Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 15:9 - ಪರಿಶುದ್ದ ಬೈಬಲ್‌

9 ಆಗ ಫಿಲಿಷ್ಟಿಯರು ಯೆಹೂದಕ್ಕೆ ಹೋಗಿ, ಅವರು ಲೆಹೀ ಎಂಬ ಸ್ಥಳದ ಬಳಿ ಪಾಳೆಯಮಾಡಿಕೊಂಡರು ಮತ್ತು ಯುದ್ಧದ ಸಿದ್ಧತೆ ಮಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಫಿಲಿಷ್ಟಿಯರು ಹೊರಟು ಯೆಹೂದಾ ಪ್ರಾಂತ್ಯದ ಲೆಹೀ ಎಂಬಲ್ಲಿಗೆ ಹೋಗಿ ಪಾಳೆಯಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ಫಿಲಿಷ್ಟಿಯರು ಹೊರಟು ಯೆಹೂದಾ ಪ್ರಾಂತ್ಯದ ಲೆಹೀ ಎಂಬಲ್ಲಿಗೆ ಹೋಗಿ ಪಾಳೆಯ ಮಾಡಿಕೊಂಡು ಯುದ್ಧಕ್ಕೆ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ಫಿಲಿಷ್ಟಿಯರು ಹೊರಟು ಯೆಹೂದಾ ಪ್ರಾಂತದ ಲೆಹೀ ಎಂಬಲ್ಲಿಗೆ ಹೋಗಿ ಪಾಳೆಯಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಫಿಲಿಷ್ಟಿಯರು ಹೊರಟುಹೋಗಿ ಯೆಹೂದದಲ್ಲಿ ಇಳಿದು, ಲೇಹಿಯಲ್ಲಿ ವ್ಯಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 15:9
5 ತಿಳಿವುಗಳ ಹೋಲಿಕೆ  

ಲೆಹೀಯ ನೆಲದಲ್ಲಿ ಒಂದು ಸುರಂಗವಿದೆ. ದೇವರು ಆ ಸುರಂಗವನ್ನು ಸೀಳಿ ಅದರೊಳಗಿಂದ ನೀರು ಬರುವಂತೆ ಮಾಡಿದನು. ಸಂಸೋನನು ನೀರು ಕುಡಿದು ಪುನಃ ಚೈತನ್ಯ ಪಡೆದನು. ಆದ್ದರಿಂದ ಅವನು ಆ ನೀರಿನ ಬುಗ್ಗೆಗೆ ಏನ್ ಹಕ್ಕೋರೇ ಎಂದು ಕರೆದನು. ಅದು ಇಂದಿಗೂ ಲೆಹೀ ನಗರದಲ್ಲಿ ಇದೆ.


ಬಳಿಕ ಸಂಸೋನನು ದವಡೇ ಎಲುಬನ್ನು ಬಿಸಾಡಿದನು. ಆದ್ದರಿಂದ ಆ ಸ್ಥಳಕ್ಕೆ ರಾಮತ್ ಲೆಹೀ ಎಂದು ಹೆಸರಾಯಿತು.


ಸಂಸೋನನನ್ನು ಲೆಹೀ ಎಂಬ ಸ್ಥಳಕ್ಕೆ ತಂದಾಗ ಫಿಲಿಷ್ಟಿಯರು ಅವನನ್ನು ನೋಡುವದಕ್ಕೆ ಬಂದರು. ಅವರು ಸಂತೋಷದಿಂದ ಆರ್ಭಟಿಸುತ್ತಿದ್ದರು. ಆಗ ಯೆಹೋವನ ಆತ್ಮವು ಪ್ರಬಲವಾಗಿ ಸಂಸೋನನ ಮೇಲೆ ಬಂದಿತು. ಸಂಸೋನನು ಹಗ್ಗಗಳನ್ನು ಸುಟ್ಟದಾರಗಳೊ ಎಂಬಂತೆ ಕಿತ್ತುಹಾಕಿದನು; ಕೈಗೆ ಕಟ್ಟಿದ್ದ ಹಗ್ಗಗಳು ಕಳಚಿಬಿದ್ದವು.


ಅವರ ಮೇಲೆ ಆಕ್ರಮಣ ಮಾಡಿ ಅವರಲ್ಲಿ ಅನೇಕರನ್ನು ಕೊಂದುಹಾಕಿದನು. ಆಮೇಲೆ ಅವನು ಹೋಗಿ ಒಂದು ಗುಹೆಯಲ್ಲಿ ಇದ್ದುಬಿಟ್ಟನು. ಆ ಗುಹೆಯು ಏಟಾಮಿನ ಬಂಡೆಯ ಬಳಿಯಲ್ಲಿತ್ತು.


ಯೆಹೂದ್ಯರು ಅವರಿಗೆ, “ಫಿಲಿಷ್ಟಿಯರಾದ ನೀವು ನಮ್ಮ ಸಂಗಡ ಯುದ್ಧ ಮಾಡುವುದಕ್ಕೆ ಇಲ್ಲಿಗೇಕೆ ಬಂದಿದ್ದೀರಿ?” ಎಂದು ಕೇಳಿದರು. ಅದಕ್ಕೆ ಅವರು, “ನಾವು ಸಂಸೋನನನ್ನು ಹಿಡಿಯಲು ಬಂದಿದ್ದೇವೆ. ನಾವು ಅವನನ್ನು ಬಂಧಿಸಬೇಕಾಗಿದೆ. ಅವನು ನಮ್ಮ ಜನರಿಗೆ ಮಾಡಿದ ದ್ರೋಹಕ್ಕಾಗಿ ಅವನನ್ನು ಶಿಕ್ಷಿಸಬೇಕು” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು