Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 15:2 - ಪರಿಶುದ್ದ ಬೈಬಲ್‌

2 ಅವನು ಸಂಸೋನನಿಗೆ, “ನೀನು ಅವಳನ್ನು ದ್ವೇಷಿಸುವೆ ಎಂದು ತಿಳಿದು ಮದುವೆಯಲ್ಲಿ ನಿನ್ನೊಂದಿಗಿದ್ದ ಉತ್ತಮ ಪುರುಷನೊಬ್ಬನಿಗೆ ಅವಳನ್ನು ಮದುವೆ ಮಾಡಿಕೊಟ್ಟೆ. ಅವಳ ತಂಗಿಯು ಆಕೆಗಿಂತ ಹೆಚ್ಚು ಸುಂದರಿಯಾಗಿದ್ದಾಳೆ. ಆಕೆಯನ್ನು ನೀನು ಮದುವೆಯಾಗು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀನು ನಿಜವಾಗಿ ಆಕೆಯನ್ನು ಹಗೆಮಾಡುತ್ತೀಯೆಂದು ತಿಳಿದು ಅವಳನ್ನು ನಿನ್ನ ಗೆಳೆಯರಲ್ಲೊಬ್ಬನಿಗೆ ಮದುವೆಮಾಡಿಕೊಟ್ಟೆನು. ಆಕೆಯ ತಂಗಿಯು ಆಕೆಗಿಂತ ಸುಂದರಿಯಾಗಿದ್ದಾಳಲ್ಲಾ; ಈಕೆಯು ನಿನಗಿರಲಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನೀನು ನಿಜವಾಗಿ ಆಕೆಯನ್ನು ದ್ವೇಷಮಾಡುತ್ತೀಯೆಂದು ನಿನ್ನ ಆಪ್ತರೊಬ್ಬನಿಗೆ ಮದುವೆಮಾಡಿಕೊಟ್ಟೆ. ಆಕೆಯ ತಂಗಿ ಆಕೆಗಿಂತ ಸುಂದರಿಯಾಗಿದ್ದಾಳೆ; ಈಕೆ ನಿನಗೆ ಇರಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ನಿಜವಾಗಿ ಆಕೆಯನ್ನು ಹಗೆ ಮಾಡುತ್ತೀಯೆಂದು ನಿನ್ನ ಗೆಳೆಯರಲ್ಲೊಬ್ಬನಿಗೆ ಮದುವೆಮಾಡಿ ಕೊಟ್ಟೆನು. ಆಕೆಯ ತಂಗಿಯು ಆಕೆಗಿಂತ ಸುಂದರಿಯಾಗಿದ್ದಾಳಲ್ಲಾ; ಈಕೆಯು ನಿನಗಿರಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದರೆ ಅವಳ ತಂದೆಯು ಅವನನ್ನು ಅನುಮತಿಸದೆ ಅವನಿಗೆ, “ನೀನು ಅವಳನ್ನು ಪೂರ್ಣವಾಗಿ ಹಗೆ ಮಾಡಿದೆ ಎಂದು ನಾನು ನಿಜವಾಗಿ ತಿಳಿದು, ಅವಳನ್ನು ನಿನ್ನ ಜೊತೆಯವನಿಗೆ ಮದುವೆ ಮಾಡಿಕೊಟ್ಟೆನು. ಅವಳ ತಂಗಿ ಅವಳಿಗಿಂತ ಸುಂದರಿಯಾಗಿದ್ದಾಳೆ. ಅವಳಿಗೆ ಬದಲಾಗಿ ಇವಳನ್ನು ಮದುವೆಯಾಗು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 15:2
5 ತಿಳಿವುಗಳ ಹೋಲಿಕೆ  

ಸಂಸೋನನು ತನ್ನ ಹೆಂಡತಿಯನ್ನು ಕರೆದುಕೊಂಡು ಹೋಗಲಿಲ್ಲ. ಆಕೆಯ ತಂದೆ ಮೂವತ್ತು ಜನರಲ್ಲಿದ್ದ ಉತ್ತಮ ಪುರುಷನೊಬ್ಬನಿಗೆ ಅವಳನ್ನು ಕೊಟ್ಟು ಮದುವೆಮಾಡಿದನು.


“ನಾನು ಫರಿಸಾಯನಾಗಿದ್ದಾಗ ನಜರೇತಿನ ಯೇಸುವಿನ ಹೆಸರಿಗೆ ವಿರೋಧವಾಗಿ ಅನೇಕ ಕಾರ್ಯಗಳನ್ನು ಮಾಡಬೇಕೆಂದು ಆಲೋಚಿಸಿಕೊಂಡೆನು.


ಸಂಸೋನನ ಹೆಂಡತಿಯು ಅವನ ಹತ್ತಿರ ಹೋಗಿ ಅಳುವುದಕ್ಕೆ ಪ್ರಾರಂಭಿಸಿದಳು. ಅವಳು, “ನೀನು ನನ್ನನ್ನು ನಿಜವಾಗಿ ಪ್ರೀತಿಸುವುದಿಲ್ಲ, ನನ್ನನ್ನು ದ್ವೇಷಿಸುತ್ತಿ; ನೀನು ನಮ್ಮ ಜನರಿಗೆ ಒಗಟನ್ನು ಹೇಳಿರುವೆ; ಆದರೆ ಅದರ ಅರ್ಥವನ್ನು ನನಗೆ ಹೇಳಿಲ್ಲ” ಎಂದು ಗೋಳಾಡತೊಡಗಿದಳು. ಅದಕ್ಕೆ ಸಂಸೋನನು, “ನಾನು ನನ್ನ ತಂದೆತಾಯಿಯರಿಗೆ ಅದನ್ನು ತಿಳಿಸಲಿಲ್ಲ, ನಿನಗೆ ತಿಳಿಸುವೆನೋ?” ಎಂದನು.


ತಾಮಾರಳು ಯಾವಾಗಲೂ ವಿಧವೆಯ ವಸ್ತ್ರಗಳನ್ನು ಧರಿಸಿಕೊಂಡಿರುತ್ತಿದ್ದಳು. ಆದರೆ ಈಗ ಆಕೆ ಬೇರೆ ಬಟ್ಟೆಗಳನ್ನು ಧರಿಸಿಕೊಂಡು ತನ್ನ ಮುಖವನ್ನು ಮುಸುಕಿನಿಂದ ಮುಚ್ಚಿಕೊಂಡು ತಿಮ್ನಾ ಊರಿನ ಸಮೀಪದಲ್ಲಿರುವ ಏನಯಿಮೂರಿನ ದಾರಿಯಲ್ಲಿ ಕುಳಿತುಕೊಂಡಳು. ಯೆಹೂದನ ಚಿಕ್ಕಮಗನಾದ ಶೇಲಹನು ಬೆಳೆದು ದೊಡ್ಡವನಾಗಿರುವುದು ತಾಮಾರಳಿಗೆ ತಿಳಿದಿತ್ತು. ಆದರೆ ಆಕೆಗೆ ಅವನನ್ನು ಮದುವೆ ಮಾಡಿಸಲು ಯೆಹೂದನು ಆಲೋಚಿಸಿರಲಿಲ್ಲ.


ಸಂಸೋನನು ಅವನಿಗೆ, “ಫಿಲಿಷ್ಟಿಯರಾದ ನಿಮಗೆ ತೊಂದರೆಕೊಡಲು ನನಗೊಂದು ಒಳ್ಳೆಯ ಕಾರಣ ಸಿಕ್ಕಿತು. ಈಗ ಯಾರೂ ನನ್ನದು ತಪ್ಪೆಂದು ಹೇಳುವುದಿಲ್ಲ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು