ಲ ಸಂಭವಿಸುವಂತೆ ನಾನೇ ಮಾಡಿದೆನು’ ಎಂದು ಹೇಳು” ಎಂಬುದಾಗಿ ತಿಳಿಸಿದನು. ಆದ್ದರಿಂದ ರೆಹಬ್ಬಾಮನ ಸೈನ್ಯದಲ್ಲಿನ ಜನರೆಲ್ಲರೂ ಯೆಹೋವನ ಆಜ್ಞೆಯನ್ನು ಅನುಸರಿಸಿದರು. ಅವರು ತಮ್ಮ ಮನೆಗಳಿಗೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು