Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:30 - ಪರಿಶುದ್ದ ಬೈಬಲ್‌

30 “ಈ ಫಿಲಿಷ್ಟಿಯರ ಜೊತೆ ನಾನೂ ಸಾಯಲು ಸಿದ್ಧ” ಎಂದು ಹೇಳಿ ಆ ಎರಡೂ ಕಂಬಗಳನ್ನು ತನ್ನ ಎಲ್ಲಾ ಶಕ್ತಿಯಿಂದ ಎಳೆಯುತ್ತಾ ಬಾಗಿದನು. ಆಗ ಮಂದಿರವು ಅಧಿಪತಿಗಳ ಮೇಲೂ ಅಲ್ಲಿದ್ದ ಜನರೆಲ್ಲರ ಮೇಲೂ ಕುಸಿದು ಬಿತ್ತು. ಈ ಪ್ರಕಾರ ಸಂಸೋನನು ತಾನು ಜೀವದಿಂದಿದ್ದಾಗ ಕೊಂದ ಜನರಿಗಿಂತ ಹೆಚ್ಚು ಜನರನ್ನು ತಾನು ಸಾಯುವಾಗ ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 “ನಾನೂ ಫಿಲಿಷ್ಟಿಯರ ಸಂಗಡ ಸಾಯುವೆನು” ಎಂದು ಹೇಳಿ ಬಲವಾಗಿ ಬಾಗಿಕೊಂಡನು. ಆಗ ಅ ಕಟ್ಟಡವು ಅಧಿಪತಿಗಳ ಮೇಲೆಯೂ ಅಲ್ಲಿ ಬಂದಿದ್ದ ಎಲ್ಲಾ ಜನರ ಮೇಲೆಯೂ ಬಿದ್ದಿತು. ಅವನು ಜೀವದಿಂದಿದ್ದಾಗ ಕೊಂದುಹಾಕಿದವರಿಗಿಂತ ಸಾಯುವಾಗ ಕೊಂದವರ ಸಂಖ್ಯೆಯೇ ಹೆಚ್ಚಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 “ನಾನು ಫಿಲಿಷ್ಟಿಯರ ಸಂಗಡ ಸಾಯುವೆನು,” ಎಂದು ಹೇಳಿ ಬಲವಾಗಿ ಬಾಗಿಕೊಂಡನು. ಆ ಮನೆಯು ಅಧಿಪತಿಗಳ ಮೇಲೂ ಅಲ್ಲಿ ಬಂದಿದ್ದ ಎಲ್ಲಾ ಜನರ ಮೇಲೂ ಬಿದ್ದಿತು. ಅವನು ಜೀವದಿಂದಿದ್ದಾಗ ಕೊಂದು ಹಾಕಿದವರಿಗಿಂತ ಸಾಯುವಾಗ ಕೊಂದವರ ಸಂಖ್ಯೆಯೇ ಹೆಚ್ಚಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅವುಗಳನ್ನು ಒತ್ತಿ ನಾನೂ ಫಿಲಿಷ್ಟಿಯರ ಸಂಗಡ ಸಾಯುವೆನು ಎಂದು ಹೇಳಿ ಬಲವಾಗಿ ಬಾಗಿಕೊಳ್ಳಲು ಮನೆಯು ಅಧಿಪತಿಗಳ ಮೇಲೆಯೂ ಅಲ್ಲಿ ಬಂದಿದ್ದ ಎಲ್ಲಾ ಜನರ ಮೇಲೆಯೂ ಬಿದ್ದಿತು. ಅವನು ಜೀವದಿಂದಿದ್ದಾಗ ಕೊಂದುಹಾಕಿದವರಿಗಿಂತ ಸಾಯುವಾಗ ಕೊಂದವರ ಸಂಖ್ಯೆಯೇ ಹೆಚ್ಚಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 “ನನ್ನ ಪ್ರಾಣವು ಫಿಲಿಷ್ಟಿಯರ ಸಂಗಡ ಸಾಯಲಿ,” ಎಂದು ಹೇಳಿ ತನ್ನ ಶಕ್ತಿಯಿದ್ದ ಮಟ್ಟಿಗೂ ಬಾಗಿದನು. ಆಗ ಮನೆಯು ಅಧಿಪತಿಗಳ ಮೇಲೆಯೂ, ಅದರಲ್ಲಿದ್ದ ಎಲ್ಲಾ ಜನರ ಮೇಲೆಯೂ ಬಿತ್ತು. ಹೀಗೆ ಸಂಸೋನನು ಬದುಕಿದ್ದಾಗ ಕೊಂದ ಜನರಿಗಿಂತಲೂ ಮರಣಹೊಂದುವಾಗ ಕೊಂದ ಜನರ ಸಂಖ್ಯೆಯೇ ಹೆಚ್ಚಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:30
21 ತಿಳಿವುಗಳ ಹೋಲಿಕೆ  

ಆತನು ಮನುಷ್ಯನಾಗಿ ಜೀವಿಸುತ್ತಿದ್ದಾಗ ತನ್ನನ್ನು ತಗ್ಗಿಸಿಕೊಂಡು ಮರಣವನ್ನೂ ಕಡೆಗಣಿಸಿ ದೇವರಿಗೆ ಸಂಪೂರ್ಣ ವಿಧೇಯನಾಗಿ, ಶಿಲುಬೆಯ ಮೇಲೆ ಪ್ರಾಣವನ್ನೇ ಕೊಟ್ಟನು.


ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು. ನನಗಾಗಿ ತನ್ನ ಪ್ರಾಣವನ್ನು ಕೊಡುವ ಪ್ರತಿಯೊಬ್ಬನೂ ಅದನ್ನು ಉಳಿಸಿಕೊಳ್ಳುವನು.


ಪ್ರಭುವು ಪ್ರತ್ಯಕ್ಷನಾಗುವ ದಿನವು ರಾತ್ರಿಕಾಲದಲ್ಲಿ ಕಳ್ಳನು ಬರುವಂತೆ ಇದ್ದಕ್ಕಿದ್ದಂತೆ ಬರುತ್ತದೆ ಎಂಬುದು ನಿಮಗೆಲ್ಲ ಚೆನ್ನಾಗಿ ತಿಳಿದಿದೆ.


ದೇವರು ತನಗೆ ವಿರೋಧವಾಗಿದ್ದ ದೊರೆತನಗಳನ್ನೂ ಅಧಿಕಾರಗಳನ್ನೂ ಸೋಲಿಸಿ, ಅವುಗಳನ್ನು ನಿರಾಯುಧರನ್ನಾಗಿ ಮಾಡಿ ಶಿಲುಬೆಯ ವಿಜಯೋತ್ಸವದಲ್ಲಿ ಅವುಗಳನ್ನು ಇಡೀ ಲೋಕದ ಎದುರಿನಲ್ಲಿ ಸೆರೆಯಾಳುಗಳನ್ನಾಗಿ ಮೆರವಣಿಗೆ ಮಾಡಿದನು.


ಅವನು ಕ್ರಿಸ್ತನ ಕೆಲಸಕ್ಕಾಗಿ ಬಹುಮಟ್ಟಿಗೆ ತನ್ನ ಪ್ರಾಣವನ್ನೇ ಕೊಟ್ಟದ್ದರಿಂದ ಅವನಿಗೆ ಮಾನ್ಯತೆ ದೊರೆಯಬೇಕು. ನನಗೆ ಸಹಾಯಮಾಡಲು ಅವನು ತನ್ನ ಪ್ರಾಣವನ್ನೇ ಅಪಾಯಕ್ಕೆ ಈಡುಮಾಡಿಕೊಂಡನು. ಈ ರೀತಿಯ ಸಹಾಯ ಮಾಡಲು ನಿಮಗೆ ಸಾಧ್ಯವಾಗಲಿಲ್ಲ.


ನೀವು ನಿಮ್ಮ ಜೀವಿತಗಳನ್ನು ದೇವರ ಸೇವೆಗಾಗಿ ಯಜ್ಞದೋಪಾದಿಯಲ್ಲಿ ಅರ್ಪಿಸಿಕೊಳ್ಳಲು ನಿಮ್ಮ ನಂಬಿಕೆಯು ನಿಮ್ಮನ್ನು ಪ್ರೇರೇಪಿಸುತ್ತದೆ. ಒಂದುವೇಳೆ, ನಿಮ್ಮ ಯಜ್ಞದೊಡನೆ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ಸಂತೋಷಿಸುತ್ತೇನೆ, ನಿಮ್ಮೆಲ್ಲರೊಂದಿಗೆ ಸಂತೋಷಿಸುತ್ತೇನೆ.


ಆದರೆ ಪೌಲನು, “ನೀವು ಯಾಕೆ ಅಳುತ್ತಿರುವಿರಿ? ನೀವು ನನಗೆ ಬಹು ದುಃಖವನ್ನು ಯಾಕೆ ಉಂಟು ಮಾಡುತ್ತಿದ್ದೀರಿ? ನಾನು ಜೆರುಸಲೇಮಿನಲ್ಲಿ ಬಂಧಿಸಲ್ಪಡುವುದಕ್ಕಲ್ಲದೆ ಪ್ರಭು ಯೇಸುವಿನ ಹೆಸರಿಗಾಗಿ ಸಾಯುವುದಕ್ಕೂ ಸಿದ್ಧನಾಗಿದ್ದೇನೆ!” ಎಂದು ಹೇಳಿದನು.


ನಾನು ನನ್ನ ಸ್ವಂತ ಪ್ರಾಣದ ಬಗ್ಗೆ ಚಿಂತಿಸುವುದಿಲ್ಲ. ಪ್ರಭುವಾದ ಯೇಸು ನನಗೆ ಕೊಟ್ಟಿರುವ ಕೆಲಸವನ್ನು ಪೂರೈಸುವುದೇ ನನಗೆ ಅತ್ಯಂತ ಮುಖ್ಯವಾಗಿದೆ. ದೇವರ ಕೃಪೆಯ ವಿಷಯವಾದ ಸುವಾರ್ತೆಯ ಬಗ್ಗೆ ಸಾಕ್ಷಿ ನೀಡುವುದೇ ನನ್ನ ಕೆಲಸವಾಗಿದೆ. ಆ ಕೆಲಸವನ್ನು ಮಾಡಿ ಪೂರೈಸುವುದೇ ನನ್ನ ಅಪೇಕ್ಷೆಯಾಗಿದೆ.


ಮನುಷ್ಯನಿಗೆ ಮುಂದೆ ಏನಾಗುವುದೋ ತಿಳಿಯದು. ಬಲೆಯಲ್ಲಿ ಸಿಕ್ಕಿಕೊಂಡಿರುವ ಮೀನಿನಂತೆಯೂ ಬೋನಿನಲ್ಲಿ ಸಿಕ್ಕಿಕೊಂಡ ಪಕ್ಷಿಯಂತೆಯೂ ಮನುಷ್ಯನು ತನಗೆ ಸಂಭವಿಸುವ ಕೇಡುಗಳಿಗೆ ಗುರಿಯಾಗುವನು.


ಇನ್ನೆಷ್ಟರವರೆಗೆ ನೀವು ನನ್ನ ಮೇಲೆ ಆಕ್ರಮಣ ಮಾಡುವಿರಿ? ನಾನು ಬಾಗಿದ ಗೋಡೆಯಂತೆಯೂ ಬೀಳಲಿರುವ ಪ್ರಾಕಾರದಂತೆಯೂ ಇದ್ದೇನೆ.


ಆತನು ದುಷ್ಟರಿಗೆ ತೊಂದರೆಯನ್ನೂ ನಾಶನವನ್ನೂ ತಪ್ಪಿತಸ್ಥರಿಗೆ ವಿಪತ್ತನ್ನೂ ಕಳುಹಿಸುವನು.


ನೀನು ಮತ್ತು ಸ್ತ್ರೀಯು ಒಬ್ಬರಿಗೊಬ್ಬರು ವೈರಿಗಳಾಗಿರುವಂತೆ ಮಾಡುವೆನು. ನಿನ್ನ ಮಕ್ಕಳು ಮತ್ತು ಅವಳ ಮಕ್ಕಳು ಒಬ್ಬರಿಗೊಬ್ಬರು ವೈರಿಗಳಾಗಿರುವರು. ನೀನು ಆಕೆಯ ಮಗನ ಪಾದವನ್ನು ಕಚ್ಚುವೆ. ಆದರೆ ಅವನು ನಿನ್ನ ತಲೆಯನ್ನು ಜಜ್ಜಿ ಹಾಕುವನು” ಎಂದನು.


ಸಂಸೋನನು ಸತ್ತಕತ್ತೆಯ ದವಡೇ ಎಲುಬನ್ನು ಕಂಡನು. ಅವನು ಆ ದವಡೇ ಎಲುಬನ್ನು ತೆಗೆದುಕೊಂಡು ಅದರಿಂದ ಒಂದು ಸಾವಿರ ಫಿಲಿಷ್ಟಿಯರನ್ನು ಕೊಂದುಹಾಕಿದನು.


ಅವರ ಮೇಲೆ ಆಕ್ರಮಣ ಮಾಡಿ ಅವರಲ್ಲಿ ಅನೇಕರನ್ನು ಕೊಂದುಹಾಕಿದನು. ಆಮೇಲೆ ಅವನು ಹೋಗಿ ಒಂದು ಗುಹೆಯಲ್ಲಿ ಇದ್ದುಬಿಟ್ಟನು. ಆ ಗುಹೆಯು ಏಟಾಮಿನ ಬಂಡೆಯ ಬಳಿಯಲ್ಲಿತ್ತು.


ಸಂಸೋನನು ಬಹಳ ಕೋಪಗೊಂಡನು. ಯೆಹೋವನ ಆತ್ಮವು ಸಂಸೋನನ ಮೇಲೆ ಪ್ರಬಲವಾಗಿ ಬಂತು. ಅವನು ಅಷ್ಕೆಲೋನ್ ನಗರಕ್ಕೆ ಧಾವಿಸಿದನು. ಆ ನಗರದಲ್ಲಿ ಅವನು ಮೂವತ್ತು ಜನ ಫಿಲಿಷ್ಟಿಯರನ್ನು ಕೊಂದನು. ಆಮೇಲೆ ಅವನು ಹೆಣಗಳ ಮೇಲಿನ ಎಲ್ಲ ಬಟ್ಟೆಗಳನ್ನೂ ಸ್ವತ್ತನ್ನೂ ಸುಲಿದುಕೊಂಡನು. ಆ ಬಟ್ಟೆಗಳನ್ನು ತಂದು ಒಗಟಿನ ಅರ್ಥ ಹೇಳಿದ ಜನರಿಗೆ ಕೊಟ್ಟನು. ಬಳಿಕ ಅವನು ತನ್ನ ತಂದೆಯ ಮನೆಗೆ ಹೋದನು.


ಆಮೇಲೆ ಸಂಸೋನನು ಇಡೀ ಮಂದಿರಕ್ಕೆ ಆಧಾರವಾಗಿದ್ದ ಎರಡು ಕಂಬಗಳ ಮಧ್ಯದಲ್ಲಿ ನಿಂತುಕೊಂಡನು. ಒಂದು ಕಂಬವನ್ನು ಬಲಗೈಯಿಂದಲೂ ಇನ್ನೊಂದು ಕಂಬವನ್ನು ಎಡಗೈಯಿಂದಲೂ ಹಿಡಿದು,


ಸಂಸೋನನ ಸಹೋದರರು ಮತ್ತು ಅವನ ತಂದೆಯ ಕುಟುಂಬದವರೆಲ್ಲರು ಬಂದು ಅವನ ದೇಹವನ್ನು ತೆಗೆದುಕೊಂಡು ಹೋಗಿ ಅವನ ತಂದೆಯ ಸಮಾಧಿಯಲ್ಲಿ ಹೂಳಿಟ್ಟರು. ಅವನ ತಂದೆಯ ಹೆಸರು ಮಾನೋಹ. ಆ ಸಮಾಧಿಯು ಚೊರ್ಗಕ್ಕೂ ಮತ್ತು ಎಷ್ಟಾವೋಲಿಗೂ ಮಧ್ಯದಲ್ಲಿದೆ. ಸಂಸೋನನು ಇಪ್ಪತ್ತು ವರ್ಷ ಇಸ್ರೇಲರ ನ್ಯಾಯಾಧೀಶನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು