Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:25 - ಪರಿಶುದ್ದ ಬೈಬಲ್‌

25 ಆ ಉತ್ಸವದಲ್ಲಿ ಜನರು ಸಂತೋಷವಾಗಿದ್ದರು. ಅವರು, “ಸಂಸೋನನನ್ನು ಕರೆದು ತನ್ನಿ. ನಾವು ಅವನ ತಮಾಷೆಯನ್ನು ನೋಡಬೇಕು” ಎಂದರು. ಅವರು ಸಂಸೋನನನ್ನು ಸೆರೆಮನೆಯಿಂದ ತಂದು ಅವನನ್ನು ಅಪಹಾಸ್ಯ ಮಾಡಿದರು. ಸಂಸೋನನನ್ನು ಅವರ ದೇವರಾದ ದಾಗೋನನ ಮಂದಿರದಲ್ಲಿ ಎರಡು ಕಂಬಗಳ ಮಧ್ಯದಲ್ಲಿ ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವರು ಸಂಭ್ರಮದಲ್ಲಿದ್ದಾಗ, “ನಮ್ಮ ವಿನೋದಕ್ಕೋಸ್ಕರ ಸಂಸೋನನನ್ನು ಕರೆದುಕೊಂಡು ಬನ್ನಿರಿ” ಅಂದರು. ಅದರಂತೆಯೇ ಸಂಸೋನನನ್ನು ಸೆರೆಮನೆಯಿಂದ ಕರೆದುಕೊಂಡು ಬಂದರು. ಅವನು ಎರಡು ಸ್ತಂಭಗಳ ನಡುವೆ ನಿಂತು ವಿನೋದ ಮಾಡಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅವರು ಆನಂದಲಹರಿಯಲ್ಲಿದ್ದಾಗ, “ನಮ್ಮ ಮನೋರಂಜನೆಗಾಗಿ ಸಂಸೋನನನ್ನು ಕರೆದುಕೊಂಡು ಬನ್ನಿ,” ಎಂದರು. ಅದರಂತೆಯೇ ಸಂಸೋನನನ್ನು ಸೆರೆಮನೆಯಿಂದ ಕರೆದುಕೊಂಡು ಬಂದರು. ಅವನು ಎರಡು ಸ್ತಂಭಗಳ ನಡುವೆ ನಿಂತು ಅವರೆಲ್ಲರ ಮನರಂಜಿಸಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವರು ಆನಂದಲಹರಿಯಲ್ಲಿದ್ದಾಗ - ನಮ್ಮ ವಿನೋದಕ್ಕೋಸ್ಕರ ಸಂಸೋನನನ್ನು ಕರಕೊಂಡು ಬನ್ನಿರಿ ಅಂದರು; ಅದರಂತೆಯೇ ಸಂಸೋನನನ್ನು ಸೆರೆಮನೆಯಿಂದ ಕರಕೊಂಡು ಬಂದರು. ಅವನು ಎರಡು ಸ್ತಂಭಗಳ ನಡುವೆ ನಿಂತು ವಿನೋದಮಾಡಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅಲ್ಲಿ ಅವರು ಸಂಭ್ರಮವಾಗಿರುವಾಗ, “ನಮ್ಮ ಮುಂದೆ ಮನೋರಂಜನೆಗಾಗಿ ಸಂಸೋನನನ್ನು ಕರೆದುಕೊಂಡು ಬನ್ನಿರಿ,” ಎಂದರು. ಅವರು ಸಂಸೋನನನ್ನು ಸೆರೆಮನೆಯಿಂದ ಕರೆತಂದಾಗ, ಅವನು ಅವರ ಮುಂದೆ ವಿನೋದ ಮಾಡಬೇಕಾಯಿತು. ಅವರು ಅವನನ್ನು ಸ್ತಂಭಗಳ ನಡುವೆ ನಿಲ್ಲಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:25
23 ತಿಳಿವುಗಳ ಹೋಲಿಕೆ  

ಆಗ ಅಬ್ಷಾಲೋಮನು ತನ್ನ ಸೇವಕರಿಗೆ ಈ ರೀತಿ ಆಜ್ಞೆ ಮಾಡಿದನು: “ಅಮ್ನೋನನನ್ನು ಗಮನಿಸುತ್ತಿರಿ. ಅವನು ಮತ್ತನಾಗಿ ಆನಂದಿಸುತ್ತಿರುವಾಗ ನಾನು ಆಜ್ಞೆಯನ್ನು ಕೊಡುತ್ತೇನೆ. ಆಗ ನೀವು ಅವನ ಮೇಲೆ ಆಕ್ರಮಣಮಾಡಿ ಕೊಲ್ಲಬೇಕು. ನಿಮಗೆ ಶಿಕ್ಷೆಯಾಗುತ್ತದೆ ಎಂಬ ಭಯವಿಲ್ಲದಿರಲಿ, ಯಾಕೆಂದರೆ ನೀವು ನನ್ನ ಆಜ್ಞೆಯನ್ನು ಪಾಲಿಸಿದಿರಷ್ಟೇ, ಆದ್ದರಿಂದ ಶಕ್ತರಾಗಿಯೂ ಧೈರ್ಯವಂತರಾಗಿಯೂ ಇರಿ” ಎಂದನು.


ಆದ್ದರಿಂದ ಆ ಲೇವಿಯು ಮತ್ತು ಅವನ ಮಾವನು ಒಟ್ಟಿಗೆ ಅನ್ನಪಾನಗಳನ್ನು ತೆಗೆದುಕೊಂಡರು. ಬಳಿಕ ಆ ಸ್ತ್ರೀಯ ತಂದೆಯು, “ದಯವಿಟ್ಟು ಈ ರಾತ್ರಿ ಇದ್ದುಬಿಡು. ವಿಶ್ರಮಿಸಿಕೋ, ಸಂತೋಷಪಡು” ಎಂದನು.


ಶೆಕೆಮಿನ ಜನರು ದ್ರಾಕ್ಷಿಯನ್ನು ಕೊಯಿದುಕೊಂಡು ಬರಲು ತಮ್ಮ ಹೊಲಗಳಿಗೆ ಹೋದರು. ಆ ದ್ರಾಕ್ಷಿಯನ್ನು ಹಿಂಡಿ ದ್ರಾಕ್ಷಾರಸ ಮಾಡಿದರು. ಆಮೇಲೆ ತಮ್ಮ ದೇವರ ಮಂದಿರದಲ್ಲಿ ಒಂದು ಉತ್ಸವನ್ನು ಮಾಡಿದರು. ಆ ಜನರು ತಿಂದು ಕುಡಿದು, ಅಬೀಮೆಲೆಕನ ಬಗ್ಗೆ ಕೆಟ್ಟ ಮಾತುಗಳನ್ನು ಆಡಿದರು.


ಕೆಲವರು ಇತರರಿಂದ ಅಪಹಾಸ್ಯಕ್ಕೆ ಗುರಿಯಾದರು, ಪೆಟ್ಟುಗಳನ್ನು ಅನುಭವಿಸಿದರು, ಸೆರೆವಾಸದಲ್ಲಿದ್ದರು.


ಮುಳ್ಳಿನ ಬಳ್ಳಿಯಿಂದ ಒಂದು ಕಿರೀಟವನ್ನು ಹೆಣೆದು ಆತನ ತಲೆಯ ಮೇಲಿಟ್ಟರು. ಆತನ ಬಲಗೈಗೆ ಒಂದು ಕೋಲನ್ನು ಕೊಟ್ಟರು. ಬಳಿಕ ಸೈನಿಕರು ಯೇಸುವಿನ ಮುಂದೆ ಬಾಗಿ, “ಯೆಹೂದ್ಯರ ರಾಜನೇ, ನಮಸ್ಕಾರ” ಎಂದು ಅಪಹಾಸ್ಯ ಮಾಡಿದರು.


ಇಗೋ, ಈಗ ಜನರು ಸಂತೋಷಪಡುತ್ತಿದ್ದಾರೆ. ಅವರು ಹರ್ಷಿಸುತ್ತಾ: “ದನಕುರಿಗಳನ್ನು ಕೊಯ್ಯಿರಿ, ನಾವು ಹಬ್ಬ ಆಚರಿಸೋಣ, ಊಟಮಾಡಿ ದ್ರಾಕ್ಷಾರಸ ಕುಡಿಯೋಣ, ತಿಂದು, ಕುಡಿದು ಸಂತೋಷವಾಗಿರೋಣ. ಯಾಕೆಂದರೆ ನಾಳೆ ನಾವು ಸಾಯುವೆವು” ಎಂದು ಹೇಳುವರು.


ಅವರನ್ನು ದಂಡಿಸು. ಆಗ ಅವರು ಓಡಿಹೋಗುವರು. ಅಲ್ಲದೆ ಅವರಿಗಾದ ನೋವುಗಳು, ಗಾಯಗಳು ಅವರ ಆಡಿಕೆಗೆ ಕಾರಣವಾಗುವವು.


ಅವರು ನನ್ನ ಬಗ್ಗೆ ಬಹಿರಂಗ ಸ್ಥಳಗಳಲ್ಲಿ ಮಾತಾಡುವರು. ಕುಡುಕರು ನನ್ನ ವಿಷಯದಲ್ಲಿ ಹಾಡನ್ನು ರಚಿಸುವರು.


ರಾಜನ ಆಜ್ಞೆಯ ಪ್ರಕಾರ ಸಂದೇಶವಾಹಕರು ದೇಶದೇಶಗಳಿಗೆ ಚದರಿದರು. ರಾಜಧಾನಿಯಾದ ಶೂಷನ್ ನಗರದಲ್ಲೂ ಆ ಸಂದೇಶವನ್ನು ಪ್ರಕಟಿಸಲಾಯಿತು. ಅರಸನೂ ಹಾಮಾನನೂ ಮದ್ಯಪಾನ ಮಾಡಲು ಕುಳಿತರು. ಆದರೆ ರಾಜಧಾನಿಯಲ್ಲಿನ ಜನರು ಗಲಿಬಿಲಿಗೊಂಡಿದ್ದರು.


ರಾಜನಾದ ಬೆನ್ಹದದನು ಇತರ ಅರಸರೊಡನೆ ಅವನ ಗುಡಾರದಲ್ಲಿ ಕುಡಿಯುತ್ತಾ ಮತ್ತೇರಿಸಿಕೊಳ್ಳುತ್ತಿದ್ದನು. ಆ ಸಮಯದಲ್ಲಿ ರಾಜನಾದ ಅಹಾಬನಿಂದ ಬಂದ ಸಂದೇಶವನ್ನು ಸಂದೇಶಕರು ಅವನಿಗೆ ಹೇಳಿದರು. ರಾಜನಾದ ಬೆನ್ಹದದನು ಆ ನಗರಕ್ಕೆ ಮುತ್ತಿಗೆ ಹಾಕಲು ಸಿದ್ಧರಾಗುವಂತೆ ತನ್ನ ಜನರಿಗೆ ಆಜ್ಞಾಪಿಸಿದನು. ಆದ್ದರಿಂದ ಜನರು ಯುದ್ಧಮಾಡಲು ತಮ್ಮತಮ್ಮ ಸ್ಥಳಗಳಿಗೆ ಹೋದರು.


ಆಮೇಲೆ ಆ ಲೇವಿಯೂ ಅವನ ಉಪಪತ್ನಿಯೂ ಅವನ ಆಳೂ ಹೊರಡಲು ಎದ್ದರು. ಆದರೆ ಆ ಸ್ತ್ರೀಯ ತಂದೆಯು, “ಈಗ ಕತ್ತಲಾಗುತ್ತಾ ಬಂತು, ಹೊತ್ತು ಮುಳುಗುವುದರಲ್ಲಿದೆ. ಈ ರಾತ್ರಿ ಇಲ್ಲಿಯೇ ಸಂತೋಷದಿಂದ ಕಾಲ ಕಳೆಯಿರಿ. ನಾಳೆ ಬೆಳಿಗ್ಗೆ ನೀವು ಬೇಗನೆ ಎದ್ದು ಪ್ರಯಾಣಮಾಡಬಹುದು” ಎಂದನು.


ಇದರಿಂದ ಲೇವಿಯನಿಗೆ ಸಂತೋಷವಾಯಿತು. ಅವನು ಏಫೋದನ್ನೂ ಗೃಹದೇವತೆಗಳನ್ನೂ ಕೆತ್ತನೆಯ ಕೆಲಸದ ವಿಗ್ರಹವನ್ನೂ ತೆಗೆದುಕೊಂಡು ದಾನ್ಯರ ಜೊತೆಗೆ ಹೋದನು.


ಫಿಲಿಷ್ಟಿಯರು ಸಂಸೋನನನ್ನು ನೋಡಿದ ಕೂಡಲೇ ತಮ್ಮ ದೇವರನ್ನು ಸ್ತುತಿಸಿದರು. ಅವರು, “ಇವನು ನಮ್ಮ ಜನರನ್ನು ಹಾಳುಮಾಡಿದನು. ಇವನು ನಮ್ಮ ಅನೇಕ ಜನರನ್ನು ಕೊಂದನು. ಆದರೆ ನಮ್ಮ ದೇವರು ನಮ್ಮ ಶತ್ರುವನ್ನು ಸೆರೆಹಿಡಿಯಲು ಸಹಾಯ ಮಾಡಿದನು” ಎಂದು ಹಾಡಿದರು.


ಒಬ್ಬ ಸೇವಕನು ಸಂಸೋನನ ಕೈಯನ್ನು ಹಿಡಿದುಕೊಂಡಿದ್ದನು. “ಈ ಮಂದಿರಕ್ಕೆ ಆಧಾರವಾಗಿರುವ ಕಂಬಗಳ ಹತ್ತಿರ ನನ್ನನ್ನು ಕರೆದುಕೊಂಡು ಹೋಗು. ನಾನು ಅವುಗಳಿಗೆ ಒರಗಿಕೊಳ್ಳುತ್ತೇನೆ” ಎಂದು ಸಂಸೋನನು ಅವನನ್ನು ಕೇಳಿಕೊಂಡನು.


ಔತಣದ ಏಳನೆಯ ದಿವಸದಲ್ಲಿ ರಾಜನು ದ್ರಾಕ್ಷಾರಸ ಕುಡಿದು ಆನಂದಲಹರಿಯಲ್ಲಿದ್ದಾಗ ತನ್ನ ಆಸ್ಥಾನ ಕಂಚುಕಿಯರಾದ ಮೆಹೂಮಾನ್, ಬಿಜತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೀತರ್, ಕರ್ಕಸ್ ಎಂಬ ಏಳು ಮಂದಿಗೆ ಹೋಗಿ ವಷ್ಟಿರಾಣಿಯನ್ನು ತನ್ನ ರಾಜಮುಕುಟವನ್ನು ಧರಿಸಿ ಕರೆತರಲು ಆಜ್ಞಾಪಿಸಿದನು. ವಷ್ಟಿರಾಣಿಯು ಅತ್ಯಂತ ಸುಂದರಿಯಾಗಿದ್ದಳು. ಆಕೆಯ ಸೌಂದರ್ಯವನ್ನು ತನ್ನ ರಾಜ್ಯದ ಅಧಿಕಾರಿಗಳಿಗೆ ತೋರಿಸಬೇಕೆಂಬುದು ಅವನ ಅಪೇಕ್ಷೆಯಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು