ನ್ಯಾಯಸ್ಥಾಪಕರು 16:12 - ಪರಿಶುದ್ದ ಬೈಬಲ್12 ದೆಲೀಲಳು ಕೆಲವು ಹೊಸ ಹಗ್ಗಗಳನ್ನು ತೆಗೆದುಕೊಂಡು ಸಂಸೋನನನ್ನು ಬಿಗಿದುಕಟ್ಟಿದಳು. ಕೆಲವು ಜನರು ಪಕ್ಕದ ಕೋಣೆಯಲ್ಲಿ ಅಡಗಿಕೊಂಡಿದ್ದರು. ದೆಲೀಲಳು, “ಸಂಸೋನನೇ, ಫಿಲಿಷ್ಟಿಯರು ನಿನ್ನನ್ನು ಬಂಧಿಸಲಿದ್ದಾರೆ” ಎಂದು ಕೂಗಿದಳು. ಆದರೆ ಅವನು ದಾರಗಳನ್ನು ಕಿತ್ತುಹಾಕುವಂತೆ ಆ ಹಗ್ಗಗಳನ್ನು ಸುಲಭವಾಗಿ ಕಿತ್ತುಹಾಕಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿರಿಸಿ, ಹೊಸ ಹಗ್ಗಗಳನ್ನು ತೆಗೆದುಕೊಂಡು ಅವುಗಳಿಂದ ಅವನನ್ನು ಕಟ್ಟಿ, “ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಲು ಅವನೆದ್ದು ತೋಳುಗಳಿಗೆ ಕಟ್ಟಿದ್ದ ಹಗ್ಗಗಳನ್ನು ದಾರವನ್ನೋ ಎಂಬಂತೆ ಹರಿದುಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅವನು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿರಿಸಿ ಹೊಸ ಹಗ್ಗಗಳನ್ನು ತೆಗೆದುಕೊಂಡು ಅವುಗಳಿಂದ ಅವನನ್ನು ಕಟ್ಟಿ, “ಸಂಸೋನರೇ, ಫಿಲಿಷ್ಟಿಯರು ಬಂದಿದ್ದಾರೆ,” ಎಂದು ಕೂಗಲು ಅವನೆದ್ದು ತೋಳುಗಳಿಗೆ ಕಟ್ಟಿದ್ದ ಹಗ್ಗಗಳನ್ನು ದಾರವನ್ನೋ ಎಂಬಂತೆ ಹರಿದುಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿರಿಸಿ ಹೊಸ ಹಗ್ಗಗಳನ್ನು ತೆಗೆದುಕೊಂಡು ಅವುಗಳಿಂದ ಅವನನ್ನು ಕಟ್ಟಿ - ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆಂದು ಕೂಗಲು ಅವನೆದ್ದು ತೋಳುಗಳಿಗೆ ಕಟ್ಟಿದ ಹಗ್ಗಗಳನ್ನು ದಾರವನ್ನೋ ಎಂಬಂತೆ ಹರಿದುಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ದೆಲೀಲಳು ಹೊಸ ಹಗ್ಗಗಳನ್ನು ತೆಗೆದುಕೊಂಡು, ಅವುಗಳಿಂದ ಅವನನ್ನು ಕಟ್ಟಿ, ಅವನಿಗೆ, “ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬಂದಿದ್ದಾರೆ,” ಎಂದಳು. ಹೊಂಚುಗಾರರು ಕೊಠಡಿಯಲ್ಲಿದ್ದರು. ಆದರೆ ಅವನು ತನ್ನ ತೋಳುಗಳಲ್ಲಿ ಇರುವವುಗಳನ್ನು ದಾರದ ಹಾಗೆಯೇ ಹರಿದುಬಿಟ್ಟನು. ಅಧ್ಯಾಯವನ್ನು ನೋಡಿ |