ನ್ಯಾಯಸ್ಥಾಪಕರು 14:9 - ಪರಿಶುದ್ದ ಬೈಬಲ್9 ಸಂಸೋನನು ತನ್ನ ಕೈಯಿಂದ ಸ್ವಲ್ಪ ಜೇನುತುಪ್ಪವನ್ನು ತೆಗೆದುಕೊಂಡು ಅದನ್ನು ತಿನ್ನುತ್ತಾ ನಡೆದನು. ತಂದೆತಾಯಿಗಳ ಹತ್ತಿರ ಬಂದು ಅವರಿಗೆ ಸ್ವಲ್ಪ ಜೇನುತುಪ್ಪವನ್ನು ಕೊಟ್ಟನು. ಅವರೂ ತಿಂದರು. ಆದರೆ ಆ ಸತ್ತಸಿಂಹದ ದೇಹದಿಂದ ಜೇನುತುಪ್ಪವನ್ನು ತೆಗೆದುಕೊಂಡ ಸಂಗತಿಯನ್ನು ಸಂಸೋನನು ಅವರಿಗೆ ಹೇಳಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆ ಜೇನನ್ನು ಕೈಯಲ್ಲಿ ತೆಗೆದುಕೊಂಡು ತಿನ್ನುತ್ತಾ ಹೋದನು; ತನ್ನ ತಂದೆತಾಯಿಗಳಿಗೂ ಕೊಟ್ಟನು; ಅವರೂ ತಿಂದರು. ಆದರೆ ಸತ್ತ ಸಿಂಹದ ದೇಹದಿಂದ ತಾನು ಜೇನು ತೆಗೆದುಕೊಂಡನೆಂದು ಅವರಿಗೆ ತಿಳಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆ ಜೇನನ್ನು ಕೈಯಲ್ಲಿ ತೆಗೆದುಕೊಂಡು ತಿನ್ನುತ್ತಾ ಹೋದನು; ತನ್ನ ತಂದೆತಾಯಿಗಳಿಗೂ ಕೊಟ್ಟನು; ಅವರೂ ತಿಂದರು. ಆದರೆ ಅದು ತನಗೆ ಸಿಂಹದ ಒಡಲಲ್ಲಿ ಸಿಕ್ಕಿತೆಂಬುದನ್ನು ಅವರಿಗೆ ತಿಳಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆ ಜೇನನ್ನು ಕೈಯಲ್ಲಿ ತೆಗೆದುಕೊಂಡು ತಿನ್ನುತ್ತಾ ಹೋದನು; ತನ್ನ ತಂದೆತಾಯಿಗಳಿಗೂ ಕೊಟ್ಟನು; ಅವರು ತಿಂದರು. ಆದರೆ ಅದು ತನಗೆ ಸಿಂಹದ ಒಡಲಲ್ಲಿ ಸಿಕ್ಕಿತೆಂಬದನ್ನು ಅವರಿಗೆ ತಿಳಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅದನ್ನು ಅವನು ತನ್ನ ಕೈಗಳಲ್ಲಿ ತೆಗೆದುಕೊಂಡು ತಿನ್ನುತ್ತಾ, ತನ್ನ ತಂದೆತಾಯಿಗಳ ಬಳಿಗೆ ಹೋಗಿ ಅವರಿಗೂ ಕೊಟ್ಟನು; ಅವರೂ ತಿಂದರು. ಆದರೆ ಸಿಂಹದ ಹೆಣದಿಂದ ತಾನು ಜೇನು ತೆಗೆದುಕೊಂಡೆನೆಂದು ಅವರಿಗೆ ತಿಳಿಸಲಿಲ್ಲ. ಅಧ್ಯಾಯವನ್ನು ನೋಡಿ |