ನ್ಯಾಯಸ್ಥಾಪಕರು 15:10 - ಪರಿಶುದ್ದ ಬೈಬಲ್10 ಯೆಹೂದ್ಯರು ಅವರಿಗೆ, “ಫಿಲಿಷ್ಟಿಯರಾದ ನೀವು ನಮ್ಮ ಸಂಗಡ ಯುದ್ಧ ಮಾಡುವುದಕ್ಕೆ ಇಲ್ಲಿಗೇಕೆ ಬಂದಿದ್ದೀರಿ?” ಎಂದು ಕೇಳಿದರು. ಅದಕ್ಕೆ ಅವರು, “ನಾವು ಸಂಸೋನನನ್ನು ಹಿಡಿಯಲು ಬಂದಿದ್ದೇವೆ. ನಾವು ಅವನನ್ನು ಬಂಧಿಸಬೇಕಾಗಿದೆ. ಅವನು ನಮ್ಮ ಜನರಿಗೆ ಮಾಡಿದ ದ್ರೋಹಕ್ಕಾಗಿ ಅವನನ್ನು ಶಿಕ್ಷಿಸಬೇಕು” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೀವು ನಮಗೆ ವಿರೋಧವಾಗಿ ಯುದ್ಧಕ್ಕೆ ಬಂದದ್ದೇಕೆ ಎಂದು ಯೆಹೂದ್ಯರು ಅವರನ್ನು ಕೇಳಲು ಅವರು, “ಸಂಸೋನನನ್ನು ಹಿಡಿದು ಕಟ್ಟಿ ಅವನು ನಮಗೆ ಮಾಡಿದಂತೆಯೇ ಅವನಿಗೂ ಮಾಡಬೇಕೆಂದು ಬಂದೆವು” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ನೀವು ನಮಗೆ ವಿರೋಧವಾಗಿ ಯುದ್ಧಕ್ಕೆ ಬಂದದ್ದೇಕೆ?” ಎಂದು ಯೆಹೂದ್ಯರು ಅವರನ್ನು ಕೇಳಿದರು. ಅವರು, “ಸಂಸೋನನನ್ನು ಹಿಡಿದು, ಬಂಧಿಸಿ, ಅವನು ನಮಗೆ ಮಾಡಿದಂತೆಯೇ ಅವನಿಗೂ ಮಾಡಬೇಕೆಂದು ಬಂದೆವು,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೀವು ನಮಗೆ ವಿರೋಧವಾಗಿ ಯುದ್ಧಕ್ಕೆ ಬಂದದ್ದೇಕೆ ಎಂದು ಯೆಹೂದ್ಯರು ಅವರನ್ನು ಕೇಳಲು ಅವರು - ಸಂಸೋನನನ್ನು ಹಿಡಿದು ಕಟ್ಟಿ ಅವನು ನಮಗೆ ಮಾಡಿದಂತೆಯೇ ಅವನಿಗೂ ಮಾಡಬೇಕೆಂದು ಬಂದೆವು ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೆಹೂದದಲ್ಲಿ ವಾಸಿಸುವ ಜನರು ಅವರಿಗೆ, “ನೀವು ನಮಗೆ ವಿರೋಧವಾಗಿ ಬಂದದ್ದೇನು?” ಎಂದರು. ಫಿಲಿಷ್ಟಿಯರು, “ಸಂಸೋನನು ನಮಗೆ ಮಾಡಿದ ಹಾಗೆ ನಾವು ಅವನಿಗೆ ಪ್ರತಿಯಾಗಿ ಮಾಡುವುದಕ್ಕೆ, ಅವನನ್ನು ಹಿಡಿದು ಕಟ್ಟುವುದಕ್ಕೆ ಬಂದೆವು,” ಎಂದರು. ಅಧ್ಯಾಯವನ್ನು ನೋಡಿ |