15 ಆಗ ದೆಲೀಲಳು ಸಂಸೋನನಿಗೆ, “‘ನಾನು ನಿನ್ನನ್ನು ಪ್ರೀತಿಸುತ್ತೇನೆ’ ಎಂದು ನೀನು ಹೇಗೆ ಹೇಳಲು ಸಾಧ್ಯ? ನನ್ನನ್ನು ನೀನು ನಂಬುವುದೇ ಇಲ್ಲ. ನೀನು ನನಗೆ ನಿನ್ನ ರಹಸ್ಯವನ್ನು ತಿಳಿಸುವುದಿಲ್ಲ. ಮೂರನೆಯ ಸಲ ನೀನು ನನ್ನನ್ನು ವಂಚಿಸಿದೆ. ನೀನು ನನಗೆ ನಿನ್ನ ಶಕ್ತಿಯ ರಹಸ್ಯವನ್ನು ತಿಳಿಸಲಿಲ್ಲ” ಎಂದಳು.
15 ಆಕೆಯು ತಿರುಗಿ ಅವನಿಗೆ, “ನನ್ನನ್ನು ಪ್ರೀತಿಸುತ್ತೇನೆಂದು ನೀನು ನನಗೆ ಹೇಗೆ ಹೇಳುವೇ? ನಿನ್ನ ಮನಸ್ಸು ನನ್ನ ಮೇಲೆ ಇಲ್ಲವಲ್ಲಾ; ಮೂರು ಸಾರಿ ನನ್ನನ್ನು ವಂಚಿಸಿದಿ. ನಿನಗೆ ಇಂಥ ಮಹಾ ಶಕ್ತಿ ಯಾವುದರಿಂದ ಬಂದಿತೆಂಬುದನ್ನು ನನಗೆ ತಿಳಿಸಲಿಲ್ಲ” ಅಂದಳು.
15 ಆಕೆ ಇನ್ನೊಮ್ಮೆ ಅವನಿಗೆ, “ನಿನ್ನನ್ನು ಪ್ರೀತಿಸುತ್ತೇನೆ” ಎಂದು ನೀವು ನನಗೆ ಹೇಗೆ ಹೇಳಬಹುದು? ನಿಮ್ಮ ಮನಸ್ಸು ನನ್ನ ಮೇಲೆ ಇಲ್ಲವೇ ಇಲ್ಲ; ಮೂರು ಸಾರಿ ವಂಚಿಸಿದಿರಿ. ನಿಮಗೆ ಇಂಥ ಮಹಾಶಕ್ತಿ ಯಾವುದರಿಂದ ಬಂದಿತೆಂಬುದನ್ನು ನನಗೆ ತಿಳಿಸಲಿಲ್ಲ,” ಎಂದಳು.
15 ಆಕೆಯು ತಿರಿಗಿ ಅವನಿಗೆ - ನಿನ್ನನ್ನು ಪ್ರೀತಿಸುತ್ತೇನೆಂದು ನೀನು ನನಗೆ ಹೇಗೆ ಹೇಳಬಹುದು? ನಿನ್ನ ಮನಸ್ಸು ನನ್ನ ಮೇಲೆ ಇಲ್ಲವಲ್ಲಾ; ಮೂರುಸಾರಿ ನನ್ನನ್ನು ವಂಚಿಸಿದಿ. ನಿನಗೆ ಇಂಥ ಮಹಾಶಕ್ತಿ ಯಾವದರಿಂದ ಬಂದಿತೆಂಬದನ್ನು ನನಗೆ ತಿಳಿಸಲಿಲ್ಲ ಅಂದಳು.
15 ಅವಳು ಅವನಿಗೆ, “ನಿನ್ನ ಹೃದಯವು ನನ್ನ ಸಂಗಡ ಇಲ್ಲದೆ ಇರುವಾಗ, ನಿನ್ನನ್ನು ಪ್ರೀತಿಮಾಡುತ್ತೇನೆ ಎಂದು ನೀನು ಹೇಗೆ ಹೇಳುತ್ತೀ? ನೀನು ಈ ಮೂರು ಸಾರಿ ನನಗೆ ವಂಚನೆ ಮಾಡಿದೆ; ನಿನ್ನ ದೊಡ್ಡ ಶಕ್ತಿಯ ರಹಸ್ಯ ಯಾವುದರಲ್ಲಿ ಉಂಟೋ ನನಗೆ ತಿಳಿಸಲಿಲ್ಲ,” ಎಂದಳು.
ಸಂಸೋನನ ಹೆಂಡತಿಯು ಅವನ ಹತ್ತಿರ ಹೋಗಿ ಅಳುವುದಕ್ಕೆ ಪ್ರಾರಂಭಿಸಿದಳು. ಅವಳು, “ನೀನು ನನ್ನನ್ನು ನಿಜವಾಗಿ ಪ್ರೀತಿಸುವುದಿಲ್ಲ, ನನ್ನನ್ನು ದ್ವೇಷಿಸುತ್ತಿ; ನೀನು ನಮ್ಮ ಜನರಿಗೆ ಒಗಟನ್ನು ಹೇಳಿರುವೆ; ಆದರೆ ಅದರ ಅರ್ಥವನ್ನು ನನಗೆ ಹೇಳಿಲ್ಲ” ಎಂದು ಗೋಳಾಡತೊಡಗಿದಳು. ಅದಕ್ಕೆ ಸಂಸೋನನು, “ನಾನು ನನ್ನ ತಂದೆತಾಯಿಯರಿಗೆ ಅದನ್ನು ತಿಳಿಸಲಿಲ್ಲ, ನಿನಗೆ ತಿಳಿಸುವೆನೋ?” ಎಂದನು.
ನಾನು ನನ್ನ ತಂದೆಯ ಆಜ್ಞೆಗಳಿಗೆ ವಿಧೇಯನಾಗಿದ್ದು ಆತನ ಪ್ರೀತಿಯಲ್ಲಿ ನೆಲೆಗೊಂಡಿದ್ದೇನೆ. ಅದೇ ರೀತಿಯಲ್ಲಿ, ನೀವು ನನ್ನ ಆಜ್ಞೆಗಳಿಗೆ ವಿಧೇಯರಾದರೆ, ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.
ಆದ್ದರಿಂದ ಯಾಕೋಬನು ಅವನೊಂದಿಗೆ ಇದ್ದುಕೊಂಡು ಏಳು ವರ್ಷಗಳವರೆಗೆ ಲಾಬಾನನ ಸೇವೆ ಮಾಡಿದನು. ಆದರೆ ಅವನು ರಾಹೇಲಳನ್ನು ತುಂಬಾ ಪ್ರೀತಿಸುತ್ತಿದ್ದುದರಿಂದ ಆ ಸಮಯವು ಅವನಿಗೆ ತುಂಬಾ ಕಡಿಮೆಯಂತೆ ಕಾಣಿಸಿತು.
ಸಂಸೋನನು ಮಲಗಿಕೊಂಡಿರುವಾಗ ದೆಲೀಲಳು ಅವನ ತಲೆಕೂದಲಿನ ಏಳು ಜಡೆಗಳನ್ನು ಮಗ್ಗದಲ್ಲಿ ನೇಯ್ದಳು. ಆಮೇಲೆ ಆ ಮಗ್ಗವನ್ನು ಒಂದು ಗೂಟದಿಂದ ಭದ್ರಪಡಿಸಿದಳು. ಬಳಿಕ, “ಸಂಸೋನನೇ, ಫಿಲಿಷ್ಟಿಯರು ನಿನ್ನನ್ನು ಬಂಧಿಸಲಿದ್ದಾರೆ” ಎಂದು ಮತ್ತೆ ಕೂಗಿಕೊಂಡಳು. ಸಂಸೋನನು ಗೂಟವನ್ನೂ ಮಗ್ಗವನ್ನೂ ಲಾಳಿಯನ್ನೂ ಕಿತ್ತುಹಾಕಿದನು.