Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 15:3 - ಪರಿಶುದ್ದ ಬೈಬಲ್‌

3 ಸಂಸೋನನು ಅವನಿಗೆ, “ಫಿಲಿಷ್ಟಿಯರಾದ ನಿಮಗೆ ತೊಂದರೆಕೊಡಲು ನನಗೊಂದು ಒಳ್ಳೆಯ ಕಾರಣ ಸಿಕ್ಕಿತು. ಈಗ ಯಾರೂ ನನ್ನದು ತಪ್ಪೆಂದು ಹೇಳುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಸಂಸೋನನು, “ಈ ಸಾರಿ ನಾನು ಫಿಲಿಷ್ಟಿಯರಿಗೆ ಕೇಡುಮಾಡುವುದಾದರೆ ತಪ್ಪು ನನ್ನದಲ್ಲ” ಎಂದುಕೊಂಡು ಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಸಂಸೋನನು, “ಈ ಸಾರಿ ಫಿಲಿಷ್ಟಿಯರಿಗೆ ನಷ್ಟ ಉಂಟುಮಾಡಿದರೆ ತಪ್ಪು ನನ್ನದಲ್ಲ,” ಎಂದುಕೊಂಡು ಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಸಂಸೋನನು - ಈ ಸಾರಿ ನಾನು ಫಿಲಿಷ್ಟಿಯರಿಗೆ ಕೇಡುಮಾಡುವದಾದರೆ ತಪ್ಪು ನನ್ನದಲ್ಲ ಎಂದಂದುಕೊಂಡು ಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಸಂಸೋನನು, “ಅವರನ್ನು ಕುರಿತು, ನಾನು ಈ ಸಾರಿ ನಿರಪರಾಧಿ ಫಿಲಿಷ್ಟಿಯರಿಗೆ ಕೇಡನ್ನು ಮಾಡುವ ಸರಿಯಾದ ಸಮಯವಿದು,” ಎಂದು ಹೇಳಿ, ಹೊರಟುಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 15:3
5 ತಿಳಿವುಗಳ ಹೋಲಿಕೆ  

ನಾಲ್ಕನೆಯ ದಿನ ಅವರು ಸಂಸೋನನ ಹೆಂಡತಿಯಲ್ಲಿಗೆ ಬಂದು, “ನೀನು ನಮ್ಮನ್ನು ಬಡವರನ್ನಾಗಿ ಮಾಡಲು ಇಲ್ಲಿಗೆ ಕರೆದಿರುವಿಯಾ? ನೀನು ನಿನ್ನ ಗಂಡನನ್ನು ಮರುಳುಗೊಳಿಸಿ ನಮಗೆ ಒಗಟಿನ ಅರ್ಥವನ್ನು ಹೇಳುವಂತೆ ಮಾಡು. ನೀನು ನಮಗೆ ಒಗಟಿನ ಅರ್ಥವನ್ನು ಹೇಳದಿದ್ದರೆ ನಾವು ನಿನ್ನನ್ನು ಮತ್ತು ನಿನ್ನ ತಂದೆಯ ಮನೆಯಲ್ಲಿರುವ ಎಲ್ಲರನ್ನೂ ಸುಟ್ಟುಹಾಕುತ್ತೇವೆ” ಎಂದರು.


ಅವನು ಸಂಸೋನನಿಗೆ, “ನೀನು ಅವಳನ್ನು ದ್ವೇಷಿಸುವೆ ಎಂದು ತಿಳಿದು ಮದುವೆಯಲ್ಲಿ ನಿನ್ನೊಂದಿಗಿದ್ದ ಉತ್ತಮ ಪುರುಷನೊಬ್ಬನಿಗೆ ಅವಳನ್ನು ಮದುವೆ ಮಾಡಿಕೊಟ್ಟೆ. ಅವಳ ತಂಗಿಯು ಆಕೆಗಿಂತ ಹೆಚ್ಚು ಸುಂದರಿಯಾಗಿದ್ದಾಳೆ. ಆಕೆಯನ್ನು ನೀನು ಮದುವೆಯಾಗು” ಎಂದನು.


ಸಂಸೋನನು ಹೊರಗೆ ಹೋಗಿ ಮುನ್ನೂರು ನರಿಗಳನ್ನು ಹಿಡಿದನು. ಅವುಗಳಲ್ಲಿ ಎರಡೆರಡು ನರಿಗಳನ್ನು ಹಿಡಿದು ಒಂದರ ಬಾಲವನ್ನು ಮತ್ತೊಂದರ ಬಾಲಕ್ಕೆ ಕಟ್ಟಿದನು. ನರಿಗಳ ಪ್ರತಿಯೊಂದು ಜೋಡಿಯ ಬಾಲಗಳ ಮಧ್ಯದಲ್ಲಿ ಒಂದು ಪಂಜನ್ನು ಕಟ್ಟಿದನು.


ಆಗ ಅಬ್ಷಾಲೋಮನು ತನ್ನ ಸೇವಕರಿಗೆ, “ನೋಡಿರಿ, ನನ್ನ ಹೊಲದ ಪಕ್ಕದಲ್ಲಿ ಯೋವಾಬನ ಹೊಲವಿದೆ. ಅವನು ಆ ಹೊಲದಲ್ಲಿ ಜವೆಗೋಧಿಯನ್ನು ಬೆಳೆದಿದ್ದಾನೆ. ಹೋಗಿ ಆ ಜವೆಗೋಧಿಯನ್ನು ಸುಟ್ಟುಬಿಡಿರಿ” ಎಂದು ಹೇಳಿದನು. ಅಬ್ಷಾಲೋಮನ ಸೇವಕರು ಹೋಗಿ ಯೋವಾಬನ ಹೊಲದಲ್ಲಿ ಬೆಂಕಿಯನ್ನು ಹಚ್ಚಿದರು.


ಇದು ಯೆಹೋವನ ಚಿತ್ತವೆಂಬುದು ಸಂಸೋನನ ತಂದೆತಾಯಿಗಳಿಗೆ ತಿಳಿದಿರಲಿಲ್ಲ. ಫಿಲಿಷ್ಟಿಯರಿಗೆ ಕೇಡುಮಾಡಲು ಯೆಹೋವನು ತಕ್ಕಮಾರ್ಗವನ್ನು ಹುಡುಕುತ್ತಿದ್ದನು. ಆ ಸಮಯದಲ್ಲಿ ಫಿಲಿಷ್ಟಿಯರು ಇಸ್ರೇಲರ ಮೇಲೆ ಆಳ್ವಿಕೆ ಮಾಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು