Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:17 - ಪರಿಶುದ್ದ ಬೈಬಲ್‌

17 ಕೊನೆಗೆ ಸಂಸೋನನು ದೆಲೀಲಳಿಗೆ ಎಲ್ಲವನ್ನು ಹೇಳಿದನು. “ನಾನೆಂದೂ ನನ್ನ ತಲೆಕೂದಲನ್ನು ಕತ್ತರಿಸಿಕೊಂಡಿಲ್ಲ. ನಾನು ಹುಟ್ಟುವ ಮೊದಲೇ ನನ್ನನ್ನು ದೇವರಿಗೆ ಪ್ರತಿಷ್ಠಿಸಲಾಗಿತ್ತ್ತು. ಯಾರಾದರೂ ನನ್ನ ತಲೆಬೋಳಿಸಿದರೆ ನಾನು ನನ್ನ ಶಕ್ತಿಯನ್ನು ಕಳೆದುಕೊಳ್ಳುತ್ತೇನೆ. ನಾನು ಬೇರೆ ಮನುಷ್ಯರಷ್ಟೇ ದುರ್ಬಲನಾಗುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಅವನು, “ಕ್ಷೌರಕತ್ತಿಯು ನನ್ನ ತಲೆಯ ಮೇಲೆ ಮುಟ್ಟಿಸಿಲ್ಲ; ನಾನು ಮಾತೃಗರ್ಭದಿಂದಲೇ ದೇವರಿಗೆ ಪ್ರತಿಷ್ಠಿತನಾದವನು (ನಾಜೀರನು). ನನ್ನ ತಲೆಯನ್ನು ಕ್ಷೌರಮಾಡುವುದಾದರೆ ನನ್ನ ಶಕ್ತಿಯು ಹೋಗುವುದು; ಮತ್ತು ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು” ಎಂದು ತನ್ನ ಗುಟ್ಟನ್ನೆಲ್ಲಾ ಆಕೆಯ ಮುಂದೆ ಬಿಚ್ಚಿಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಕೊನೆಗೆ ಅವನು, “ಕ್ಷೌರಕತ್ತಿ ನನ್ನ ತಲೆಯ ಮೇಲೆ ಬಂದದ್ದಿಲ್ಲ; ನಾನು ಮಾತೃಗರ್ಭ ಬಿಟ್ಟಂದಿನಿಂದಲೇ ದೇವರಿಗೆ ಪ್ರತಿಷ್ಠಿತನಾದವನು. ನನ್ನ ತಲೆಯನ್ನು ಕ್ಷೌರಮಾಡಿದರೆ ನನ್ನ ಶಕ್ತಿ ಹೋಗುವುದು; ಮತ್ತು ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು,” ಎಂದು ತನ್ನ ಗುಟ್ಟನ್ನೆಲ್ಲಾ ಆಕೆಯ ಮುಂದೆ ಬಿಚ್ಚಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮತ್ತು ಅವನು - ಕ್ಷೌರಕತ್ತಿಯು ನನ್ನ ತಲೆಯ ಮೇಲೆ ಬಂದದ್ದಿಲ್ಲ; ನಾನು ಮಾತೃಗರ್ಭ ಬಿಟ್ಟಂದಿನಿಂದಲೇ ದೇವರಿಗೆ ಪ್ರತಿಷ್ಠಿತನಾದವನು. ನನ್ನ ತಲೆಯನ್ನು ಕ್ಷೌರಮಾಡುವದಾದರೆ ನನ್ನ ಶಕ್ತಿಯು ಹೋಗುವದು; ಮತ್ತು ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು ಎಂದು ತನ್ನ ಗುಟ್ಟನ್ನೆಲ್ಲಾ ಆಕೆಯ ಮುಂದೆ ಬಿಚ್ಚಿಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವನು ತನ್ನ ಹೃದಯವನ್ನೆಲ್ಲಾ ಅವಳಿಗೆ ತಿಳಿಸಿ, ಅವಳಿಗೆ, “ಕ್ಷೌರದ ಕತ್ತಿ ನನ್ನ ತಲೆಯ ಮೇಲೆ ಬಂದದ್ದಿಲ್ಲ; ಏಕೆಂದರೆ ನಾನು ನನ್ನ ತಾಯಿಯ ಗರ್ಭದಲ್ಲಿಂದ ದೇವರಿಗೆ ಪ್ರತಿಷ್ಠಿತನಾದ ನಾಜೀರನಾಗಿದ್ದೇನೆ. ನನ್ನ ತಲೆಯನ್ನು ಬೋಳಿಸಿದರೆ, ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗುವುದು; ನಾನು ಬಲಹೀನನಾಗಿ ಎಲ್ಲಾ ಮನುಷ್ಯರ ಹಾಗೆ ಇರುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:17
10 ತಿಳಿವುಗಳ ಹೋಲಿಕೆ  

ನಿನ್ನ ನೆರೆಯವನ ಮೇಲೆ ನಂಬಿಕೆ ಇಡಬೇಡ! ನಿನ್ನ ಸ್ನೇಹಿತನ ಮೇಲೆ ಭರವಸವಿಡಬೇಡ! ನಿನ್ನ ಹೆಂಡತಿಯೊಂದಿಗೂ ನಿನ್ನ ಮನಸ್ಸಿನಲ್ಲಿರುವ ವಿಷಯವನ್ನು ತಿಳಿಸಬೇಡ.


ಜಾಣನು ತನ್ನ ಜ್ಞಾನದ ಬಗ್ಗೆ ಜಂಬಕೊಚ್ಚಿಕೊಳ್ಳುವುದಿಲ್ಲ. ಆದರೆ ಮೂಢನು ದುಡುಕಿ ಮಾತಾಡಿ ತಾನು ಮೂಢನೆಂದು ತೋರಿಸಿಕೊಳ್ಳುತ್ತಾನೆ.


ಏಕೆಂದರೆ ನೀನು ಗರ್ಭವತಿಯಾಗಿರುವೆ ಮತ್ತು ನಿನಗೊಬ್ಬ ಮಗನು ಹುಟ್ಟಲಿದ್ದಾನೆ. ಅವನು ಹುಟ್ಟಿದಂದಿನಿಂದಲೇ ದೇವರಿಗೆ ಪ್ರತಿಷ್ಠಿತನಾಗಿದ್ದಾನೆ. ಆದ್ದರಿಂದ ಅವನ ಕೂದಲನ್ನು ಕತ್ತರಿಸಕೂಡದು. ಅವನು ಇಸ್ರೇಲರನ್ನು ಫಿಲಿಷ್ಟಿಯರ ಹಿಡಿತದಿಂದ ಬಿಡಿಸುವನು” ಎಂದು ಹೇಳಿದನು.


“ಅವನ ವ್ರತದ ಕಾಲದಲ್ಲಿ ಕ್ಷೌರದ ಕತ್ತಿಯು ಅವನ ತಲೆಯನ್ನು ಸೋಂಕಬಾರದು. ಯೆಹೋವನಿಗೋಸ್ಕರ ಪ್ರತಿಷ್ಠಿತವಾದ ತನ್ನ ಕಾಲವನ್ನು ಪೂರ್ಣಗೊಳಿಸುವ ತನಕ ಅವನು ಪರಿಶುದ್ಧನಾಗಿರಬೇಕು. ತನ್ನ ವ್ರತದ ದಿನಗಳು ಮುಗಿಯುವ ತನಕ ಅವನು ಕೂದಲನ್ನು ಬೆಳೆಸಿಕೊಳ್ಳಬೇಕು.


ಪೌಲನು ಅನೇಕ ದಿನಗಳವರೆಗೆ ಸಹೋದರರೊಂದಿಗೆ ಇದ್ದನು. ಬಳಿಕ ಅವನು ಅಲ್ಲಿಂದ ಸಿರಿಯಕ್ಕೆ ನೌಕಾಯಾನ ಮಾಡಿದನು. ಪ್ರಿಸ್ಕಿಲ್ಲ ಮತ್ತು ಅಕ್ವಿಲ ಸಹ ಅವನೊಂದಿಗಿದ್ದರು. ಕೆಂಖ್ರೆ ಎಂಬ ಸ್ಥಳದಲ್ಲಿ ಪೌಲನು ತನ್ನ ತಲೆಕೂದಲನ್ನು ಕತ್ತರಿಸಿಕೊಂಡನು. ಅವನು ದೇವರಿಗೆ ಹರಕೆಯನ್ನು ಮಾಡಿಕೊಂಡಿದ್ದನೆಂಬುದನ್ನು ಅದು ಸೂಚಿಸುತ್ತಿತ್ತು.


ಅಧಿಪತಿಯು ಸುಳ್ಳುಮಾತುಗಳಿಗೆ ಕಿವಿಗೊಟ್ಟರೆ, ಅವನ ಅಧೀನದಲ್ಲಿರುವ ಅಧಿಕಾರಿಗಳೆಲ್ಲರು ಕೆಡುಕರಾಗುವರು.


“ಈ ಸಂಗತಿಗಳನ್ನು ಇಸ್ರೇಲರಿಗೆ ಹೇಳು: ಯಾವ ಪುರುಷನಾಗಲಿ ಸ್ತ್ರೀಯಾಗಲಿ ನಾಜೀರವ್ರತವನ್ನು ಮಾಡುವುದರ ಮೂಲಕ ತನ್ನನ್ನು ಪ್ರತಿಷ್ಠಿಸಿಕೊಂಡರೆ, ಯೆಹೋವನಿಗೋಸ್ಕರ ಹರಕೆ ಮಾಡಿಕೊಂಡರೆ,


ಅವಳು ಸಂಸೋನನನ್ನು ಪ್ರತಿದಿನ ಪೀಡಿಸತೊಡಗಿದಳು. ಅವನ ಶಕ್ತಿಯ ರಹಸ್ಯದ ಬಗ್ಗೆ ಅವಳು ಪದೇಪದೇ ಕೇಳುತ್ತಿದ್ದದರಿಂದ ಅವನಿಗೆ ಸಾಯುವಷ್ಟು ಬೇಸರವಾಯಿತು.


ಸಂಸೋನನು ತನ್ನ ರಹಸ್ಯವನ್ನು ತಿಳಿಸಿದನೆಂದು ದೆಲೀಲಳಿಗೆ ಗೊತ್ತಾಯಿತು. ಅವಳು ಫಿಲಿಷ್ಟಿಯ ಅಧಿಪತಿಗಳಿಗೆ ಸಂದೇಶವನ್ನು ಕಳುಹಿಸಿದಳು. ಅವಳು, “ಸಂಸೋನನು ನನಗೆ ಎಲ್ಲವನ್ನು ಹೇಳಿದ್ದಾನೆ, ಮತ್ತೊಮ್ಮೆ ಬನ್ನಿ” ಎಂದು ಹೇಳಿದಳು. ಫಿಲಿಷ್ಟಿಯ ಅಧಿಪತಿಗಳು ದೆಲೀಲಳ ಬಳಿಗೆ ಬಂದರು. ಅವರು ಅವಳಿಗೆ ಕೊಡುವುದಾಗಿ ಹೇಳಿದ್ದ ಹಣವನ್ನು ತಂದಿದ್ದರು.


ಎಚ್ಚರಿಕೆಯಿಂದ ಮಾತಾಡುವವನು ತನ್ನ ಜೀವವನ್ನು ಕಾಪಾಡಿಕೊಳ್ಳುವನು. ಯೋಚಿಸದೆ ಮಾತಾಡುವವನು ನಾಶವಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು