Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:26 - ಪರಿಶುದ್ದ ಬೈಬಲ್‌

26 ಒಬ್ಬ ಸೇವಕನು ಸಂಸೋನನ ಕೈಯನ್ನು ಹಿಡಿದುಕೊಂಡಿದ್ದನು. “ಈ ಮಂದಿರಕ್ಕೆ ಆಧಾರವಾಗಿರುವ ಕಂಬಗಳ ಹತ್ತಿರ ನನ್ನನ್ನು ಕರೆದುಕೊಂಡು ಹೋಗು. ನಾನು ಅವುಗಳಿಗೆ ಒರಗಿಕೊಳ್ಳುತ್ತೇನೆ” ಎಂದು ಸಂಸೋನನು ಅವನನ್ನು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ಸಂಸೋನನು ತನ್ನನ್ನು ಕೈಹಿಡಿದು ನಡೆಸುವ ಹುಡುಗನಿಗೆ, “ನನ್ನ ಕೈಗಳನ್ನು ಬಿಡು; ನಾನು ಕೈಯಾಡಿಸಿ ಮನೆಗೆ ಆಧಾರವಾಗಿರುವ ಸ್ತಂಭಗಳನ್ನು ಹುಡುಕಿ ಅವುಗಳಿಗೆ ಸ್ವಲ್ಪ ಒರಗಿಕೊಳ್ಳುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆಗ ಸಂಸೋನನು ತನ್ನನ್ನು ಕೈಹಿಡಿದು ನಡೆಸುತ್ತಿದ್ದ ಹುಡುಗನಿಗೆ, “ನನ್ನ ಕೈಗಳನ್ನು ಬಿಡು; ನಾನು ಕೈಯಾಡಿಸಿ ಮನೆಗೆ ಆಧಾರವಾಗಿರುವ ಸ್ತಂಭಗಳನ್ನು ಹುಡುಕಿ ಅವುಗಳಿಗೆ ಸ್ವಲ್ಪ ಒರಗಿಕೊಳ್ಳುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಗ ಸಂಸೋನನು ತನ್ನನ್ನು ಕೈಹಿಡಿದು ನಡಿಸುವ ಹುಡುಗನಿಗೆ - ನನ್ನ ಕೈಗಳನ್ನು ಬಿಡು; ನಾನು ಕೈಯಾಡಿಸಿ ಮನೆಗೆ ಆಧಾರವಾಗಿರುವ ಸ್ತಂಭಗಳನ್ನು ಹುಡುಕಿ ಅವುಗಳಿಗೆ ಸ್ವಲ್ಪ ಒರಗಿಕೊಳ್ಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದರೆ ಸಂಸೋನನು ತನ್ನ ಕೈಹಿಡಿದ ಹುಡುಗನಿಗೆ, “ಈ ಕಟ್ಟಡದ ಆಧಾರ ಸ್ತಂಭಗಳನ್ನು ನಾನು ಸ್ಪರ್ಶಿಸಿ, ಅವುಗಳ ಮೇಲೆ ಆತುಕೊಳ್ಳುವ ಹಾಗೆ ನನ್ನನ್ನು ಬಿಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:26
2 ತಿಳಿವುಗಳ ಹೋಲಿಕೆ  

ಆ ಉತ್ಸವದಲ್ಲಿ ಜನರು ಸಂತೋಷವಾಗಿದ್ದರು. ಅವರು, “ಸಂಸೋನನನ್ನು ಕರೆದು ತನ್ನಿ. ನಾವು ಅವನ ತಮಾಷೆಯನ್ನು ನೋಡಬೇಕು” ಎಂದರು. ಅವರು ಸಂಸೋನನನ್ನು ಸೆರೆಮನೆಯಿಂದ ತಂದು ಅವನನ್ನು ಅಪಹಾಸ್ಯ ಮಾಡಿದರು. ಸಂಸೋನನನ್ನು ಅವರ ದೇವರಾದ ದಾಗೋನನ ಮಂದಿರದಲ್ಲಿ ಎರಡು ಕಂಬಗಳ ಮಧ್ಯದಲ್ಲಿ ನಿಲ್ಲಿಸಿದರು.


ಆ ಮಂದಿರದಲ್ಲಿ ಗಂಡಸರು ಹೆಂಗಸರು ಕಿಕ್ಕಿರಿದು ನೆರೆದಿದ್ದರು. ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಅಲ್ಲಿದ್ದರು. ಮಾಳಿಗೆಯ ಮೇಲೆ ಸುಮಾರು ಮೂರು ಸಾವಿರ ಹೆಂಗಸರು ಮತ್ತು ಗಂಡಸರು ಇದ್ದರು. ಅವರು ನಕ್ಕು ಸಂಸೋನನನ್ನು ಅಪಹಾಸ್ಯ ಮಾಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು