Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 15:11 - ಪರಿಶುದ್ದ ಬೈಬಲ್‌

11 ಆಗ ಯೆಹೂದಕುಲದ ಮೂರು ಸಾವಿರ ಜನರು ಸಂಸೋನನಲ್ಲಿಗೆ ಹೋದರು. ಅವರು ಏಟಾಮಿನ ಬಂಡೆಯ ಬಳಿಯಲ್ಲಿದ್ದ ಗುಹೆಗೆ ಬಂದು ಅವನಿಗೆ, “ನೀನು ನಮಗೆ ಮಾಡಿರುವುದೇನು? ಫಿಲಿಷ್ಟಿಯರು ನಮ್ಮನ್ನು ಆಳುತ್ತಿದ್ದಾರೆ ಎಂಬುದು ನಿನಗೆ ಗೊತ್ತಿಲ್ಲವೇ?” ಎಂದು ಕೇಳಿದರು. ಸಂಸೋನನು, “ಅವರು ನನಗೆ ಮಾಡಿದ ದ್ರೋಹಕ್ಕಾಗಿ ನಾನು ಅವರನ್ನು ಶಿಕ್ಷಿಸಿದೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮೂರು ಸಾವಿರ ಮಂದಿ ಯೆಹೂದ್ಯರು ಏಟಾಮ್ ಗಿರಿಗೆ ಹೋಗಿ ಸಂಸೋನನಿಗೆ, “ಫಿಲಿಷ್ಟಿಯರು ನಮ್ಮ ಮೇಲೆ ದೊರೆತನಮಾಡುತ್ತಿದ್ದಾರೆ ಎಂಬುದು ನಿನಗೆ ಗೊತ್ತಿಲ್ಲವೋ? ಹೀಗೆ ಯಾಕೆ ಮಾಡಿದಿ?” ಎಂದು ಕೇಳಲು ಅವನು, “ಅವರು ನನಗೆ ಮಾಡಿದಂತೆಯೇ ನಾನು ಅವರಿಗೆ ಮಾಡಿದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮೂರು ಸಾವಿರ ಮಂದಿ ಯೆಹೂದ್ಯರು ಏಟಾಮ್ ಗಿರಿಗೆ ಹೋಗಿ ಸಂಸೋನನಿಗೆ, “ಫಿಲಿಷ್ಟಿಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದಾರೆಂಬುದು ನಿನಗೆ ಗೊತ್ತಿಲ್ಲವೇ? ಹೀಗೆ ಏಕೆ ಮಾಡಿದೆ,” ಎಂದು ಕೇಳಲು ಅವನು, “ಅವರು ನನಗೆ ಮಾಡಿದಂತೆಯೇ ನಾನು ಅವರಿಗೆ ಮಾಡಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮೂರು ಸಾವಿರ ಮಂದಿ ಯೆಹೂದ್ಯರು ಏಟಾಮ್ ಗಿರಿಗೆ ಹೋಗಿ ಸಂಸೋನನಿಗೆ - ಫಿಲಿಷ್ಟಿಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದಾರೆಂಬದು ನಿನಗೆ ಗೊತ್ತಿಲ್ಲವೋ? ಹೀಗೆ ಯಾಕೆ ಮಾಡಿದಿ ಎಂದು ಕೇಳಲು ಅವನು - ಅವರು ನನಗೆ ಮಾಡಿದಂತೆಯೇ ನಾನು ಅವರಿಗೆ ಮಾಡಿದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಯೆಹೂದದಲ್ಲಿ ಮೂರು ಸಾವಿರ ಜನರು ಏಟಾಮ್ ಬಂಡೆಯ ಮೇಲಕ್ಕೆ ಏರಿಹೋಗಿ, ಸಂಸೋನನಿಗೆ, “ಫಿಲಿಷ್ಟಿಯರು ನಮ್ಮನ್ನು ಆಳುತ್ತಾ ಇದ್ದಾರೆಂದು ನಿನಗೆ ಗೊತ್ತಿಲ್ಲವೋ? ನೀನು ನಮಗೆ ಹೀಗೆ ಏಕೆ ಮಾಡಿದೆ?” ಎಂದರು. ಅದಕ್ಕವನು, “ಅವರು ನನಗೆ ಮಾಡಿದ ಪ್ರಕಾರವೇ, ನಾನು ಅವರಿಗೆ ಮಾಡಿದೆನು,” ಎಂದು ಅವರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 15:11
10 ತಿಳಿವುಗಳ ಹೋಲಿಕೆ  

ಇದು ಯೆಹೋವನ ಚಿತ್ತವೆಂಬುದು ಸಂಸೋನನ ತಂದೆತಾಯಿಗಳಿಗೆ ತಿಳಿದಿರಲಿಲ್ಲ. ಫಿಲಿಷ್ಟಿಯರಿಗೆ ಕೇಡುಮಾಡಲು ಯೆಹೋವನು ತಕ್ಕಮಾರ್ಗವನ್ನು ಹುಡುಕುತ್ತಿದ್ದನು. ಆ ಸಮಯದಲ್ಲಿ ಫಿಲಿಷ್ಟಿಯರು ಇಸ್ರೇಲರ ಮೇಲೆ ಆಳ್ವಿಕೆ ಮಾಡುತ್ತಿದ್ದರು.


ಇಸ್ರೇಲರು ಮತ್ತೆ ಯೆಹೋವನಿಗೆ ವಿರೋಧವಾಗಿ ದುಷ್ಕೃತ್ಯಗಳನ್ನು ಮಾಡಿದರು. ಆದ್ದರಿಂದ ಫಿಲಿಷ್ಟಿಯರು ನಲವತ್ತು ವರ್ಷ ಅವರನ್ನು ಆಳುವಂತೆ ಯೆಹೋವನು ಮಾಡಿದನು.


ಯೆಹೋವನು ನಿಮ್ಮನ್ನು ತಲೆಯನ್ನಾಗಿ ಮಾಡಲು ಬಯಸುತ್ತಾನೆಯೇ ಹೊರತು ಬಾಲವನ್ನಾಗಿಯಲ್ಲ. ನೀವು ಮೇಲಿನ ಅಂತಸ್ತಿನಲ್ಲಿರುವಿರಿ, ಕೆಳಗಿನದರಲ್ಲಿ ಅಲ್ಲ. ನೀವು ಯೆಹೋವನ ಆಜ್ಞೆಯನ್ನು ಪಾಲಿಸಿದಾಗ ನಿಮಗೆ ಹೀಗೆ ಆಗುವುದು.


ನೀವು ನನ್ನ ಒಡಂಬಡಿಕೆಯನ್ನು ಮೀರಿದ್ದರಿಂದ ನಾನು ನಿಮ್ಮನ್ನು ದಂಡಿಸುವೆನು. ನಿಮಗೆ ವಿರೋಧವಾಗಿ ಸೈನ್ಯಗಳನ್ನು ಬರಮಾಡುವೆ. ನೀವು ಭದ್ರತೆಗಾಗಿ ನಿಮ್ಮ ಪಟ್ಟಣಗಳೊಳಗೆ ಹೋಗುವಿರಿ. ಆದರೆ ವ್ಯಾಧಿಯು ನಿಮ್ಮಲ್ಲಿ ಹಬ್ಬುವಂತೆ ಮಾಡುವೆ. ನಿಮ್ಮ ವೈರಿಗಳು ನಿಮ್ಮನ್ನು ಸೋಲಿಸುವರು.


ನಿಮ್ಮ ಮಧ್ಯದಲ್ಲಿ ವಾಸಿಸುವ ಅನ್ಯರು ಬಲಿಷ್ಠರಾಗುವರು. ನೀವಾದರೋ ಬಲಹೀನರಾಗುವಿರಿ.


ಯೆಹೂದ್ಯರು ಅವರಿಗೆ, “ಫಿಲಿಷ್ಟಿಯರಾದ ನೀವು ನಮ್ಮ ಸಂಗಡ ಯುದ್ಧ ಮಾಡುವುದಕ್ಕೆ ಇಲ್ಲಿಗೇಕೆ ಬಂದಿದ್ದೀರಿ?” ಎಂದು ಕೇಳಿದರು. ಅದಕ್ಕೆ ಅವರು, “ನಾವು ಸಂಸೋನನನ್ನು ಹಿಡಿಯಲು ಬಂದಿದ್ದೇವೆ. ನಾವು ಅವನನ್ನು ಬಂಧಿಸಬೇಕಾಗಿದೆ. ಅವನು ನಮ್ಮ ಜನರಿಗೆ ಮಾಡಿದ ದ್ರೋಹಕ್ಕಾಗಿ ಅವನನ್ನು ಶಿಕ್ಷಿಸಬೇಕು” ಎಂದು ಉತ್ತರಕೊಟ್ಟರು.


ಆಗ ಅವರು ಸಂಸೋನನಿಗೆ, “ನಾವು ನಿನ್ನನ್ನು ಬಂಧಿಸಲು ಬಂದಿದ್ದೇವೆ. ನಾವು ನಿನ್ನನ್ನು ಫಿಲಿಷ್ಟಿಯರಿಗೆ ಕೊಡುತ್ತೇವೆ” ಎಂದರು. ಸಂಸೋನನು ಯೆಹೂದ್ಯರಿಗೆ, “ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ಆಣೆಮಾಡಿರಿ” ಅಂದನು.


ಏಟಾಮನ ಗಂಡುಮಕ್ಕಳು ಯಾರೆಂದರೆ: ಇಜ್ರೆಯೇಲ್, ಇಷ್ಮ ಮತ್ತು ಇಬ್ಬಾಷ್. ಇವರ ಸಹೋದರಿ ಹಚೆಲೆಲ್ ಪೋನೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು