Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:11 - ಪರಿಶುದ್ದ ಬೈಬಲ್‌

11 ಅದಕ್ಕೆ ಸಂಸೋನನು, “ಎಂದೂ ಉಪಯೋಗಿಸದ ಹೊಸ ಹಗ್ಗಗಳಿಂದ ನನ್ನನ್ನು ಕಟ್ಟಿದರೆ ನಾನು ಬೇರೆಯವರಂತೆ ನಿರ್ಬಲನಾಗುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವನು ಅವಳಿಗೆ, “ಯಾವುದಕ್ಕೂ ಉಪಯೋಗಿಸದ ಹೊಸ ಹಗ್ಗಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯರಂತಾಗುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವನು ಅವಳಿಗೆ, “ಯಾವುದಕ್ಕೂ ಉಪಯೋಗಿಸದ ಹೊಸ ಹಗ್ಗಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವನು ಅವಳಿಗೆ - ಯಾವದಕ್ಕೂ ಉಪಯೋಗಿಸದ ಹೊಸ ಹಗ್ಗಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯರಂತಾಗುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸಂಸೋನನು ಅವಳಿಗೆ, “ಯಾವ ಕೆಲಸಕ್ಕೆ ಬಳಸದೆ ಇರುವ ಹೊಸ ಹಗ್ಗಗಳಿಂದ ನನ್ನನ್ನು ಕಟ್ಟಿದರೆ, ನಾನು ಬಲಹೀನನಾಗಿ, ಬೇರೆ ಮನುಷ್ಯನಂತಾಗುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:11
7 ತಿಳಿವುಗಳ ಹೋಲಿಕೆ  

ಆದ್ದರಿಂದ ನೀವು ಸುಳ್ಳು ಹೇಳದೆ ಒಬ್ಬರಿಗೊಬ್ಬರು ಯಾವಾಗಲೂ ಸತ್ಯವನ್ನೇ ಹೇಳಿರಿ. ಏಕೆಂದರೆ ನಾವೆಲ್ಲರೂ ಒಂದೇ ದೇಹಕ್ಕೆ ಸೇರಿದ ಅಂಗಗಳಾಗಿದ್ದೇವೆ.


ಮನುಷ್ಯರ ಭಯ ಉರುಲಾಗಬಹುದು. ಆದರೆ ಯೆಹೋವನ ಮೇಲಿರುವ ಭರವಸೆ ಕ್ಷೇಮವಾಗಿಡುವುದು.


ಶಿಷ್ಟರು ಸುಳ್ಳನ್ನು ದ್ವೇಷಿಸುತ್ತಾರೆ. ದುಷ್ಟರು ನಾಚಿಕೆಕರವಾದ ಕೆಲಸ ಮಾಡುವರು.


ಎಚ್ಚರಿಕೆಯಿಂದ ಮಾತಾಡುವವನು ತನ್ನ ಜೀವವನ್ನು ಕಾಪಾಡಿಕೊಳ್ಳುವನು. ಯೋಚಿಸದೆ ಮಾತಾಡುವವನು ನಾಶವಾಗುವನು.


ಯೆಹೂದ್ಯರು, “ಆಗಲಿ, ನಾವು ನಿನ್ನನ್ನು ಬಂಧಿಸಿ ಫಿಲಿಷ್ಟಿಯರಿಗೆ ಕೊಡುತ್ತೇವೆ. ನಾವು ನಿನ್ನನ್ನು ಕೊಲ್ಲುವುದಿಲ್ಲವೆಂದು ಆಣೆಮಾಡುತ್ತೇವೆ” ಎಂದು ಹೇಳಿದರು. ಅವರು ಸಂಸೋನನನ್ನು ಎರಡು ಹೊಸ ಹಗ್ಗಗಳಿಂದ ಬಂಧಿಸಿ ಗುಹೆಯಿಂದ ಹೊರ ಕರೆತಂದರು.


ಆಗ ದೆಲೀಲಳು ಸಂಸೋನನಿಗೆ, “ನೀನು ನನಗೆ ಸುಳ್ಳು ಹೇಳಿದೆ, ನನ್ನನ್ನು ವಂಚಿಸಿದೆ. ನಿನ್ನನ್ನು ಬಂಧಿಸುವದು ಹೇಗೆಂಬುದನ್ನು ದಯವಿಟ್ಟು ಹೇಳು” ಎಂದು ಕೇಳಿದಳು.


ದೆಲೀಲಳು ಕೆಲವು ಹೊಸ ಹಗ್ಗಗಳನ್ನು ತೆಗೆದುಕೊಂಡು ಸಂಸೋನನನ್ನು ಬಿಗಿದುಕಟ್ಟಿದಳು. ಕೆಲವು ಜನರು ಪಕ್ಕದ ಕೋಣೆಯಲ್ಲಿ ಅಡಗಿಕೊಂಡಿದ್ದರು. ದೆಲೀಲಳು, “ಸಂಸೋನನೇ, ಫಿಲಿಷ್ಟಿಯರು ನಿನ್ನನ್ನು ಬಂಧಿಸಲಿದ್ದಾರೆ” ಎಂದು ಕೂಗಿದಳು. ಆದರೆ ಅವನು ದಾರಗಳನ್ನು ಕಿತ್ತುಹಾಕುವಂತೆ ಆ ಹಗ್ಗಗಳನ್ನು ಸುಲಭವಾಗಿ ಕಿತ್ತುಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು