Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 15:7 - ಪರಿಶುದ್ದ ಬೈಬಲ್‌

7 ಸಂಸೋನನು ಫಿಲಿಷ್ಟಿಯರಿಗೆ, “ನೀವು ನನಗೆ ಈ ದುಷ್ಕೃತ್ಯವನ್ನು ಮಾಡಿರುವುದರಿಂದ ನಾನೂ ನಿಮಗೆ ಕೇಡನ್ನು ಮಾಡುತ್ತೇನೆ” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸಂಸೋನನು ಅವರಿಗೆ, “ನೀವು ಹೀಗೆ ಮಾಡಿದ್ದರಿಂದ ನಾನು ನಿಮಗೆ ಮುಯ್ಯಿತೀರಿಸದೆ ಬಿಡುವುದಿಲ್ಲ” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸಂಸೋನನು ಅವರಿಗೆ, “ನೀವು ಹೀಗೆ ಮಾಡಿದ್ದರಿಂದ ನಾನು ನಿಮಗೆ ಮುಯ್ಯಿ ತೀರಿಸದೆ ಬಿಡುವುದಿಲ್ಲ,” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸಂಸೋನನು ಅವರಿಗೆ - ನೀವು ಹೀಗೆ ಮಾಡಿದ್ದರಿಂದ ನಾನು ನಿಮಗೆ ಮುಯ್ಯಿತೀರಿಸದೆ ಬಿಡುವದಿಲ್ಲ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಸಂಸೋನನು ಅವರಿಗೆ, “ನೀವು ಈ ಪ್ರಕಾರ ಮಾಡಿದ್ದರಿಂದ ನಾನು ನಿಮಗೆ ಮುಯ್ಯಿಗೆ ಮುಯ್ಯಿ ತೀರಿಸದೆ ಬಿಡುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 15:7
5 ತಿಳಿವುಗಳ ಹೋಲಿಕೆ  

ನನ್ನ ಸ್ನೇಹಿತರೇ, ನಿಮಗೆ ಕೇಡುಮಾಡುವ ಜನರನ್ನು ದಂಡಿಸಲು ಪ್ರಯತ್ನಿಸಬೇಡಿ. ದೇವರು ತನ್ನ ಕೋಪದಿಂದ ಅವರನ್ನು ದಂಡಿಸುವವರೆಗೆ ಕಾದುಕೊಂಡಿರಿ. “ನಾನೇ ದಂಡಿಸುವವನು; ನಾನೇ ಜನರಿಗೆ ಮುಯ್ಯಿತೀರಿಸುವವನು ಎಂದು ಪ್ರಭುವು ಹೇಳುತ್ತಾನೆ” ಎಂಬುದಾಗಿ ಬರೆಯಲ್ಪಟ್ಟಿದೆ.


ಸಂಸೋನನು ಬಹಳ ಕೋಪಗೊಂಡನು. ಯೆಹೋವನ ಆತ್ಮವು ಸಂಸೋನನ ಮೇಲೆ ಪ್ರಬಲವಾಗಿ ಬಂತು. ಅವನು ಅಷ್ಕೆಲೋನ್ ನಗರಕ್ಕೆ ಧಾವಿಸಿದನು. ಆ ನಗರದಲ್ಲಿ ಅವನು ಮೂವತ್ತು ಜನ ಫಿಲಿಷ್ಟಿಯರನ್ನು ಕೊಂದನು. ಆಮೇಲೆ ಅವನು ಹೆಣಗಳ ಮೇಲಿನ ಎಲ್ಲ ಬಟ್ಟೆಗಳನ್ನೂ ಸ್ವತ್ತನ್ನೂ ಸುಲಿದುಕೊಂಡನು. ಆ ಬಟ್ಟೆಗಳನ್ನು ತಂದು ಒಗಟಿನ ಅರ್ಥ ಹೇಳಿದ ಜನರಿಗೆ ಕೊಟ್ಟನು. ಬಳಿಕ ಅವನು ತನ್ನ ತಂದೆಯ ಮನೆಗೆ ಹೋದನು.


ಇದು ಯೆಹೋವನ ಚಿತ್ತವೆಂಬುದು ಸಂಸೋನನ ತಂದೆತಾಯಿಗಳಿಗೆ ತಿಳಿದಿರಲಿಲ್ಲ. ಫಿಲಿಷ್ಟಿಯರಿಗೆ ಕೇಡುಮಾಡಲು ಯೆಹೋವನು ತಕ್ಕಮಾರ್ಗವನ್ನು ಹುಡುಕುತ್ತಿದ್ದನು. ಆ ಸಮಯದಲ್ಲಿ ಫಿಲಿಷ್ಟಿಯರು ಇಸ್ರೇಲರ ಮೇಲೆ ಆಳ್ವಿಕೆ ಮಾಡುತ್ತಿದ್ದರು.


“ಇದನ್ನು ಮಾಡಿದವರು ಯಾರು?” ಎಂದು ಫಿಲಿಷ್ಟಿಯರು ವಿಚಾರಿಸಿದರು. ಒಬ್ಬನು, “ತಿಮ್ನಾ ನಗರದವನ ಅಳಿಯನಾದ ಸಂಸೋನನು ಇದನ್ನು ಮಾಡಿದನು. ಸಂಸೋನನ ಮಾವನು ಸಂಸೋನನ ಹೆಂಡತಿಯನ್ನು ಮದುವೆಯಲ್ಲಿದ್ದ ಉತ್ತಮ ಪುರುಷನೊಬ್ಬನಿಗೆ ಮದುವೆಮಾಡಿಕೊಟ್ಟಿದ್ದಕ್ಕಾಗಿ ಅವನು ಹೀಗೆಲ್ಲಾ ಮಾಡಿದನು” ಎಂದು ಹೇಳಿದನು. ಆಗ ಫಿಲಿಷ್ಟಿಯರು ಸಂಸೋನನ ಹೆಂಡತಿಯನ್ನು ಮತ್ತು ಅವಳ ತಂದೆಯನ್ನು ಸುಟ್ಟುಹಾಕಿದರು.


ಅವರ ಮೇಲೆ ಆಕ್ರಮಣ ಮಾಡಿ ಅವರಲ್ಲಿ ಅನೇಕರನ್ನು ಕೊಂದುಹಾಕಿದನು. ಆಮೇಲೆ ಅವನು ಹೋಗಿ ಒಂದು ಗುಹೆಯಲ್ಲಿ ಇದ್ದುಬಿಟ್ಟನು. ಆ ಗುಹೆಯು ಏಟಾಮಿನ ಬಂಡೆಯ ಬಳಿಯಲ್ಲಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು