ನ್ಯಾಯಸ್ಥಾಪಕರು 15:5 - ಪರಿಶುದ್ದ ಬೈಬಲ್5 ಸಂಸೋನನು ಆ ಪಂಜುಗಳಿಗೆ ಬೆಂಕಿ ಹಚ್ಚಿ ಆ ನರಿಗಳನ್ನು ಫಿಲಿಷ್ಟಿಯರ ಪೈರುಗಳಿದ್ದ ಹೊಲಗಳಲ್ಲಿ ಓಡಾಡಲು ಬಿಟ್ಟನು. ಈ ರೀತಿ ಅವನು ಅವರ ಹೊಲಗಳಲ್ಲಿ ಬೆಳೆದ ಪೈರನ್ನೂ ಮತ್ತು ಅವರು ಕೊಯ್ದುಹಾಕಿದ ತೆನೆಗೂಡುಗಳನ್ನೂ ಸುಟ್ಟುಹಾಕಿದನು. ಅವನು ಅವರ ದ್ರಾಕ್ಷಿಯ ತೋಟಗಳನ್ನು ಮತ್ತು ಆಲಿವ್ ಮರಗಳನ್ನು ಸುಟ್ಟುಹಾಕಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆ ನರಿಗಳನ್ನು ಫಿಲಿಷ್ಟಿಯರ ಹೊಲಗಳಲ್ಲಿ ಬಿಟ್ಟು, ಅವರ ತೆನೆಗೂಡುಗಳನ್ನೂ, ಇನ್ನೂ ಕೊಯ್ಯದೆ ಇದ್ದ ಬೆಳೆಯನ್ನೂ, ಎಣ್ಣೆಯ ಮರಗಳ ತೋಟಗಳನ್ನೂ ಸುಟ್ಟುಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆ ನರಿಗಳನ್ನು ‘ಫಿಲಿಷ್ಟಿಯರ ಬೆಳೆ ತುಂಬಿದ ಹೊಲಗಳಿಗೆ ಬಿಟ್ಟು ಅವರ ತೆನೆಗೂಡುಗಳನ್ನೂ ಇನ್ನೂ ಕೊಯ್ಯದೆ ಇದ್ದ ಪೈರುಗಳನ್ನೂ ಸುಟ್ಟುಬಿಟ್ಟನು. ಎಣ್ಣೆಯ ಮರಗಳ ತೋಟಗಳು ಸಹ ಸುಟ್ಟುಹೋದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಪಂಜುಗಳಿಗೆ ಬೆಂಕಿಹೊತ್ತಿಸಿ ಆ ನರಿಗಳನ್ನು ಫಿಲಿಷ್ಟಿಯರ ಪೈರುಗಳಲ್ಲಿ ಬಿಟ್ಟು ಅವರ ತೆನೆಗೂಡುಗಳನ್ನೂ ಇನ್ನೂ ಕೊಯ್ಯದೆ ಇದ್ದ ಪೈರುಗಳನ್ನೂ ಎಣ್ಣೆಯ ಮರಗಳ ತೋಟಗಳನ್ನೂ ಸುಟ್ಟುಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಬಾಲಗಳಿಗೆ ಬೆಂಕಿ ಹಚ್ಚಿ, ಅವುಗಳನ್ನು ಫಿಲಿಷ್ಟಿಯರ ಪೈರಿನಲ್ಲಿ ಕಳುಹಿಸಿಬಿಟ್ಟು, ತೆನೆ ಗೂಡುಗಳನ್ನೂ, ಪೈರುಗಳನ್ನೂ, ದ್ರಾಕ್ಷಿತೋಟಗಳನ್ನೂ, ಹಿಪ್ಪೆಯ ತೋಪುಗಳನ್ನೂ ಕೂಡ ಸುಟ್ಟುಬಿಟ್ಟನು. ಅಧ್ಯಾಯವನ್ನು ನೋಡಿ |
“ಇದನ್ನು ಮಾಡಿದವರು ಯಾರು?” ಎಂದು ಫಿಲಿಷ್ಟಿಯರು ವಿಚಾರಿಸಿದರು. ಒಬ್ಬನು, “ತಿಮ್ನಾ ನಗರದವನ ಅಳಿಯನಾದ ಸಂಸೋನನು ಇದನ್ನು ಮಾಡಿದನು. ಸಂಸೋನನ ಮಾವನು ಸಂಸೋನನ ಹೆಂಡತಿಯನ್ನು ಮದುವೆಯಲ್ಲಿದ್ದ ಉತ್ತಮ ಪುರುಷನೊಬ್ಬನಿಗೆ ಮದುವೆಮಾಡಿಕೊಟ್ಟಿದ್ದಕ್ಕಾಗಿ ಅವನು ಹೀಗೆಲ್ಲಾ ಮಾಡಿದನು” ಎಂದು ಹೇಳಿದನು. ಆಗ ಫಿಲಿಷ್ಟಿಯರು ಸಂಸೋನನ ಹೆಂಡತಿಯನ್ನು ಮತ್ತು ಅವಳ ತಂದೆಯನ್ನು ಸುಟ್ಟುಹಾಕಿದರು.