ನ್ಯಾಯಸ್ಥಾಪಕರು 16:18 - ಪರಿಶುದ್ದ ಬೈಬಲ್18 ಸಂಸೋನನು ತನ್ನ ರಹಸ್ಯವನ್ನು ತಿಳಿಸಿದನೆಂದು ದೆಲೀಲಳಿಗೆ ಗೊತ್ತಾಯಿತು. ಅವಳು ಫಿಲಿಷ್ಟಿಯ ಅಧಿಪತಿಗಳಿಗೆ ಸಂದೇಶವನ್ನು ಕಳುಹಿಸಿದಳು. ಅವಳು, “ಸಂಸೋನನು ನನಗೆ ಎಲ್ಲವನ್ನು ಹೇಳಿದ್ದಾನೆ, ಮತ್ತೊಮ್ಮೆ ಬನ್ನಿ” ಎಂದು ಹೇಳಿದಳು. ಫಿಲಿಷ್ಟಿಯ ಅಧಿಪತಿಗಳು ದೆಲೀಲಳ ಬಳಿಗೆ ಬಂದರು. ಅವರು ಅವಳಿಗೆ ಕೊಡುವುದಾಗಿ ಹೇಳಿದ್ದ ಹಣವನ್ನು ತಂದಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವನು ಇದ್ದದ್ದನ್ನು ಇದ್ದ ಹಾಗೆಯೇ ಹೇಳಿದನೆಂದು ದೆಲೀಲಳು ತಿಳಿದು ಫಿಲಿಷ್ಟಿಯ ಪ್ರಭುಗಳ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ಇದೊಂದು ಸಾರಿ ಬನ್ನಿರಿ: ಅವನು ನನಗೆ ತನ್ನ ಹೃದಯವನ್ನೆಲ್ಲಾ ತಿಳಿಸಿದ್ದಾನೆ” ಎಂದು ಹೇಳಿ, ಕರೆಕಳುಹಿಸಿದಳು. ಅವರು ಹಣವನ್ನು ತೆಗೆದುಕೊಂಡು ಆಕೆಯ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅವನು ಇದ್ದದ್ದನ್ನು ಇದ್ದ ಹಾಗೆಯೇ ಹೇಳಿದನೆಂದು ದೆಲೀಲಳು ತಿಳಿದು ಫಿಲಿಷ್ಟಿಯ ಮುಖಂಡರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ಇದೊಂದು ಸಾರಿ ಬನ್ನಿ; ಅವರು ನನಗೆ ತಮ್ಮ ಹೃದಯವನ್ನೆಲ್ಲಾ ಬಿಚ್ಚಿದ್ದಾರೆ,” ಎಂದು ಹೇಳಿ ಕರೆಸಿದಳು. ಅವರು ಹಣವನ್ನು ತೆಗೆದುಕೊಂಡು ಆಕೆಯ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವನು ಇದ್ದದ್ದನ್ನು ಇದ್ದ ಹಾಗೆಯೇ ಹೇಳಿದನೆಂದು ದೆಲೀಲಳು ತಿಳಿದು ಫಿಲಿಷ್ಟಿಯ ಪ್ರಭುಗಳ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ - ಇದೊಂದು ಸಾರಿ ಬನ್ನಿರಿ; ಅವನು ನನಗೆ ತನ್ನ ಹೃದಯವನ್ನೆಲ್ಲಾ ತಿಳಿಸಿದ್ದಾನೆ ಎಂದು ಹೇಳಿಸಿ ಕರಿಸಿದಳು. ಅವರು ಹಣವನ್ನು ತೆಗೆದುಕೊಂಡು ಆಕೆಯ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ದೆಲೀಲಳು, ಅವನು ತನಗೆ ತನ್ನ ಹೃದಯಲ್ಲಿರುವುದನ್ನೆಲ್ಲಾ ತಿಳಿಸಿದ್ದಾನೆಂದು ಕಂಡು, ಅವಳು ಫಿಲಿಷ್ಟಿಯರ ಅಧಿಪತಿಗಳಿಗೆ, “ನೀವು ಈ ಸಾರಿ ಬನ್ನಿರಿ. ಏಕೆಂದರೆ ಅವನು ತನ್ನ ಹೃದಯದಲ್ಲಿರುವುದನ್ನೆಲ್ಲಾ ನನಗೆ ತಿಳಿಸಿದನು,” ಎಂದು ಕರೆಕಳುಹಿಸಿದಳು. ಆಗ ಫಿಲಿಷ್ಟಿಯರ ಅಧಿಪತಿಗಳು ಅವಳ ಬಳಿಗೆ ಹಣವನ್ನು ತಮ್ಮ ಕೈಯಲ್ಲಿ ತೆಗೆದುಕೊಂಡು ಬಂದರು. ಅಧ್ಯಾಯವನ್ನು ನೋಡಿ |
ಫಿಲಿಷ್ಟಿಯ ಪ್ರಭುಗಳು ದೆಲೀಲಳ ಬಳಿಗೆ ಹೋಗಿ, “ಸಂಸೋನನು ಅಷ್ಟೊಂದು ಶಕ್ತಿಶಾಲಿಯಾಗಿರುವುದಕ್ಕೆ ಕಾರಣಗಳನ್ನು ನಾವು ತಿಳಿದುಕೊಳ್ಳಬೇಕಾಗಿದೆ. ಅವನನ್ನು ಮರುಳುಗೊಳಿಸಿ ಅವನ ರಹಸ್ಯವನ್ನು ತಿಳಿದುಕೊಳ್ಳಲು ಪ್ರಯತ್ನ ಮಾಡು. ಆಗ ನಾವು ಅವನನ್ನು ಸೋಲಿಸಿ, ಬಂಧಿಸಿ ನಮ್ಮ ಅಧೀನದಲ್ಲಿಟ್ಟುಕೊಳ್ಳಲು ಸಾಧ್ಯವಾಗುತ್ತದೆ. ನೀನು ಇದನ್ನು ಮಾಡಿದರೆ ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಇಪ್ಪತ್ತೆಂಟು ಬೆಳ್ಳಿನಾಣ್ಯಗಳನ್ನು ಕೊಡುತ್ತೇವೆ” ಎಂದು ಹೇಳಿದರು.