ನ್ಯಾಯಸ್ಥಾಪಕರು 16:16 - ಪರಿಶುದ್ದ ಬೈಬಲ್16 ಅವಳು ಸಂಸೋನನನ್ನು ಪ್ರತಿದಿನ ಪೀಡಿಸತೊಡಗಿದಳು. ಅವನ ಶಕ್ತಿಯ ರಹಸ್ಯದ ಬಗ್ಗೆ ಅವಳು ಪದೇಪದೇ ಕೇಳುತ್ತಿದ್ದದರಿಂದ ಅವನಿಗೆ ಸಾಯುವಷ್ಟು ಬೇಸರವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇದಲ್ಲದೆ ಅವಳು ಅವನನ್ನು ದಿನದಿನವೂ ಮಾತಿನಿಂದ ಪೀಡಿಸಿದ್ದರಿಂದ ಅವನಿಗೆ ಸಾಯುವುದು ಒಳ್ಳೆಯದು ಎನ್ನುವಷ್ಟು ಬೇಸರವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇದಲ್ಲದೆ, ಅವಳು ಅವನನ್ನು ದಿನದಿನವೂ ಮಾತಿನಿಂದ ಪೀಡಿಸುತ್ತಿದ್ದುದರಿಂದ ಅವನಿಗೆ ಸಾಯುವುದೇ ಒಳ್ಳೆಯದೆನ್ನುವಷ್ಟು ಬೇಸರ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇದಲ್ಲದೆ ಅವಳು ಅವನನ್ನು ದಿನ ದಿನವೂ ಮಾತಿನಿಂದ ಪೀಡಿಸಿದ್ದರಿಂದ ಅವನಿಗೆ ಸಾಯುವದು ಒಳ್ಳೇದನ್ನುವಷ್ಟು ಬೇಸರವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅವಳು ಅವನನ್ನು ದಿನದಿನವೂ ತನ್ನ ಮಾತುಗಳಿಂದ ಪೀಡಿಸಿ, ತೊಂದರೆ ಪಡಿಸಿದ್ದರಿಂದ, ಅವನ ಪ್ರಾಣವು ಸಾಯುವಷ್ಟು ವ್ಯಸನಪಟ್ಟಿತು. ಅಧ್ಯಾಯವನ್ನು ನೋಡಿ |
ಸಂಸೋನನ ಹೆಂಡತಿಯು ಅವನ ಹತ್ತಿರ ಹೋಗಿ ಅಳುವುದಕ್ಕೆ ಪ್ರಾರಂಭಿಸಿದಳು. ಅವಳು, “ನೀನು ನನ್ನನ್ನು ನಿಜವಾಗಿ ಪ್ರೀತಿಸುವುದಿಲ್ಲ, ನನ್ನನ್ನು ದ್ವೇಷಿಸುತ್ತಿ; ನೀನು ನಮ್ಮ ಜನರಿಗೆ ಒಗಟನ್ನು ಹೇಳಿರುವೆ; ಆದರೆ ಅದರ ಅರ್ಥವನ್ನು ನನಗೆ ಹೇಳಿಲ್ಲ” ಎಂದು ಗೋಳಾಡತೊಡಗಿದಳು. ಅದಕ್ಕೆ ಸಂಸೋನನು, “ನಾನು ನನ್ನ ತಂದೆತಾಯಿಯರಿಗೆ ಅದನ್ನು ತಿಳಿಸಲಿಲ್ಲ, ನಿನಗೆ ತಿಳಿಸುವೆನೋ?” ಎಂದನು.